Budget Session 2026 | ಮೇಲ್ಮನೆಯಲ್ಲಿ ‘ಕರ್ನಾಟಕ ಧನ ವಿನಿಯೋಗ ವಿಧೇಯಕ-2026' ಅಂಗೀಕಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಪರಿಷತ್ತಿನಲ್ಲಿ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಧನ ವಿನಿಯೋಗ ವಿಧೇಯಕ-2026 ಅನ್ನು ಮಂಡಿಸಿದರು. ನಂತರ ಸದನವು ಈ ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರ ನೀಡಿತು.
ಈ ಮೂಲಕ 2026-27ನೇ ಹಣಕಾಸು ವರ್ಷದ ಸರಕಾರದ ಒಟ್ಟು ವೆಚ್ಚಗಳಿಗೆ ಅನುಮೋದನೆ ದೊರೆತಂತಾಗಿದೆ.
ಉದ್ದೇಶ-ಕಾರಣಗಳು: 2026-27ನೇ ಹಣಕಾಸು ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ರಾಜ್ಯದ ಸಂಚಿತ ನಿಧಿಯೊಳಗಿನಿಂದ ವಿನಿಯೋಗಿಸಲು ಸಂವಿಧಾನದ 204ನೇ ಅನುಚ್ಛೇದದ ಉಪಬಂಧಗಳಿಗನುಸಾರವಾಗಿ ಈ ವಿಧೇಯಕವನ್ನು ಮಂಡಿಸಲಾಯಿತು. ನಂತರ ವಿಧೇಯಕವನ್ನು ಅಂಗೀಕರಿಸಲಾಯಿತು.
Next Story




