Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ...

ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಪ್ರತಿಪಕ್ಷಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 Nov 2026 7:01 PM IST
share
ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಪ್ರತಿಪಕ್ಷಗಳ ಆಕ್ರೋಶ

ಬೆಂಗಳೂರು : ‘ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆಯನ್ನು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತೀವ್ರವಾಗಿ ಖಂಡಿಸಿದ್ದು, ‘ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ವೈಫಲ್ಯಗಳಿಗೆ ಬಡಜನರ ಮೇಲೆ ಮತ್ತೊಂದು ದರ ಏರಿಕೆಯ ಬರೆ’ ಎಳೆದಿದೆ. ಕಿತ್ಕೊಂಡ್ ತಿನ್ನೋ, ಕಿತ್ತೋದ್ ಕಾಂಗ್ರೆಸ್ ಸರಕಾರ’ ಎಂದು ಬಿಜೆಪಿ ಲೇವಡಿ ಮಾಡಿದೆ.

ಬುಧವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ‘ಹಾಲು, ಮೊಸರು, ವಿದ್ಯುತ್ ದರಗಳನ್ನು ಏರಿಸಿ ಜನರನ್ನು ಸಂಕಷ್ಟಕ್ಕೆ ದೂಡಿರುವ ಈ ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಇನ್ನೂ ತೃಪ್ತಿಯಾದಂತಿಲ್ಲ. ಈಗ ಬಸ್ ದರದ ಸರದಿ. ಬೆಂಗಳೂರಿನಲ್ಲಿ ಕನಿಷ್ಠ ಟಿಕೆಟ್ 6ರೂ.ನಿಂದ 10 ರೂ.ಅಂದರೆ ಸುಮಾರು ಶೇ.67ರಷ್ಟು ಏರಿಕೆ. ಕೆಎಸ್ಸಾರ್ಟಿಸಿಯಲ್ಲಿ ಗರಿಷ್ಠ 9ರೂ.ಏರಿಕೆ, ಒಟ್ಟಾರೆ 4ರಿಂದ 20ರೂ.ಗಳ ವರೆಗೆ ಜನರ ಮೇಲೆ ಹೊರೆ ಹೊರಸಿರುವ ಈ ಸರಕಾರ ತನ್ನ ವೈಫಲ್ಯಗಳನ್ನು ಸರಿಪಡಿಸಿಕೊಳ್ಳುವುದಿರಲಿ, ಕನಿಷ್ಠ ಮಾನವೀಯತೆಯನ್ನೂ ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

‘ದುಡಿಯಲು ಹೊರಡುವ ಕಾರ್ಮಿಕ, ಶಾಲೆ-ಕಾಲೇಜಿಗೆ ಹೋಗುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಆಸ್ಪತ್ರೆಗೆ ಹೊರಡುವ ಬಡ ರೋಗಿಗಳು, ಸಾಮಾನ್ಯ ಜನರು ನಿಮ್ಮ ಕಾಂಗ್ರೆಸ್ ಸರಕಾರದ ಕೆಟ್ಟ ಆರ್ಥಿಕ ನಿರ್ವಹಣೆಗೆ ಬೆಲೆ ತೆರಬೇಕೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ?. ಒಂದೆಡೆ ಗ್ಯಾರಂಟಿಗಳನ್ನು ಕೊಟ್ಟಂತೆ ಮಾಡಿ, ಮತ್ತೊಂದೆಡೆ ಬೆಲೆ ಏರಿಕೆಯ ಮೂಲಕ ಎರಡೂ ಕೈಗಳಿಂದ ಜನರ ಜೇಬು ದೋಚುವುದೇ ಈ ಸರಕಾರದ ಆಡಳಿತ ಮಂತ್ರವಾಗಿದೆ. ಹಾಲಿನ ದರ ಏರಿಕೆಯ ಬೆನ್ನಲ್ಲೇ ಬಸ್ ಪ್ರಯಾಣವನ್ನೂ ದುಬಾರಿಯಾಗಿಸಿರುವ ಸರಕಾರ, ಜನರ ದಿನನಿತ್ಯದ ಬದುಕನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಅವರು ದೂರಿದ್ದಾರೆ.

ಈ ರೀತಿ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಸುತ್ತಾ ಜನರ ಜೀವನವನ್ನೇ ದುಸ್ತರ ಮಾಡಿರುವ ಈ ಜನವಿರೋಧಿ ಕಾಂಗ್ರೆಸ್ ಸರಕಾರ ಜನಾಕ್ರೋಶವನ್ನು ಎದುರಿಸುವ ದಿನ ದೂರವಿಲ್ಲ. ಮೊದಲು ಸಾರಿಗೆ ನಿಗಮಗಳ ನಷ್ಟದ ಪೂರ್ಣ ಲೆಕ್ಕವನ್ನು ಜನರ ಮುಂದಿಡಿ, ಈ ದರ ಏರಿಕೆಯನ್ನು ತಕ್ಷಣ ಹಿಂಪಡೆಯಿರಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಜನರಿಗೆ ಯಾಕೆ ಶಿಕ್ಷೆ: ‘ಸಿಎಂ ಡಿ.ಕೆ.ಶಿವಕುಮಾರ್‌ ರೇ ನಿಮಗೆ ಗ್ಯಾರಂಟಿ ಯೋಜನೆಗಳನ್ನು ಕೊಡಿ ಎಂದು ಜನತೆ ಕೇಳಿದ್ದರೇ?. ನಿಮ್ಮ ಅಧಿಕಾರದ ಸ್ವಾರ್ಥಕ್ಕೆ ಜನರನ್ನು ಯಾಮಾರಿಸಿ, ಅಧಿಕಾರ ಹಿಡಿದು ಬೊಕ್ಕಸ ಬರಿದು ಮಾಡಿದಷ್ಟೇ ಅಲ್ಲದೇ, ಮೂರೂವರೆ ವರುಷಗಳಿಂದ ನಿರಂತರವಾಗಿ ಬೆಲೆಗಳನ್ನು ಏರಿಸಿ ಜನರಿಗೆ ಯಾಕೆ ಶಿಕ್ಷೆ ನೀಡುತ್ತಿದ್ದೀರಿ?. ನಿಮ್ಮ ಭ್ರಷ್ಟ ದುರಾಡಳಿತಕ್ಕೆ ರಾಜ್ಯದ ಜನತೆಯ ಪರವಾಗಿ ನಮ್ಮ ಧಿಕ್ಕಾರ’ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ವೈಫಲ್ಯಗಳಿಗೆ ಬಡಜನರ ಮೇಲೆ ಮತ್ತೊಂದು ದರ ಏರಿಕೆಯ ಬರೆ!

ಹಾಲು, ಮೊಸರು, ವಿದ್ಯುತ್ ದರಗಳನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಈ ಭ್ರಷ್ಟ, ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಇನ್ನೂ ತೃಪ್ತಿಯಾದಂತಿಲ್ಲ! ಈಗ ಬಸ್ ದರದ ಸರದಿ!

ಬೆಂಗಳೂರಿನಲ್ಲಿ ಕನಿಷ್ಠ ಟಿಕೆಟ್ 6 ರೂ, ನಿಂದ 10 ರೂ. ಅಂದರೆ ಸುಮಾರು ಶೇ. 67ರಷ್ಟು ಏರಿಕೆ! KSRTC ಯಲ್ಲಿ ಗರಿಷ್ಠ 9 ರೂ. ಏರಿಕೆ, ಒಟ್ಟಾರೆ 4 ರಿಂದ 20 ರೂ.ರವರೆಗೆ ಜನರ ಮೇಲೆ ಹೊರೆ ಹೊರಸಿರುವ ಈ @INCKarnataka ಸರ್ಕಾರ ತನ್ನ ವೈಫಲ್ಯಗಳನ್ನು ಸರಿಪಡಿಸಿಕೊಳ್ಳುವುದಿರಲಿ, ಕನಿಷ್ಠ ಮಾನವೀಯತೆಯನ್ನೂ ಕೂಡ ಉಳಿಸಿಕೊಂಡಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ ಎಂದು ಸಾರಿಗೆ ಸಚಿವರು ಹೇಳಿದ್ದಾರೆ!

ದುಡಿಯಲು ಹೊರಡುವ ಕಾರ್ಮಿಕ, ಶಾಲೆ-ಕಾಲೇಜಿಗೆ ಹೋಗುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಆಸ್ಪತ್ರೆಗೆ ಹೊರಡುವ ಬಡ ರೋಗಿಗಳು, ಸಾಮಾನ್ಯ ಜನರು ನಿಮ್ಮ ಕಾಂಗ್ರೆಸ್ ಸರ್ಕಾರದ ಕೆಟ್ಟ ಆರ್ಥಿಕ ನಿರ್ವಹಣೆಗೆ ಬೆಲೆ ತೆರಬೇಕೇ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ?

ಒಂದೆಡೆ ಗ್ಯಾರಂಟಿಗಳನ್ನು ಕೊಟ್ಟಂತೆ ಮಾಡಿ, ಮತ್ತೊಂದೆಡೆ ಬೆಲೆ ಏರಿಕೆಯ ಮೂಲಕ ಎರಡೂ ಕೈಗಳಿಂದ ಜನರ ಜೇಬು ದೋಚುವುದೇ ಈ ಕಾಂಗ್ರೆಸ್ ಸರ್ಕಾರದ ಆಡಳಿತ ಮಂತ್ರವಾಗಿದೆ. ಹಾಲಿನ ದರ ಏರಿಕೆಯ ಬೆನ್ನಲ್ಲೇ ಬಸ್ ಪ್ರಯಾಣವನ್ನೂ ದುಬಾರಿಯಾಗಿಸಿರುವ ಸರ್ಕಾರ, ಜನಸಾಮಾನ್ಯರ ದಿನನಿತ್ಯದ ಬದುಕನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ.

ಈ ರೀತಿ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಸುತ್ತಾ ಜನರ ಜೀವನವನ್ನೇ ದುಸ್ತರ ಮಾಡಿರುವ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ಜನಾಕ್ರೋಶವನ್ನು ಎದುರಿಸುವ ದಿನ ದೂರವಿಲ್ಲ! ಮೊದಲು ಸಾರಿಗೆ ನಿಗಮಗಳ ನಷ್ಟದ ಪೂರ್ಣ ಲೆಕ್ಕವನ್ನು ಜನರ ಮುಂದಿಡಿ, ಈ ದರ ಏರಿಕೆಯನ್ನು ತಕ್ಷಣ ಹಿಂಪಡೆಯಿರಿ ಎಂದು ಅತ್ಯಂತ ತೀವ್ರವಾಗಿ ಆಗ್ರಹಿಸುತ್ತೇವೆ.

#CongressFailsKarnataka #Pricehike

— Vijayendra Yediyurappa (@BYVijayendra) November 4, 2026

Tags

bus fare hike
share
ವಾರ್ತಾಭಾರತಿ
ವಾರ್ತಾಭಾರತಿ
Next Story
X