Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವ್ಯಾಟ್ಸಾಪ್‌ ಯೂನಿವರ್ಸಿಟಿಯಿಂದ ಜ್ಞಾನ...

ವ್ಯಾಟ್ಸಾಪ್‌ ಯೂನಿವರ್ಸಿಟಿಯಿಂದ ಜ್ಞಾನ ವಿರೋಧಿ ಸಮಾಜ ನಿರ್ಮಾಣ: ಪ್ರೊ.ರಹಮತ್ ತರೀಕೆರೆ

ವಾರ್ತಾಭಾರತಿವಾರ್ತಾಭಾರತಿ12 Aug 2023 12:09 AM IST
share
ವ್ಯಾಟ್ಸಾಪ್‌ ಯೂನಿವರ್ಸಿಟಿಯಿಂದ ಜ್ಞಾನ ವಿರೋಧಿ ಸಮಾಜ ನಿರ್ಮಾಣ: ಪ್ರೊ.ರಹಮತ್ ತರೀಕೆರೆ

ಮೈಸೂರು,ಆ.11: ಭಾರತದಲ್ಲಿ ಬಹಳ ಧರ್ಮಗಳು ಇರುವುದು ಭಾಗ್ಯ. ಅವುಗಳನ್ನು ಸಂಭಾಳಿಸದೇ ಇರುವುದು ದೌರ್ಭಾಗ್ಯ ಎಂದು ಸಂಸ್ಕೃತಿ ಚಿಂತಕ ಪ್ರೊ.ರಹಮತ್‌ ತರೀಕೆರೆ ಅಭಿಪ್ರಾಯಪಟ್ಟರು.

ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರ, ಸಕಾಲ ಸ್ಪಂದನ ಸಹಯೋಗದಲ್ಲಿ ಇಎಂಆರ್‌ಸಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ಚಳವಳಿಯ ಆಶಯಗಳು ಮತ್ತು ಸಮಕಾಲೀನ ಸವಾಲುಗಳು ವಿಚಾರ ಮಂಥನಕ್ಕೆ ಚಾಲನೆ ನೀಡಿ ಮಾತನಾಡಿದರು.

1992ರ ಬಾಬರಿ ಮಸೀದಿ ಧ್ವಂಸ, 2002 ಗುಜರಾತ್‌ ಗಲಭೆ, 2023 ಮಣಿಪುರ ಸಂಘರ್ಷಗಳು ಆಳವಾದ ಗಾಯಗಳು. ಇವು ದೇಶವನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಹೇಳಿದರು.

ವ್ಯಾಟ್ಸಾಪ್‌ ಯೂನಿವರ್ಸಿಟಿಯಿಂದ 20-30 ವರ್ಷಗಳಲ್ಲಿ ಜ್ಞಾನ ವಿರೋಧಿ ಸಮಾಜ ನಿರ್ಮಾಣವಾಗಲಿದೆ. ನಾಡು ಕಟ್ಟಲು ಪ್ರಯತ್ನಿಸಿದವರನ್ನು ವಿರೋಧಿಸಲು ಪಟ್ಟಿ ಮಾಡಲಾಗುತ್ತಿದೆ. ಭಿನ್ನಮತಗಳನ್ನು ಸಂವಾದದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದರು.

ಏಕಾಭಿಪ್ರಾಯದಲ್ಲಿ ದೇಶ ಕಟ್ಟಲಾಗುವುದಿಲ್ಲ. ಗಾಂಧೀಜಿ ಭಿನ್ನಮತದ ಮೂಲಕ ದೇಶವನ್ನು ಕಟ್ಟಿದವರು. ನೆಹರೂ, ಟ್ಯಾಗೋರ್‌, ಅಂಬೇಡ್ಕರ್‌ ಅವರೊಂದಿಗೆ ತಾತ್ವಿಕವಾಗಿ ಜಗಳ ಮಾಡಿದರು. ಇವತ್ತು ಸಂವಾದ ಸಂಸ್ಕೃತಿ ಅಳಿದು ಹೋಗುತ್ತಿದೆ ಎಂದು ತಿಳಿಸಿದರು.

ದೇಶದ ಶೇ. 85 ಮಾಧ್ಯಮ ಮಾರಾಟವಾಗಿದೆ. ಗಾಂಧಿ-ಅಂಬೇಡ್ಕರ್‌ ಪತ್ರಿಕೋದ್ಯಮ ಏನಾಗಿರಬೇಕು ಎಂದು ದಿಕ್ಸೂಚಿ ಕೊಟ್ಟಿದ್ದಾರೆ. ಅದನ್ನು ಮುಂದುವರಿಸಬೇಕಿದೆ ಎಂದು ಹೇಳಿದರು.

ಗಾಂಧೀಜಿ ಎಲ್ಲ ಭಾಷೆಯಲ್ಲಿ ಸಹಿ ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ತಮ 25ನೇ ವರ್ಷದ ಆಡಳಿತದ ನೆನಪಿನಲ್ಲಿ ಕನ್ನಡ, ಇಂಗ್ಲಿಷ್‌ನಲ್ಲಿ ಸ್ವಹಸ್ತಕ್ಷರದಲ್ಲಿ ಪತ್ರ ಬಿಡುಗಡೆ ಮಾಡುತ್ತಾರೆ. ಇಂಥ ಒಳಗೊಳ್ಳುವ ವಿಷಯಗಳು ನಮಗೆ ಮುಖ್ಯವಾಗಬೇಕು.

ಏಕರೂಪಿ ಹೋರಾಟದಿಂದ ಬದಲಾವಣೆ ಇಲ್ಲ. ಒಂದು ಸಿದ್ಧಾಂತ ನಮನ್ನು ಬಿಡುಗಡೆ ಮಾಡುವುದಿಲ್ಲ. ಸಂವಾದ ಪರಸ್ಪರ ಕೊಡುಕೊಳ್ಳುವಿಕೆಯಿಂದ ಬಿಡುಗಡೆ ಸಾಧ್ಯವಿದೆ. ಚಳವಳಿ ಛಿದ್ರೀಕರಣ, ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ನಡೆಯುತ್ತಿದೆ ಎಂದರು.

ಪ್ರಸ್ತುತ ಶಿಕ್ಷಣ ಮತ್ತು ವಿದ್ಯಾಭ್ಯಾಸವನ್ನು ಮಾರಾಟಕ್ಕೆ ಇಟ್ಟಿದ್ದೇವೆ. ಕೋವಿಡ್‌ ಕಾಲದಲ್ಲಿಯೇ ಬಿಲೇನಿಯರ್‌ಗಳ ಸಂಖ್ಯೆ ಏರಿಕೆಯಾಗಿದೆ. ಚುನಾಯಿತ ಪ್ರತಿನಿಧಿಗಳು ಬಹಿರಂಗವಾಗಿ ಸಂವಿಧಾನ ಬದಲಿಸುವ ಮಾತುಗಳನ್ನು ಆಡುತ್ತಿದ್ದಾರೆ. ಇದನ್ನು ತಡೆಯುವುದು ಹೇಗೆ ಎಂದು ಆಲೋಚಿಸಬೇಕಿದೆ. ಮಹಿಳೆ, ದಲಿತ, ಮುಸ್ಲಿಂ ಬೀದಿಯಲ್ಲಿ ಒಡೆತ ತಿನ್ನುತ್ತಿದ್ದಾರೆ. ಸಂವಿಧಾನ ಪ್ರಜಾಪ್ರಭುತ್ವ ಉಳಿಸುವ ಚಳವಳಿ ಆರಂಭಿಸಬೇಕಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಸಚಿವೆ ಪ್ರೊ.ವಿ.ಆರ್‌.ಶೈಲಜಾ, ಮಣಿಪುರ ಸಂಘರ್ಷ, ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ಘಟನೆಗಳು ನಾವು ಬಹಳ ಹಿಂದೆ ಇದ್ದೇವೆ. ದ್ವೀಪಗಳಾಗಿ ಬೆಳೆಯುತ್ತಿದ್ದೇವೆ ಅನಿಸುತ್ತದೆ. ಆಲೋಚನೆ ಮತ್ತು ಆಚರಣೆ ಒಂದಾಗಬೇಕು. ಕಂದಕ ದೊಡ್ಡದಾಗುತ್ತ ಹೋಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್‌‍.ನರೇಂದ್ರ ಕುಮಾರ್‌, ಸಕಾಲ ಸ್ಪಂದನದ ಪ್ರೊ.ಆರ್‌.ಎಂ. ಚಿಂತಾಮಣಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X