Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. MLC ಭೀಮರಾವ್ ಪಾಟೀಲ್‍ಗೆ ನಾಲ್ಕೂವರೆ...

MLC ಭೀಮರಾವ್ ಪಾಟೀಲ್‍ಗೆ ನಾಲ್ಕೂವರೆ ವರ್ಷದಿಂದ ಕಚೇರಿ ನೀಡದ ಆರೋಪ: ಸಭಾಪತಿ ಕಚೇರಿಗೆ ಹಾಜರಾಗಲು ಬೀದರ್ ಡಿಸಿಗೆ ಹೊರಟ್ಟಿ ಆದೇಶ

ವಾರ್ತಾಭಾರತಿವಾರ್ತಾಭಾರತಿ25 March 2026 8:39 PM IST
share
MLC ಭೀಮರಾವ್ ಪಾಟೀಲ್‍ಗೆ ನಾಲ್ಕೂವರೆ ವರ್ಷದಿಂದ ಕಚೇರಿ ನೀಡದ ಆರೋಪ: ಸಭಾಪತಿ ಕಚೇರಿಗೆ ಹಾಜರಾಗಲು ಬೀದರ್ ಡಿಸಿಗೆ ಹೊರಟ್ಟಿ ಆದೇಶ

ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷ ಕಳೆದರೂ ಕಾಂಗ್ರೆಸ್ ಸದಸ್ಯ ಭೀಮರಾವ್ ಪಾಟೀಲ್ ಅವರಿಗೆ ಬೀದರ್ ಜಿಲ್ಲಾಧಿಕಾರಿ ಕಚೇರಿ ನೀಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಸದನದಲ್ಲಿ ಆಕ್ಷೇಪಿಸಿದರು.

ಬುಧವಾರ ವಿಧಾನಪರಿಷತ್ತಿನ ಕಲಾಪ ಆರಂಭವಾಗುತ್ತಿದ್ದಂತೆ ಪ್ರಸ್ತಾಪಿಸಿದ ಪುಟ್ಟಣ್ಣ, ಭೀಮರಾವ್ ಅವರು ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷವಾದರೂ ಬೀದರ್ ಜಿಲ್ಲಾಧಿಕಾರಿಗಳು ಕಚೇರಿ ನೀಡಿಲ್ಲ. ಹಕ್ಕು ಭಾದ್ಯತಾ ಸಮಿತಿಯಿಂದ ಶಿಫಾರಸು ಮಾಡಿದರೂ ಈ ಬಗ್ಗೆ ಜಿಲ್ಲಾಧಿಕಾರಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.

2023ರಲ್ಲಿ ಸಭಾಪತಿ ಕಚೇರಿಯಿಂದ ಪತ್ರ ಬರೆದು ಭೀಮರಾವ್ ಪಾಟೀಲ್ ಅವರಿಗೆ ಕಚೇರಿ ನೀಡುವಂತೆ ತಿಳಿಸಲಾಗಿದೆ. ಅಲ್ಲದೇ, ಬೀದರ್‍ನಲ್ಲಿಯೇ ನಡೆದ ಹಕ್ಕು ಭಾದ್ಯತಾ ಸಮಿತಿ ಸಭೆ ಸೇರಿ ಪಾಟೀಲ್ ಅವರಿಗೆ ಕಚೇರಿ ನೀಡುವಂತೆ ಸೂಚನೆ ನೀಡಿತ್ತು. ಆದರೂ ಭೀಮರಾವ್ ಪಾಟೀಲ್ ಅವರಿಗೆ ಈವರೆಗೆ ಕಚೇರಿ ಒದಗಿಸಿಲ್ಲ. ಕೂಡಲೇ ಜಿಲ್ಲಾಧಿಕಾರಿಗೆ ಸಮನ್ಸ್ ನೀಡಿ ಸದನಕ್ಕೆ ಕರೆಸಿ ಕಟಕಟೆಗೆ ನಿಲ್ಲಿಸಿ ಛೀಮಾರಿ ಹಾಕಿ ಶಿಕ್ಷೆ ನೀಡಬೇಕು ಎಂದು ಪುಟ್ಟಣ್ಣ ಒತ್ತಾಯಿಸಿದರು.

ಬಿಜೆಪಿ ಸದಸ್ಯ ಸುನೀಲ್ ವಲ್ಯಾಪುರ ಮಾತನಾಡಿ, ಭೀಮರಾವ್ ಪಾಟೀಲ್ ಅವರಿಗೆ ಕಚೇರಿ ನೀಡದಿರುವುದು ನಾಚಿಕೆಗೇಡಿನ ಸಂಗತಿ. ಕೂಡಲೇ ಸಂಬಂಧಪಟ್ಟವರನ್ನು ಕರೆಯಿಸಿ ಛೀಮಾರಿ ಹಾಕಿ ಎಂದು ಒತ್ತಾಯಿಸಿದರು. ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್ ಅವರು, ಭೀಮರಾವ್ ಪಾಟೀಲ್ ಅವರಿಗೆ ನಾಲ್ಕು ವರ್ಷ ಕಳೆದರೂ ಕಚೇರಿ ನೀಡದಿರುವುದು ಸದನದ ಸದಸ್ಯರಿಗೆ ಮಾಡಿರುವ ಅಪಮಾನ, ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದರು.

ಸದಸ್ಯ ಭೀಮರಾವ್ ಪಾಟೀಲ್ ಮಾತನಾಡಿ, ನಾಲ್ಕೂವರೆ ವರ್ಷದಿಂದ ಜನರ ಕೆಲಸ ಮಾಡಲು ಅನುಕೂಲವಾಗುವಂತೆ ಬೀದರ್‍ನ ಔರಾದ್ ತಾಲೂಕಿನಲ್ಲಿ ಕಚೇರಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಇದು ನನಗೆ ಹಾಗೂ ಸದನಕ್ಕೆ ಮಾಡಿದ ಅಪಮಾನ ಎಂದು ನೋವು ಹೊರಹಾಕಿದರು.

ಸಭಾನಾಯಕ ಎನ್.ಎಸ್.ಭೋಸರಾಜ್ ಮಾತನಾಡಿ, ಮುಖ್ಯ ಕಾರ್ಯದರ್ಶಿಗಳ ಮುಖಾಂತರ ಜಿಲ್ಲಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದರು. ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಬೀದರ್ ಜಿಲ್ಲಾಧಿಕಾರಿಗಳು ಗುರುವಾರ(ಮಾ.26) ತಮ್ಮ ಕಚೇರಿಯಲ್ಲಿ ಖುದ್ದು ಹಾಜರಿರಬೇಕು ಎಂದು ಆದೇಶಿಸಿದರು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X