Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ನಿವೇಶನ ವಾಪಾಸ್‌ ರಾಜಕೀಯ ನಾಟಕ :...

ಮುಡಾ ನಿವೇಶನ ವಾಪಾಸ್‌ ರಾಜಕೀಯ ನಾಟಕ : ಬಿ.ವೈ.ವಿಜಯೇಂದ್ರ

"ಸಿದ್ದರಾಮಯ್ಯನವರು ಭಂಡತನ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು"

ವಾರ್ತಾಭಾರತಿವಾರ್ತಾಭಾರತಿ1 Oct 2024 4:30 PM IST
share
ಮುಡಾ ನಿವೇಶನ ವಾಪಾಸ್‌ ರಾಜಕೀಯ ನಾಟಕ : ಬಿ.ವೈ.ವಿಜಯೇಂದ್ರ

ಬೆಂಗಳೂರು : "ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಈ.ಡಿ. ಕೇಸ್ ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯದವರೊಂದಿಗೆ ಮಾತನಾಡಿದ ಅವರು, ʼರಾಜಕೀಯ ಸಹಾನುಭೂತಿ ಪಡೆಯಲು, ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು. ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲʼ ಎಂದು ತಿಳಿಸಿದರು.

ನಿವೇಶನ ಹಿಂದಿರುಗಿಸಿ ಸಿದ್ದರಾಮಯ್ಯನವರು ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ, ತಪ್ಪು ಮಾಡದಿದ್ದರೆ ಯಾಕೆ ಸೈಟ್ ಸರೆಂಡರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು ಎಂದರು.

ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಇನ್ನಾದರೂ ತಮ್ಮ ಭಂಡತನವನ್ನು ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ರಾಜ್ಯಪಾಲರ ಕ್ಷಮೆ ಕೇಳಬೇಕು. ಸಾಮಾಜಿಕ ಕಾರ್ಯಕರ್ತ, ಬಡ ಕುಟುಂಬದವರಾದ ಸ್ನೇಹಮಯಿ ಕೃಷ್ಣರ ಮೇಲೆ ದೂರು ದಾಖಲಿಸಿ ಅವರನ್ನು ಬೆದರಿಸುವ ತಂತ್ರವನ್ನು ಮುಖ್ಯಮಂತ್ರಿಗಳು, ಅವರ ಹಿಂಬಾಲಕರು ಮಾಡುತ್ತಿದ್ದಾರೆ. ಗೃಹ ಸಚಿವರು ಮತ್ತು ಡಿಜಿಪಿ ಅವರು ತಕ್ಷಣ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿಯವರು ಸಿಎಂ, ಸಿಎಂ ಸುಪುತ್ರರ ಗಮನಕ್ಕೆ ಬರದೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಕುಳಿತು ಮುಡಾಕ್ಕೆ ಪತ್ರ ಬರೆದಿದ್ದಾರೆ. 14 ನಿವೇಶನ ವಾಪಸ್ ಕೊಡುವುದಾಗಿ ಹೇಳಿದ್ದಾರೆ. ಪಾರ್ವತಿಯವರು ಅವರಾಗಿಯೇ ಈ ಪತ್ರ ಬರೆದರೇ? ಬಲವಂತವಾಗಿ ಬರೆದರೋ ನಮಗೆ ಗೊತ್ತಿಲ್ಲ. ʼತಪ್ಪೇ ಮಾಡಿಲ್ಲ, ನಾನು ಜಗ್ಗುವುದಿಲ್ಲ, ನಾನು ಬಗ್ಗುವುದಿಲ್ಲʼ ಇದೆಲ್ಲ ರಾಜಕೀಯಪ್ರೇರಿತ ಎಂದು ಸಿದ್ದರಾಮಯ್ಯ ಆರ್ಭಟಿಸಿದ್ದರು ಎಂದು ನೆನಪಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಮುಖ್ಯವಕ್ತಾರ ಅಶ್ವತ್ಥನಾರಾಯಣ ಗೌಡ, ಶಾಸಕ- ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಎಸ್‍ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X