Budget Session 2026 | ಮೇಲ್ಮನೆಯಲ್ಲಿ ‘ಇವ ನಮ್ಮವ ಇವ ನಮ್ಮವ ವಿಧೇಯಕ’ ಅಂಗೀಕಾರ

ಬೆಂಗಳೂರು : ಮರ್ಯಾದೆಗೇಡು ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ರೂಪಿಸಿದ ‘ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕವನ್ನು ಮೇಲ್ಮನೆಯಲ್ಲಿ ಅಂಗೀಕಾರ ಮಾಡಲಾಯಿತು.
ಸೋಮವಾರ ಪರಿಷತ್ತಿನ ಕಲಾಪದ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ವಿಧೇಯಕವನ್ನು ಮಂಡಿಸಿದರು. ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ವಿಧೇಯಕದ ಬಗ್ಗೆ ಚರ್ಚೆ ನಡೆಯಿತು. ನಂತರ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಧ್ವನಿ ಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು.
Next Story





