Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ನಮ್ಮ...

ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ನಮ್ಮ ಹೋರಾಟದ ಬಿಸಿ ಮುಟ್ಟಿದೆ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ5 Aug 2024 3:21 PM IST
share
ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ನಮ್ಮ ಹೋರಾಟದ ಬಿಸಿ ಮುಟ್ಟಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರಕಾರವು ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಕೆಂಗಲ್‌ನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಳುಹಿಸಿದ ವೇಣುಗೋಪಾಲ್, ಸುರ್ಜೇವಾಲಾ ಅವರು ಬಂದು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ. ಹಗರಣದಲ್ಲಿ ಮುಳುಗಿದ ಸರಕಾರ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥನೆ ಮಾಡಲು ದಿಲ್ಲಿ ಗಾಂಧಿ ಕುಟುಂಬದ ಸಂದೇಶವನ್ನು ನೀಡಿದ್ದಾರೆ ಎಂದು ಟೀಕಿಸಿದರು.

ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಮ್ಮೆಲ್ಲ ಶಾಸಕ ಮಿತ್ರರು, ಬಿಜೆಪಿ- ಜೆಡಿಎಸ್ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ದಿನೇದಿನೇ ನಮ್ಮ ಪಾದಯಾತ್ರೆ ಹೆಚ್ಚು ವಿಶ್ವಾಸ, ಉತ್ಸಾಹದಿಂದ ಹೆಜ್ಜೆಗೆ ಹೆಜ್ಜೆ ಇಡುತ್ತಿದ್ದಾರೆ. ಇದರ ಪರಿಣಾಮವಾಗಿ ಆಡಳಿತ ಪಕ್ಷಕ್ಕೆ ನಿದ್ರೆ ಬರುತ್ತಿಲ್ಲ ಎಂದು ವಿಶ್ಲೇಷಿಸಿದರು.

ನೆಪಮಾತ್ರಕ್ಕೆ ಮಾಡುವ ಹೋರಾಟವಲ್ಲ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ, ಮೈಸೂರು ಮುಡಾ ಹಗರಣದಿಂದ ನಾಡಿನ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯವಾಗಿದೆ. ಅವರ ಹಣ ದೋಚಿದ್ದಾರೆ. ಇಂಥ ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಬುದ್ಧಿ ಕಲಿಸಲೇಬೇಕಾಗಿದೆ ಎಂದು ನುಡಿದರು.

ಅಭಿವೃದ್ಧಿ ಶೂನ್ಯ, ಲೂಟಿ ಹೊಡೆಯುವ ಸರಕಾರ : ವಯನಾಡಿನಲ್ಲಿ ನೂರಾರು ಜನರು ಪ್ರಾಣ ಕಳಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳು 100 ಮನೆಗಳನ್ನು ಘೋಷಿಸಿದ್ದಾರೆ. ಇದು ತಪ್ಪೇನಲ್ಲ, ಒಳ್ಳೆಯ ಕ್ರಮವೇ ಆಗಿದೆ. ಆದರೆ, ಮುಖ್ಯಮಂತ್ರಿಗಳಿಗೆ ಶಕ್ತಿ ನೀಡಿದ ಮೈಸೂರು ಜಿಲ್ಲೆಯಲ್ಲಿ ಲಕ್ಷಾಂತರ ಬಡವರು, ನಿರ್ಗತಿಕರು ಸಲ್ಲಿಸಿದ ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳು ಹಾಗೆಯೇ ಬಿದ್ದಿವೆ. ಇದರ ಬಗ್ಗೆ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದು ರಾಜ್ಯದ ಜನರ ಪ್ರಶ್ನೆ. ಅಭಿವೃದ್ಧಿ ಶೂನ್ಯ, ಲೂಟಿ ಹೊಡೆಯುವ ಸರಕಾರ ಇಲ್ಲಿದೆ. ಜನರು ಈ ಸರಕಾರ ಮತ್ತು ಸಿದ್ದರಾಮಯ್ಯ ಅವರಿಗೆ ಶಾಪ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X