Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೂತನ ‘ಪ್ರಜಾಸೇವೆ’ ಇಲಾಖೆ ರಚನೆಗೆ ಸಂಪುಟ...

ನೂತನ ‘ಪ್ರಜಾಸೇವೆ’ ಇಲಾಖೆ ರಚನೆಗೆ ಸಂಪುಟ ನಿರ್ಧಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ2 July 2026 8:30 PM IST
share
ನೂತನ ‘ಪ್ರಜಾಸೇವೆ’ ಇಲಾಖೆ ರಚನೆಗೆ ಸಂಪುಟ ನಿರ್ಧಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : ಜನರ ಸಮಸ್ಯೆಗಳನ್ನು ಆಲಿಸಿ, ಕಾನೂನು ಚೌಕಟ್ಟಿನಲ್ಲಿ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನೂತನವಾಗಿ ‘ಪ್ರಜಾಸೇವೆ’ ಇಲಾಖೆ ರಚನೆ ಮಾಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಮೊದಲ ಬಾರಿಗೆ ‘ಪ್ರಜಾ ಸೇವೆ’ ಇಲಾಖೆ ಚಾಲ್ತಿಗೆ ಬರುತ್ತಿದ್ದು, ಇದಕ್ಕೆ ಓರ್ವ ಮಂತ್ರಿ ಸಂಪೂರ್ಣ ಜವಾಬ್ದಾರಿಯನ್ನು ವಹಿಸಲಿದ್ದಾರೆ. ಜತೆಗೆ, ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿಯೊಬ್ಬರು ಒಳಗೊಂಡಂತೆ ವಿವಿಧ ದರ್ಜೆಯ ಅಧಿಕಾರಿಗಳನ್ನು ನೇಮಿಸಲಾಗುವುದು. ಅದರಲ್ಲೂ ಪ್ರಮುಖವಾಗಿ ಪ್ರತಿ ಜಿಲ್ಲೆಗೆ ಆಯಾ ಉಸ್ತುವಾರಿ ಸಚಿವರು ತಿಂಗಳಿನ ಮೊದಲನೆ ಮತ್ತು ಮೂರನೆ ಶನಿವಾರ ಕಡ್ಡಾಯವಾಗಿ ‘ಪ್ರಜಾ ಸೇವೆ’ ಇಲಾಖೆ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದರು.

ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರ ತಂಡದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ‘ಪ್ರಜಾ ಸೇವೆ’ ಇಲಾಖೆಯ ಅಭಿಯಾನದಲ್ಲಿ ಭಾಗಿಯಾಗಬೇಕು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ‘ಪ್ರಜಾ ಸೇವೆ’ ಇಲಾಖೆಗೆ ಅರ್ಜಿ ಮೂಲಕ ಸಲ್ಲಿಸಬಹುದು. ಆನಂತರ ಪರಿಶೀಲನೆ ನಡೆಸಿ ಕಾನೂನು ರೀತ್ಯಾ ಸರಕಾರ ಪರಿಹಾರ ಹಾಗೂ ಸಮಸ್ಯೆ ಬಗೆಹರಿಸಲಿದೆ. ಇದೊಂದು ಜವಾಬ್ದಾರಿಯುತ ಇಲಾಖೆ ಆಗಿದ್ದು, ಪ್ರತಿಭಟನೆಗಳು, ಸಮಸ್ಯೆ, ದೂರುಗಳನ್ನು ನೇರವಾಗಿ ಸರಕಾರಕ್ಕೆ ಮುಟ್ಟಿಸಬಹುದಾಗಿದೆ ಎಂದು ಅವರು ವಿವರಿಸಿದರು.

ಪ್ರತಿ ತಿಂಗಳು ನಾನು ಸಹ ‘ಪ್ರಜಾ ಸೇವೆ’ ಅಭಿಯಾನದಲ್ಲಿ ಪಾಲ್ಗೊಳ್ಳುತ್ತೇನೆ ಎಂದ ಡಿ.ಕೆ.ಶಿವಕುಮಾರ್ ಅವರು, ಜನರು ಸಮಸ್ಯೆಗಳ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಗಳ ಶಾಖೆಗಳನ್ನು ಆರಂಭಿಸುತ್ತೇವೆ. ಅಲ್ಲಿ ಅರ್ಜಿಗಳ ಪ್ರಕ್ರಿಯೆ ನಡೆಯಲಿದೆ. ಒಟ್ಟಿನಲ್ಲಿ ಸರಕಾರವೇ ಜನರ ಮನೆಯ ಬಾಗಿಲಿಗೆ ಬರಲಿದೆ. ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ನಿಮ್ಮ ದೂರು ಸ್ವೀಕಾರ ಮಾಡಿ ಪರಿಹಾರ ನೀಡಲಿದ್ದಾರೆ ಎಂದು ತಿಳಿಸಿದರು.

Tags

Cabinet MeetingCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X