Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಬುರ್ಖಾನ್ ಗ್ರೂಪ್‌ನಿಂದ ಎಐ...

ರಾಜ್ಯದಲ್ಲಿ ಬುರ್ಖಾನ್ ಗ್ರೂಪ್‌ನಿಂದ ಎಐ ಸರ್ವರ್ ಉತ್ಪಾದನೆ, 1,500 ಕೋಟಿ ರೂ. ಹೂಡಿಕೆ : ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ6 Nov 2025 4:51 PM IST
share
ರಾಜ್ಯದಲ್ಲಿ ಬುರ್ಖಾನ್ ಗ್ರೂಪ್‌ನಿಂದ ಎಐ ಸರ್ವರ್ ಉತ್ಪಾದನೆ, 1,500 ಕೋಟಿ ರೂ. ಹೂಡಿಕೆ : ಎಂ.ಬಿ.ಪಾಟೀಲ್‌

ಬೆಂಗಳೂರು : ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬುರ್ಖಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ರಾಜ್ಯದಲ್ಲಿ ಕೃತಕ ಬುದ್ಧಿ ಮತ್ತೆ ತಂತ್ರಜ್ಞಾನ ದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ಎಐ ಸರ್ವರ್ ಗಳ ಉತ್ಪಾದನೆಗೆ 1,500 ಕೋಟಿ ರೂಪಾಯಿ ಬಂಡವಾಳ ಹೂಡಲು ಮುಂದೆ ಬಂದಿದೆ. ಇದು ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ ಉತ್ಪಾದನಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಬುಬುರ್ಖಾನ್ ಸಮೂಹದ ಸಿಇಒ ಶಫಿ ಎಂ ಖಾನ್ ಮತ್ತು ಅವರ ತಂಡದೊಂದಿಗೆ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ವಿಸ್ತೃತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶಿಗ್ಗಾಂವಿ ಶಾಸಕ ಯಾಸಿರ್ ಪಠಾಣ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಕ್ವಾಡ್-ಜೆನ್ ಕಂಪನಿ ಅಧ್ಯಕ್ಷ ಸಿ.ಎಸ್.ರಾವ್ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಚಿವರು, ಡೇಟಾ ಸೆಂಟರ್ ಗಳಲ್ಲಿ ಬಳಕೆಯಾಗುವ ಈ ಸರ್ವರ್ ಗಳಿಗೆ ವಿಪರೀತ ಬೇಡಿಕೆ ಇದ್ದು ಬೇರೆ ಬೇರೆ ದೇಶಗಳಿಗೆ ರಫ್ತು ಕೂಡ ಮಾಡುವುದಾಗಿ ಕಂಪನಿಯವರು ಹೇಳಿದ್ದು, ಅದಕ್ಕೆ ಪೂರ್ಣ ಸಹಕಾರ ನೀಡಲಾಗುವುದು. ಸಹಾಯಧನ ಇತ್ಯಾದಿ ವಿಚಾರಗಳ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಲು ಪ್ರಧಾನ ಕಾರ್ಯದರ್ಶಿ ಅವರಿಗೆ ಸಚಿವರು ಸೂಚಿಸಿದರು.

ಇದಲ್ಲದೆ, ಬುರ್ಖಾನ್ ಸಮೂಹವು ಅತ್ಯಾಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್ ಸ್ವಿಚ್ ಉತ್ಪಾದನೆ ಆರಂಭಿಸುವುದಕ್ಕೂ ಬಯಸಿದೆ. ಇದಕ್ಕಾಗಿ ಅದು ಜಾಗತಿಕ ಮಟ್ಟದಲ್ಲಿ ತನ್ನ ತಾಂತ್ರಿಕ ಪಾಲುದಾರ ಕಂಪನಿಗಳಾದ ಸೂಪರ್-ಮೈಕ್ರೋ, ಗಿಗಾಬೈಟ್ ಮತ್ತು ಸೆರಾ ನೆಟ್ವರ್ಕ್ ಜತೆ ರಾಜ್ಯದಲ್ಲಿ ಬಂಡವಾಳ ಹೂಡಲು ಬಯಸಿದೆ. ಸರಕಾರ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದಿದ್ದಾರೆ.

ಬುರ್ಖಾನ್ ಕಂಪನಿಯ ಹೂಡಿಕೆಯಿಂದ ಸೆಮಿಕಂಡಕ್ಟರ್, ಎಐ ಹಾರ್ಡ್-ವೇರ್ ಮತ್ತು ಆಧುನಿಕ ಎಲೆಕ್ಟ್ರಾನಿಕ್ಸ್ ಕಾರ್ಯಪರಿಸರದ ಬಲವರ್ಧನೆಯಾಗಲಿದೆ. ಅದು ಉತ್ಪಾದನಾ ಪ್ರಕ್ರಿಯೆಯಲ್ಲಿ ರೆಸೊಲ್ಯೂಟ್ ಗ್ರೂಪ್ ಮತ್ತು ಕ್ವಾಡ್-ಜೆನ್ ಕಂಪನಿಗಳ ಸಹಯೋಗ ಹೊಂದಲು ಬಯಸಿದೆ. ಇದರಿಂದ ಸ್ಥಳೀಯವಾಗಿಯೇ ಆರ್ & ಡಿ ಅಭಿವೃದ್ಧಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳೊಂದಿಗೆ ಸಹಭಾಗಿತ್ವ ಕೈಗೂಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಂಪನಿಯು ಭಾರತ ಮತ್ತು ಇಎಂಇಎ ವಲಯಗಳಲ್ಲಿ ತಾನು ಒದಗಿಸಲಿರುವ ಸೇವೆಗಳಿಗೆ ಬೆಂಗಳೂರನ್ನು ಉತ್ಕೃಷ್ಟತಾ ಕೇಂದ್ರವನ್ನಾಗಿ ಮಾಡಿಕೊಳ್ಳಲಿದೆ. ಜತೆಗೆ ರಾಜ್ಯಾದ್ಯಂತ ವಿಶೇಷ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಒಟ್ಟಾರೆಯಾಗಿ ಅದು ನಮ್ಮೊಂದಿಗೆ ಬೃಹತ್ ಕೈಗಾರಿಕೆ, ಐಟಿ-ಬಿಟಿ ಮತ್ತು ಇಎಸ್ಡಿಎಂ ಕ್ಷೇತ್ರಗಳಲ್ಲಿ ಪಾಲುದಾರಿಕೆಯ ಅವಕಾಶಗಳನ್ನು ಪರಿಶೀಲಿಸುತ್ತಿದೆ ಎಂದು ಪಾಟೀಲ್‌ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X