Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ಸಿನವರು ದೇವೇಗೌಡರ ಕುರಿತು...

ಕಾಂಗ್ರೆಸ್ಸಿನವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ9 Jun 2026 1:43 PM IST
share
ಕಾಂಗ್ರೆಸ್ಸಿನವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಅತ್ಯುನ್ನತ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿ, ಹೆಮ್ಮೆಯ ಕನ್ನಡಿಗ ಎನಿಸಿಕೊಂಡಿದ್ದ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ಪದವಿಯಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ ಮೇಲಿರುವುದನ್ನು ಕಾಂಗ್ರೆಸ್ ಮುಂದಾಳುಗಳು ಮರೆತಂತಿದೆ. ದೇವೇಗೌಡರನ್ನು ರಾಜಕೀಯ ಜೀವನದುದ್ದಕ್ಕೂ ಕಾಡಿದ್ದು, ಅವರ ಪಕ್ಷವನ್ನು ಇಬ್ಬಾಗ ಮಾಡಲು ಯತ್ನಿಸಿದ್ದು ಕಾಂಗ್ರೆಸ್. ಇಷ್ಟಾಗಿಯೂ ಕೊಳಕು ರಾಜಕಾರಣ ಮಾಡುವುದನ್ನು ನಿಲ್ಲಿಸದ ಕಾಂಗ್ರೆಸ್ಸಿಗರು, ದೇವೇಗೌಡರ ಕುರಿತು ಕೃತಕ ಕಾಳಜಿಯ ಮಾತನಾಡುತ್ತಿರುವ ಪರಿ ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯು ದೇವೇಗೌಡ ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ಭಾರತದ ಸಮಗ್ರತೆ ಉಳಿಯಬೇಕಾದರೆ, ಅಭಿವೃದ್ಧಿ ಹೊಂದಬೇಕಾದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ಮಾತ್ರ ಸಾಧ್ಯ ಎಂಬ ನಂಬಿಕೆಯಿಂದ ದೇವೇಗೌಡ ಅವರು ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿ, ಎನ್‍ಡಿಎಗೆ ತಮ್ಮ ಜೆಡಿಎಸ್ ಪಕ್ಷವನ್ನು ಸೇರಿಸಿದ್ದಾರೆ. ಇದನ್ನು ಕಂಡು ಸಹಿಸಲಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ಸಿಗರು ದೇವೇಗೌಡರ ಹೆಸರನ್ನು ಬಳಸಿಕೊಂಡು ರಾಜಕಾರಣ ಮಾಡಲು ಹೊರಟಿರುವುದು ನಾಚಿಗೆಗೇಡಿತನದ ಪರಮಾವಧಿಯಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಅವರ ಹಿರಿತನ, ಸೇವೆ ಉಲ್ಲೇಕಿಸಿ ಸಂಸತ್ತಿನಲ್ಲಿ ಸ್ವತಃ ಪ್ರಧಾನ ಮಂತ್ರಿಗಳೇ ಭಾವುಕವಾಗಿ ಮಾತನಾಡಿ ಅವರ ಕೊಡುಗೆ, ಸಾಧನೆಯನ್ನು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ರಾಷ್ಟವನ್ನು ಮುನ್ನಡೆಸುವ ನಿಟ್ಟಿನಲ್ಲಿ ಅವರ ಮಾರ್ಗದರ್ಶನ ಸದಾ ನಮಗೆ ಬೇಕೆಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅತ್ಯುತ್ತಮ ರಾಜಕೀಯ ಹಾಗೂ ವ್ಯಕ್ತಿಗತ ಗೌರವಗಳ ಬಾಂಧವ್ಯವಿರುವ ದೇವೇಗೌಡರೊಂದಿಗಿನ ಸಂಬಂಧಕ್ಕೆ ಹುಳಿ ಹಿಂಡುವ ಮಾತುಗಳು ‘ಕಾಂಗ್ರೆಸ್ಸಿಗರ ವಿಕೃತ ನಡೆ‘ ಎನ್ನುವುದನ್ನು ಕರ್ನಾಟಕದ ಜನತೆ ಅರ್ಥೈಸಿಕೊಳ್ಳದಷ್ಟು ಮುಗ್ಧರಲ್ಲ ಎನ್ನುವ ತಿಳುವಳಿಕೆ ಕಾಂಗ್ರೆಸ್ಸಿಗರಿಗಿರಲಿ ಎಂದು ತಿಳಿಸಿದ್ದಾರೆ.

ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ @rssurjewala ಹಾಗೂ ಕೆಪಿಸಿಸಿ ಅಧ್ಯಕ್ಷರು @HariprasadBK2 ‌ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ.

ದೇಶದ ಅತ್ಯುನ್ನತ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿ, ಹೆಮ್ಮೆಯ ಕ್ನನಡಿಗ ಎನಿಸಿಕೊಂಡಿದ್ದ ಸನ್ಮಾನ್ಯ @H_D_Devegowda ಅವರನ್ನು ಪ್ರಧಾನಿ ಪದವಿಯಿಂದ…

— Vijayendra Yediyurappa (@BYVijayendra) June 9, 2026


Tags

B.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X