Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ...

20 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ಸಂಪುಟ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ5 Nov 2026 8:25 PM IST
share
20 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ಸಂಪುಟ ಅನುಮೋದನೆ

ಬೆಂಗಳೂರು : ರಾಜ್ಯ ವ್ಯಾಪ್ತಿ ರಸ್ತೆಗಳ ಗುಣಮಟ್ಟ ಹಾಗೂ ಸುಗಮ ಸಂಚಾರಕ್ಕೆ ಒತ್ತು ನೀಡಲು ಪಣತೊಟ್ಟಿರುವ ಕಾಂಗ್ರೆಸ್ ಸರಕಾರ, ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20ಸಾವಿರ ಕೋಟಿ ರೂ.ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ, ರಸ್ತೆಗಳ ಅಭಿವೃದ್ಧಿಗೆ ಸರಕಾರ ಆದ್ಯತೆ ನೀಡಿದ್ದು, ರಾಜ್ಯದ ವಿವಿಧ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ 5, ಘಟ್ಟ 2ರಲ್ಲಿ, ಒಟ್ಟು 1897 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು. ಅನುಬಂಧ-ಇ ಅಡಿಯಲ್ಲಿ 6000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿವಿಧ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ ಮತ್ತು ಕಟ್ಟಡ ಕಾಮಗಾರಿ ಕೈಗೊಳ್ಳಲಾಗುವುದು. ಜೊತೆಗೆ 3ಸಾವಿರ ಕೋಟಿ ರೂ., ಹೆಚ್ಚುವರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲೂ ಸಂಪುಟ ಸಮ್ಮತಿಸಿದ್ದು, ಒಂದು ಜಿಲ್ಲಾ ಕೇಂದ್ರದಿಂದ ಮತ್ತೊಂದು ಜಿಲ್ಲಾ ಕೇಂದ್ರಕ್ಕೆ, ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಕ್ಕೆ ಮತ್ತು ತಾಲೂಕು ಕೇಂದ್ರದಿಂದ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 3986 ಕಿ.ಮೀ. ರಸ್ತೆ ಅಭಿವೃದ್ಧಿಯನ್ನು 6ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಹೊಸ ಯೋಜನೆಗೂ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು.

155 ಕಿ.ಮೀ ರಸ್ತೆಗಳ ಅಭಿವೃದ್ಧಿಗೂ ಒಪ್ಪಿಗೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು 10 ಪ್ಯಾಕೇಜ್ ಗಳಲ್ಲಿ ಕೈಗೊಳ್ಳಲು 3409.02 ಕೋಟಿ ರೂ. ಪರಿಷ್ಕೃ ತ ಅಂದಾಜು ವೆಚ್ಚಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದೂ ಈಶ್ವರ್ ಖಂಡ್ರೆ ತಿಳಿಸಿದರು.

ಬೆಂಗಳೂರು ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಮತ್ತು ಬೆಂಗಳೂರು ನಗರದ ರಸ್ತೆ ಜಾಲವನ್ನು ಬಲಪಡಿಸಲು ಈ ಯೋಜನೆ ಪೂರಕವಾಗಿದೆ. ಬೆಂಗಳೂರು ಸುತ್ತಮುತ್ತಲಿನ 155 ಕಿ.ಮೀ. ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಇಪಿಸಿ ಮಾದರಿಯಲ್ಲಿ 2095 ಕೋಟಿ ರೂ. ಗಳಲ್ಲಿ ಕೈಗೆತ್ತಿಕೊಳ್ಳಲು 2017ರಲ್ಲಿಯೇ ಅನುಮೋದನೆ ನೀಡಲಾಗಿತ್ತು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು 2019 ರಲ್ಲಿ ಪ್ರಾರಂಭಿಸಲಾಗಿದ್ದು, ಪರಿಷ್ಕೃ ತ 142.27 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 121.78 ಕಿ.ಮೀ. ರಸ್ತೆ ಪೂರ್ಣಗೊಂಡಿದೆ ಎಂದು ಸಚಿವರು ವಿವರಿಸಿದರು.

Tags

Cabinet Meeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X