Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸಂಪುಟ ವಿಸ್ತರಣೆ’ ರಾಹುಲ್ ಗಾಂಧಿ...

‘ಸಂಪುಟ ವಿಸ್ತರಣೆ’ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಯಕರ ಸಭೆ : ಅಂತಿಮಗೊಳ್ಳದ ಪಟ್ಟಿ; ಬೆಂಗಳೂರಿಗೆ ಹಿಂದಿರುಗಿದ ಡಿಕೆಶಿ, ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 July 2026 8:46 PM IST
share
‘ಸಂಪುಟ ವಿಸ್ತರಣೆ’ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಯಕರ ಸಭೆ : ಅಂತಿಮಗೊಳ್ಳದ ಪಟ್ಟಿ; ಬೆಂಗಳೂರಿಗೆ ಹಿಂದಿರುಗಿದ ಡಿಕೆಶಿ, ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕೊನೆಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ರಾಜ್ಯ ನಾಯಕರು ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಗುರುವಾರ ಸಂಜೆ ಹೊಸದಿಲ್ಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಕಾಂಗ್ರೆಸ್ ವರಿಷ್ಠ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಜೊತೆ ಸಚಿವ ಸಂಪಟು ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದರು.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಂದ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯನ್ನು ರಾಹುಲ್ ಗಾಂಧಿ ಪಡೆದುಕೊಂಡಿದ್ದು, ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಹಾಗೂ ಹರಿಪ್ರಸಾದ್ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಜೊತೆ ಸಭೆ ನಡೆದಿದ್ದರೂ ಸಂಪುಟಕ್ಕೆ ಸೇರ್ಪಡೆಯಾಗುವವರು ಯಾರು? ಎಂಬ ಪ್ರಶ್ನೆಗೆ ಉತ್ತರ ಮಾತ್ರ ನಿಗೂಢವಾಗಿಯೆ ಇದೆ. ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ರಾಜ್ಯಕ್ಕೆ ಕಳುಹಿಸಿಕೊಡುವುದಾಗಿ ರಾಹುಲ್ ಗಾಂಧಿ ತಿಳಿಸಿದ ಬೆನ್ನಲ್ಲೆ, ನಾಲ್ಕು ದಿನಗಳಿಂದ ದಿಲ್ಲಿಯಲ್ಲೆ ಬೀಡು ಬಿಟ್ಟಿದ್ದ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಗುರುವಾರ ರಾತ್ರಿಯೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಿದ್ದಾರೆ.

ಆದರೆ, ಹರಿಪ್ರಸಾದ್ ಅವರನ್ನು ಹೊಸದಿಲ್ಲಿಯಲ್ಲೆ ಇರುವಂತೆ ರಾಹುಲ್ ಗಾಂಧಿ ಸೂಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಾವುದೆ ಕ್ಷಣದಲ್ಲಿ ನೂತನ ಸಚಿವರ ಪಟ್ಟಿ ಅಂತಿಮವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದರ ನಡುವೆ ಕಾವೇರಿ ವಿವಾದ ಹಿನ್ನೆಲೆಯಲ್ಲಿ ರವಿವಾರ ಮುಖ್ಯಮಂತ್ರಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಬಹುತೇಕ ರವಿವಾರ ರಾತ್ರಿ ನೂತನ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಗಳಿದ್ದು, ಸೋಮವಾರ ಪದಗ್ರಹಣ ಸಮಾರಂಭ ನಡೆಯಬಹುದು ಎಂದು ಹೇಳಲಾಗುತ್ತಿದೆ.

ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲು ರಾಜ್ಯ ನಾಯಕರು, ಸೋಮವಾರ (ಜು.27) ದಿಲ್ಲಿಗೆ ತೆರಳಿದ್ದರು. ಆದರೆ, ಸೋಮವಾರ, ಮಂಗಳವಾರ ನಿಗದಿಯಾಗಿದ್ದ ಸಭೆ ಬುಧವಾರಕ್ಕೆ ಮುಂದೂಡಲಾಗಿತ್ತು. ಆದರೆ, ಬುಧವಾರವು ಸಭೆ ನಡೆಯಲಿಲ್ಲ. ಅಂತಿಮವಾಗಿ ಗುರುವಾರ ಸಂಜೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದರು.

Tags

Cabinet ExpansionRahul GandhiDK ShivakumarSiddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X