Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ಅರಮನೆ ಮೈದಾನದ ಜಾಗ...

ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳಲು ಸುಗ್ರೀವಾಜ್ಞೆ: ಸಚಿವ ಸಂಪುಟ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ24 Jan 2025 8:57 PM IST
share
ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳಲು ಸುಗ್ರೀವಾಜ್ಞೆ: ಸಚಿವ ಸಂಪುಟ ನಿರ್ಣಯ

ಬೆಂಗಳೂರು : ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಹಾಗೂ ನಿಯಂತ್ರಿಸಲು ಅಧ್ಯಾದೇಶ(ಸುಗ್ರೀವಾಜ್ಞೆ) ಹೊರಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಅರಮನೆ(ಆರ್ಜನೆ ಮತ್ತು ವರ್ಗಾವಣೆ)ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸುಪ್ರೀಂಕೋರ್ಟ್‍ನಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.

ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಪ್ರಕಾರ ಪ್ರತಿ ಎಕರೆಗೆ 2.30 ಲಕ್ಷ ರೂ.ಗಳಂತೆ 11 ಕೋಟಿ ರೂ.ಗಳನ್ನು ನಿಗದಿಗೊಳಿಸಲಾಗಿತ್ತು. ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

1996ರಈ ಕಾಯ್ದೆಗೆ ಸುಪ್ರೀಂಕೋರ್ಟ್ ಯಾವುದೇ ತಡೆಯಾಜ್ಞೆ ನೀಡಿಲ್ಲ. ಆದರೆ, 2024ರ ಡಿ.10ರಂದು ಸುಪ್ರೀಂಕೋರ್ಟ್‍ನ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತು ಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ 3014 ಕೋಟಿ ರೂ. ಅಂದರೆ ಪ್ರತಿ ಎಕರೆಗೆ 200 ಕೋಟಿ ರೂ. ನೀಡಿದರೆ ಆರ್ಥಿಕ ಪರಿಸ್ಥಿತಿ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ. 1996ರ ಕಾಯ್ದೆಗೆ ಪೂರಕವಾದ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲರಿಗೆ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಸುಗ್ರಿವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರಕಾರವು ಈ ಮೊದಲು ಕೈಗೊಂಡ ಯಾವುದೇ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶಃ ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಈ ಸುಗ್ರಿವಾಜ್ಞೆ ಅವಕಾಶ ಕಲ್ಪಿಸುತ್ತದೆ ಎಂದು ಅವರು ವಿವರಿಸಿದರು.

2011ರಲ್ಲಿ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ಆಸ್ತಿಯ 15 ಎಕರೆ 39 ಗುಂಟೆ ಜಾಗವನ್ನು ಬಳಸಿಕೊಂಡು ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸುವ ಸಂಬಂಧ ಮಧ್ಯಂತರ ಅರ್ಜಿ ದಾಖಲಿಸಿದಾಗ ಈ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 2014ರಲ್ಲಿ ಟಿ.ಡಿ.ಆರ್ ನಿಯಮಗಳ ಪ್ರಕಾರ ಟಿ.ಡಿ.ಆರ್ ಷರತ್ತಿಗೊಳಪಡಿಸಿ, ಜಾಗವನ್ನು ಬಳಸಿಕೊಳ್ಳಲು ಅನುಮತಿ ನೀಡಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಭೂಸ್ವಾಧಿನ ಮೊತ್ತವು ರಾಜ್ಯದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದ್ದು, ಆರ್ಥಿಕ ಶಿಸ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆರ್ಥಿಕ ಶಿಸ್ತಿನ ತತ್ವಗಳನ್ನು ಅನುಸರಿಸದೇ ಅಂತಹ ಮೂಲಸೌಕರ್ಯ ಯೋಜನೆಗಳ ಮೇಲೆ ನೀತಿ-ನಿರ್ಣಯಗಳನ್ನು ತೆಗೆದುಕೊಳ್ಳುವುದು ಕಷ್ಟಸಾಧ್ಯ ಎಂದು ಅವರು ತಿಳಿಸಿದರು.

ನೀತಿ-ನಿಯಮಕ ವಿಷಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಿರ್ಧರಿಸುವಾಗ ರಾಜ್ಯದ ಆರ್ಥಿಕ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧುವಲ್ಲದ ಯಾವುದೇ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗೆ ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿರುತ್ತದೆ ಎಂದು ಎಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.

ಸುಪ್ರೀಂಕೋರ್ಟ್‍ನಲ್ಲಿ ಸಿವಿಲ್ ಅಪಿಲ್‍ನಲ್ಲಿ ರಾಜ್ಯದ ಪರವಾಗಿ ಆದೇಶವಾದಲ್ಲಿ ಮಾರಾಟ ಅಥವಾ ಇನ್ನಾವುದೇ ರೀತಿಯಲ್ಲಿ ಬಳಕೆಯಾದ ಟಿ.ಡಿ.ಆರ್ ಗಳನ್ನು ಹಿಂಪಡೆಯಲು ಅಸಾಧ್ಯ. ಆದುದರಿಂದ, ಸುಗ್ರೀವಾಜ್ಞೆಯ ಮೂಲಕ ಅಧಿಕಾರ ಪಡೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ: ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗೆ ಅಧಿಕಾರ ನೀಡಲು ರಾಜ್ಯ ಸರಕಾರದ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ ತರಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿ ಅನುಮೋದನೆ ಪಡೆದುಕೊಂಡಿದ್ದ 2024ನೆ ಸಾಲಿನ ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ ವಿಧೇಯಕ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ, ಕರ್ನಾಟಕ ಸಹಕಾರಿ ಸೊಸೈಟಿಗಳ ತಿದ್ದುಪಡಿ ವಿಧೇಯಕ, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕವನ್ನು ಅಂಕಿತ ಹಾಕದೆ, ಕೆಲವು ಸ್ಪಷ್ಟಣೆಗಳನ್ನು ಕೋರಿ ರಾಜ್ಯಪಾಲರು, ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯಪಾಲರು ಸ್ಪಷ್ಟಣೆಗಳನ್ನು ಕೋರಿ ವಿಧೇಯಕಗಳನ್ನು ಹಿಂದಕ್ಕೆ ಕಳುಹಿಸಿರುವ ವಿಚಾರವಾಗಿ ಈಗ ಏನು ಹೇಳುವುದಿಲ್ಲ. ಕಾನೂನು ಇಲಾಖೆ ಮೂಲಕ ಅವರಿಗೆ ಉತ್ತರ ಕಳುಹಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X