ಚರ್ಚಿಸಿಯೇ ವಿವಿಧ ಸಂಘಟನೆಗಳ ಮುಖಂಡರ ಮೇಲಿನ ಪ್ರಕರಣ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ: ಡಾ.ಜಿ.ಪರಮೇಶ್ವರ್

ಗೃಹ ಸಚಿವ ಡಾ.ಜಿ.ಪರಮೇಶ್ವರ್ (File Photo: PTI)
ಬೆಂಗಳೂರು: ‘ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿಯೇ ಶಿಫಾರಸು ಮಾಡಿದ ಬಳಿಕ ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ಮೇಲಿನ ಪ್ರಕರಣಗಳನ್ನು ಕೈಬಿಡಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳ ಮೇಲೆ ಇದ್ದ ಪ್ರಕರಣಗಳನ್ನು ಸಂಪುಟ ಉಪ ಸಮಿತಿಗೆ ಸರಕಾರ ಶಿಫಾರಸು ಮಾಡಿತ್ತು. ಇಲ್ಲಿ ಪ್ರತಿಯೊಂದು ಪ್ರಕರಣ ಬಗ್ಗೆಯೂ ಚರ್ಚೆ ಮಾಡಿ, ಕಾನೂನಾತ್ಮಕವಾಗಿ ವಾಪಸ್ ತೆಗೆದುಕೊಳ್ಳಲು ಅವಕಾಶವಿದೆ ಎಂದು ತೀರ್ಮಾನ ಮಾಡಿತ್ತು. ಅದರಂತೆ ರಾಜ್ಯದಲ್ಲಿ 52 ಪ್ರಕರಣ ವಾಪಸ್ ತೆಗೆದುಕೊಳ್ಳಬಹುದು ಎಂದು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಉಲ್ಲೇಖಿಸಿದರು.
Next Story




