Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉಪಚುನಾವಣೆ : ದಾವಣಗೆರೆ-ಶೇ.63.04,...

ಉಪಚುನಾವಣೆ : ದಾವಣಗೆರೆ-ಶೇ.63.04, ಬಾಗಲಕೋಟೆ ಶೇ.66.68ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ9 April 2026 9:10 PM IST
share
ಉಪಚುನಾವಣೆ : ದಾವಣಗೆರೆ-ಶೇ.63.04, ಬಾಗಲಕೋಟೆ ಶೇ.66.68ರಷ್ಟು ಮತದಾನ

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ, ಮತದಾನ ಶಾಂತಿಯುತ ಅಂತ್ಯ ಕಂಡಿದೆ. ದಾವಣಗೆರೆ-ಶೇ.63.04 ಮತ್ತು ಬಾಗಲಕೋಟೆ ಶೇ.66.68ರಷ್ಟು ಮತದಾನವಾಗಿದೆ.

ಎರಡೂ ಕ್ಷೇತ್ರಗಳಲ್ಲಿಯೂ ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ನಡೆದ ಮತದಾನಕ್ಕೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಬಿಜೆಪಿ, ಕಾಂಗ್ರೆಸ್, ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವು ಇವಿಎಂನಲ್ಲಿ ಭದ್ರವಾಗಿದ್ದು, ಮೇ 4ರಂದು ನಡೆಯುವ ಮತ ಎಣಿಕೆ, ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ನಿರೀಕ್ಷೆಯಂತೆ ಮತದಾನ ಹೆಚ್ಚಿನ ಪ್ರಮಾಣದಲ್ಲಿ ಆಗಿದೆ. ಎರಡೂ ಕಡೆ ಮತದಾರರು ಬೆಳಗ್ಗೆಯಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ ಹಕ್ಕನ್ನು ಚಲಾಯಿಸಿದರು. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಚಲಾಯಿಸಲು ಅವಕಾಶ ಕಲ್ಪಿಸಲಾಗಿತ್ತು. ಮತದಾನಕ್ಕೆ ಸುಡು ಬೇಸಿಗೆ ಬಿಸಲನ್ನು ಲೆಕ್ಕಿಸದೆ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಸೇರಿದಂತೆ ಕುಟುಂಬದ ಸದಸ್ಯರು ಮತಗಟ್ಟೆಗೆ ಬಂದು ಸಾಮಾನ್ಯರಂತೆ ಸರತಿಯಲ್ಲಿ ನಿಂತು ಮತ ಹಾಕಿದರು. ಇತ್ತ ಬಿಜೆಪಿಯ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ತಮ್ಮ ಪತ್ನಿ ಜತೆ ಮತಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.

ಕೆಲ ಮತಗಟ್ಟೆಗಳಲ್ಲಿ ಆರಂಭದಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕೆಲಕಾಲ ಮತದಾನ ಸ್ಥಗಿತಗೊಂಡಿತ್ತು. ತಕ್ಷಣವೇ ಸಿಬ್ಬಂದಿಗಳು ಇವಿಎಂನ್ನು ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಿದರು. ದಾವಣಗೆರೆ ದಕ್ಷಿಣದಲ್ಲಿನ ಮತಗಟ್ಟೆ ಸಂಖ್ಯೆ 195ರಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಬಾಗಲಕೋಟೆ ಕ್ಷೇತ್ರ: ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಉತ್ತಮ ಮತದಾನವಾಗಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕುಟುಂಬ ಸಮೇತರಾಗಿ ಮತದಾನ ಮಾಡಿದರೆ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಕುಟುಂಬದ ಸದಸ್ಯರೊಂದಿಗೆ ತೆರಳಿ ಮತ ಚಲಾಯಿಸಿದರು.

ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರ(ಇವಿಎಂ)ದಲ್ಲಿ ಭದ್ರವಾಗಿದೆ. ಮೇ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಎರಡೂ ಕ್ಷೇತ್ರಗಳಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆಗಳು ವರದಿಯಾಗಿಲ್ಲ. ಮುನ್ನಚ್ಚರಿಕೆ ಕ್ರಮವಾಗಿ ಎರಡೂ ಕ್ಷೇತ್ರಗಳಲ್ಲಿಯೂ ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿತ್ತು.

Tags

By-electionDavangereBagalkote
share
ವಾರ್ತಾಭಾರತಿ
ವಾರ್ತಾಭಾರತಿ
Next Story
X