Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು...

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಂಪುಟ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ9 Oct 2025 7:54 PM IST
share
ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಂಪುಟ ಅನುಮೋದನೆ

ಬೆಂಗಳೂರು, ಅ.9: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿನಿಧಿಸುವ ಕನಕಪುರದಲ್ಲಿ ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ ಹೊಸ ವೈದ್ಯಕೀಯ ಕಾಲೇಜನ್ನು 150 ಎಂ.ಬಿ.ಬಿ.ಎಸ್. ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜುನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಮತ್ತು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು 550 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಅನುದಾನವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಭರಿಸಲು ನಿರ್ಧರಿಸಲಾಗಿದೆ ಎಚ್.ಕೆ.ಪಾಟೀಲ್ ತಿಳಿಸಿದರು.

ಇತರ ನಿರ್ಣಯಗಳು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕರಿವೋಬನಹಳ್ಳಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 ಎಂಎಲ್‍ಡಿ ಬಳಸಿದ ನೀರು ಸಂಸ್ಕರಣಾ ಘಟಕ ಮತ್ತು 5 ಎಂಎಲ್‍ಡಿ ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು 26.02 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಜಕೆನಾಲ್ ಹಂತ-2 ರಲ್ಲಿ 40 ಎಂ.ಎಲ್.ಡಿ ಸಾಮಥ್ರ್ಯದ ಬಳಸಿದ ನೀರು ಸಂಸ್ಕರಣಾ ಘಟಕ, ಟರ್ಮಿನಲ್ ತ್ಯಾಜ್ಯ ನೀರಿನ ಯಂತ್ರಗಾರ ಮತ್ತು ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಗಾರಗಳ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು 29.70 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ 52-54 ಮೀಟರ್ ಎತ್ತರಕ್ಕೆ ತಲುಪಬಲ್ಲ ಒಂದು ಏರಿಯಲ್ ಲ್ಯಾಡರ್ ಪ್ಲಾಟ್ ಫಾರಂ ವಾಹನವನ್ನು ಅಂದಾಜು ಮೊತ್ತ 16 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮೈಸೂರು ನಗರದ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯ ಪಾರಂಪರಿಕ ಕಟ್ಟಡದ ನವೀಕರಣ ಹಾಗೂ ಹೊಸ ಪೂರಕ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಅಂದಾಜು 70 ಕೋಟಿ ರೂ.ಗಳಲ್ಲಿ, ಚಿಂತಾಮಣಿ ನಗರದ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಹಾಗೂ ಆಡಿಟೋರಿಯಂ ಅನ್ನು ಒಳಗೊಂಡಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳನ್ನು ಅಂದಾಜು 50 ಕೋಟಿ ರೂ.ಗಳಲ್ಲಿ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉತ್ತರ ಕರ್ನಾಟಕ ಭಾಗದ (ಕಲಬುರಗಿ ಹಾಗೂ ಬೆಳಗಾವಿ ವಿಭಾಗದ) ಜಿಲ್ಲೆಗಳಿಗೆ 10 ಕೋಟಿ ರೂ. ಮತ್ತು ದಕ್ಷಿಣ ಕರ್ನಾಟಕದ ಭಾಗದ (ಮೈಸೂರು ಹಾಗೂ ಬೆಂಗಳೂರು ವಿಭಾಗದ) ಜಿಲ್ಲೆಗಳ ವಿದ್ಯಾರ್ಥಿ ನಿಲಯಗಳಿಗೆ 10 ಕೋಟಿ ರೂ.ಗಳ ಮೊತ್ತದಲ್ಲಿ ಪ್ರತ್ಯೇಕವಾಗಿ ಟೂ ಟಯರ್ ಕಾಟ್‍ಗಳನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ.

ಕೇಂದ್ರ ಪುರಸ್ಕೃತ ಎಸ್‍ಎಎಸ್‍ಸಿಐ ಯೋಜನೆಯಡಿ 99.17 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಮೋದನೆಗೊಂಡಿರುವ ಬೆಂಗಳೂರು ನಗರ ಜಿಲ್ಲೆಯ ತಾತಗುಣಿಯಲ್ಲಿರುವ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‍ನಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿಪಡಿಸುವ ಯೋಜನೆಗೆ ಸಂಬಂಧಿಸಿದಂತೆ ಮೊದಲನೆ ಹಂತದ ಕಾಮಗಾರಿಗಳನ್ನು 55.33 ಕೋಟಿ ರೂ.ಅಂದಾಜು ಮೊತ್ತದಲ್ಲಿ ಕೆಟಿಪಿಪಿ ಕಾಯ್ದೆ ಮೂಲಕ ಟೆಂಡರ್ ಕರೆದು ಕೈಗೊಳ್ಳಲು ವಿಸ್ತೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X