Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕೆ...

ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕೆ ಸೀಮಿತ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ12 Feb 2026 2:36 PM IST
share
ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕೆ ಸೀಮಿತ : ಬಿ.ವೈ.ವಿಜಯೇಂದ್ರ
"2.75 ಲಕ್ಷ ಹುದ್ದೆಗಳು ನೇಮಕಾತಿ ಆಗದೇ ಖಾಲಿ"

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕೆ ಸೀಮಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳಾಗುತ್ತಿದೆ. ಕಳೆದ ಎರಡೂವರೆ-ಮೂರು ವರ್ಷದಲ್ಲಿ ಇವರ ಆಡಳಿತ ವೈಖರಿ, ಇವರ ಯೋಗ್ಯತೆಗೆ ಯಾವುದೇ ಒಂದು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿರುವ ಬಡವರು, ರೈತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು- ಈ ಎಲ್ಲ ಸಮುದಾಯಗಳಲ್ಲಿ ಕಾಂಗ್ರೆಸ್ಸಿಗರ ಮಾತು ನಂಬಿ ನಾವು ಮೋಸ ಹೋಗಿದ್ದೇವೆ; ನಮಗೆ ಅನ್ಯಾಯವಾಗುತ್ತಿದೆ ಎಂಬ ಚರ್ಚೆ ರಾಜ್ಯದೆಲ್ಲೆಡೆ ಆರಂಭವಾಗಿದೆ ಎಂದು ತಿಳಿಸಿದರು.

ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ನೇತೃತ್ವದ ಈ ಕಾಂಗ್ರೆಸ್ ಸರಕಾರವು ‘ಅ’ ಪಕ್ಕಕ್ಕಿಟ್ಟು ಹಿಂದುಳಿದ ಸಮುದಾಯಗಳು, ಪರಿಶಿಷ್ಟ ಜಾತಿ ಪಂಗಡಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಟೀಕಿಸಿದರು. ಅಹಿಂದ ಎಂದು ಹೇಳಿಕೊಂಡು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆಯೇ ವಿನಾ, ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ, ಪಂಗಡಗಳು ಸೇರಿ ಎಲ್ಲ ಸಮುದಾಯಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೇ ಗೊತ್ತಾಗುತ್ತದೆ ಎಂದು ವಿವರಿಸಿದರು.

ಬೇರೆ ಸಮುದಾಯಗಳು ನಿಮಗೆ ಏನು ಅನ್ಯಾಯ ಮಾಡಿವೆ? :

ಸರಕಾರವು ಮೊನ್ನೆ ಹೊಸ ಆದೇಶ ಹೊರಡಿಸಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಅಲ್ಪಸಂಖ್ಯಾತ ಬಂಧುಗಳಿಗೆ ಒನ್ ಟೈಮ್ ಸೆಟಲ್‍ಮೆಂಟ್ ಸ್ಕೀಮ್ ಅಡಿ ಶೇ 100 ಬಡ್ಡಿ ಮನ್ನಾ ಮಾಡಿದ್ದಾರೆ. ಅವರು ಸಾಲದ ಮೊತ್ತ ಮಾತ್ರ ಕಟ್ಟಿದರೆ ಸಾಕು. ಹಾಗಿದ್ದರೆ ಬೇರೆ ಸಮುದಾಯಗಳು ನಿಮಗೆ ಏನು ಅನ್ಯಾಯ ಮಾಡಿವೆ ಎಂದು ಪ್ರಶ್ನಿಸಿದರು.

ಸರಕಾರ, ಮುಖ್ಯಮಂತ್ರಿಗಳಿಗೆ ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳು ಯಾಕೆ ಕಣ್ಣಿಗೆ ಕಾಣುತ್ತಿಲ್ಲ? ಅವರಲ್ಲೂ ಬಡವರಿಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ ಎಂದು ಕೇಳಿದರು. ಮುಖ್ಯಮಂತ್ರಿಗಳು, ಕಾಂಗ್ರೆಸ್ ಸರಕಾರಕ್ಕೆ ಅವರಲ್ಲಿ ಬಡವರಿರುವುದು ಕಣ್ಣಿಗೆ ಕಾಣುತ್ತಿಲ್ಲವೇ?. ಅಲ್ಪಸಂಖ್ಯಾತರ ಓಲೈಕೆಗಾಗಿ ಯಾವ ಮಟ್ಟಕ್ಕೂ ಹೋಗುವುದಾದರೆ, ಎಲ್ಲೋ ಒಂದು ಕಡೆ ಈ ಕಾಂಗ್ರೆಸ್ ಸರಕಾರವು ಈ ಎಲ್ಲ ಸಮುದಾಯಗಳಿಗೆ ಘೋರ ಅನ್ಯಾಯವನ್ನು ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಉದ್ಯೋಗ ಸೃಷ್ಟಿ ವಿಚಾರದಲ್ಲಿ ಏನು ಮಾಡಿದ್ದೀರಿ? :

ಚುನಾವಣೆ ಸಂದರ್ಭದಲ್ಲಿ ಯುವಜನರಿಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಕೇಂದ್ರ ಸರಕಾರದ ವಿರುದ್ಧ ಪದೇಪದೇ ಆರೋಪ ಮಾಡುತ್ತಾರೆ. ಹಾಗಿದ್ದರೆ ರಾಜ್ಯದಲ್ಲಿ ನಿಮ್ಮ ಸರಕಾರ ಏನು ಮಾಡುತ್ತಿದೆ ಮಾನ್ಯ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು. ಎಷ್ಟು ಉದ್ಯೋಗ ಸೃಷ್ಟಿ ಮಾಡುವುದರಲ್ಲಿ ನೀವು ಯಶಸ್ವಿ ಆಗಿದ್ದೀರಿ? ಎಂದು ಕೇಳಿದರು.

2.75 ಲಕ್ಷ ಹುದ್ದೆಗಳು ನೇಮಕಾತಿ ಆಗದೇ ಖಾಲಿ :

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇವರು ಪ್ರಾರಂಭವೇ ಮಾಡಿಲ್ಲ ಎಂದು ಟೀಕಿಸಿದರು. ವಿದ್ಯಾವಂತರು, ನಿರುದ್ಯೋಗಿಗಳಿಗೆ, ಯುವಜನರಿಗೆ ಉದ್ಯೋಗ ಸೃಷ್ಟಿಸುವ ಪ್ರಾಮಾಣಿಕ ಕಳಕಳಿ ಇವರಿಗೆ ಇದ್ದರೆ, ರಾಜ್ಯದಲ್ಲಿ 2.75 ಲಕ್ಷ ಹುದ್ದೆಗಳು ನೇಮಕಾತಿ ಆಗದೇ ಖಾಲಿ ಉಳಿಯುವ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದು ತಿಳಿಸಿದರು.

Tags

B.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X