Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು...

15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಸಂಪುಟ ಸಭೆ ನಿರ್ಧಾರ

► "ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಅಸ್ತು" ► "ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆ ಜಾರಿ"

ವಾರ್ತಾಭಾರತಿವಾರ್ತಾಭಾರತಿ9 Sept 2026 8:33 PM IST
share
15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಸಂಪುಟ ಸಭೆ ನಿರ್ಧಾರ

ಬೆಂಗಳೂರು : ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರದಂತೆ, ಇಡೀ ರಾಜ್ಯದಲ್ಲಿ ಮೂರು ಹಂತಗಳಲ್ಲಿ 15ಲಕ್ಷ ನಿವೇಶನಗಳನ್ನು ಬಡವರಿಗೆ ಉಚಿತವಾಗಿ ಹಂಚಿಕೆ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ಹಂಚಿಕೊಂಡರು.

ರಾಜ್ಯದ ಇತಿಹಾಸದಲ್ಲೆ 15 ಲಕ್ಷ ನಿವೇಶನಗಳನ್ನು ವಸತಿ ರಹಿತ ಬಡವರಿಗೆ ಉಚಿತವಾಗಿ ಹಂಚಿಕೆ ಮಾಡಲು ಮಹತ್ವದ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ. ಎಸ್.ಸಿ, ಎಸ್.ಟಿ, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರಿಗೆ ನಿವೇಶನ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುವುದು. ಪ್ರಸಕ್ತ ಸಾಲಿನ ಅಕ್ಟೋಬರ್, ನವೆಂಬರ್ ನಲ್ಲಿ 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಒಟ್ಟು ಮೂರು ಹಂತಗಳಲ್ಲಿ ತಲಾ 5 ಲಕ್ಷದಂತೆ 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಈಗಾಗಲೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಅಗತ್ಯ ಭೂಮಿ ಗುರುತಿಸುವಂತೆ ಸೂಚನೆ ನೀಡಲಾಗಿದೆ. 10 ಸಾವಿರ ಎಕರೆಯನ್ನು ನಿವೇಶನಗಳಿಗಾಗಿ ಗುರುತಿಸಲಾಗಿದೆ. ನಿವೇಶನಗಳನ್ನು ರಚನೆ ಮಾಡಲು ರಾಜ್ಯ ಸರಕಾರದಿಂದ ಅನುದಾನ ಒದಗಿಸಲಾಗುವುದು ಎಂದು ಅವರು ಹೇಳಿದರು.

‘ಭಾರತ್ ಜೋಡೊ ಯುವಕರ ಸಂಘ’ಗಳ ರಚನೆಗೆ ಚಾಲನೆ: ಭಾರತ್ ಜೋಡೊ ಯುವಕರ ಸಂಘಗಳ ರಚನೆಗೆ ಈ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಸದಸ್ಯತ್ವ ನೋಂದಣಿ ಸ್ಥಗಿತಗೊಳಿಸಲಾಗಿತ್ತು. ಮಂಗಳವಾರ(ಸೆ.15)ದಿಂದ ಸದಸ್ಯತ್ವ ಅಭಿಯಾನಕ್ಕೆ ಪುನಃ ಚಾಲನೆ ನೀಡಲಾಗುವುದು. 16-35 ವರ್ಷದವರಿಗೆ ಸದಸ್ಯತ್ವ ನೀಡಲಾಗುವುದು. ಈ ಸಂಬಂಧ ಸಿದ್ಧಪಡಿಸಲಾಗಿರುವ ಅರ್ಜಿ ನಮೂನೆಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ಪ್ರತಿಯೊಂದು ಸಂಘವು ರಿಜಿಸ್ಟ್ರಾರ್ ಸೊಸೈಟಿ ಕಾಯ್ದೆಯಡಿ ನೋಂದಣಿಯಾಗಬೇಕು. ಈಗಾಗಲೆ 7.36 ಲಕ್ಷ ಸದಸ್ಯರ ನೋಂದಣಿಯಾಗಿದೆ. ನಮ್ಮ ಗುರಿ 10 ಲಕ್ಷ ಸದಸ್ಯತ್ವ ನೀಡುವುದಾಗಿದೆ. ಪ್ರತಿಯೊಂದು ಸಂಘದಲ್ಲಿ 15 ಜನ ಪದಾಧಿಕಾರಿಗಳು ಇರುತ್ತಾರೆ. ಸಂಘದ ಸ್ವರೂಪ ಹೇಗಿರಬೇಕು ಎಂಬುದುರ ಕುರಿತು ಜಿಲ್ಲಾ ಮಂತ್ರಿಗಳಿಗೆ ಅಧಿಕಾರ ನೀಡಿದ್ದೇವೆ ಎಂದು ಅವರು ಹೇಳಿದರು.

ಸಂಘದ ಅಧ್ಯಕ್ಷ ಹಾಗೂ ಸರಕಾರದಿಂದ ನಿಯೋಜಿಸುವ ನೋಡಲ್ ಅಧಿಕಾರಿಯ ಜಂಟಿ ಖಾತೆ ಇರುತ್ತದೆ. ಪ್ರತಿಯೊಂದು ಸಂಘಕ್ಕೆ ವಾರ್ಷಿಕ 10 ಲಕ್ಷ ರೂ.ಗಳಂತೆ ಒಂದು ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಠ 4 ಕೋಟಿ ರೂ.ಗಳ ಅನುದಾನ ಲಭ್ಯವಾಗಲಿದೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ರಾಷ್ಟ್ರೀಯ ಹಬ್ಬಗಳ ಆಚರಣೆ ಸೇರಿದಂತೆ ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಸಂಘದ ಸದಸ್ಯತ್ವ ಪಡೆಯಲು ಸಲ್ಲಿಸಲಾಗುವ ಅರ್ಜಿಯಲ್ಲಿ ಜಾತಿ, ಧರ್ಮದ ವಿವರ ಕೇಳುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಅಸ್ತು: ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ತೀರ್ಮಾನ ಮಾಡಿದ್ದೇವೆ. ಸಂಘದಲ್ಲಿ ಒಬ್ಬರು ಅಧ್ಯಕ್ಷ, ಇಬ್ಬರು ಉಪಾಧ್ಯಕ್ಷರು(ಓರ್ವ ಮಹಿಳೆ), ಒಬ್ಬರು ಪ್ರಧಾನ ಕಾರ್ಯದರ್ಶಿ, ಇಬ್ಬರು ಜಂಟಿ ಕಾರ್ಯದರ್ಶಿ(ಓರ್ವ ಮಹಿಳೆ), ಕಾರ್ಯಕಾರಿ ಸಮಿತಿಯಲ್ಲಿ ಆರು ಜನ ಸದಸ್ಯರು(ಇಬ್ಬರು ಮಹಿಳೆಯರು) ಇರಬೇಕು. ಇಲ್ಲಿ ಯಾವುದೆ ಮೀಸಲಾತಿ ಅನ್ವಯವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳ ಸಂಘಗಳಿಗೆ ಚುನಾವಣೆ ನಡೆಸಬೇಕೋ ಬೇಡವೋ ಎಂಬುದರ ಕುರಿತು ಆಯಾ ಕಾಲೇಜು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೆ ತೀರ್ಮಾನ ಕೈಗೊಳ್ಳಬೇಕು. ಇಲ್ಲಿ ಯಾವುದೆ ರಾಜಕೀಯ ಪಕ್ಷಗಳು, ಸಂಘಟನೆಗಳ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಚುನಾವಣೆ ನಡೆಸುವುದು ಕಡ್ಡಾಯವಲ್ಲ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದ ಸಮಿತಿ ನೀಡಿದ ಶಿಫಾರಸ್ಸಿನ ಅನ್ವಯ ಸಂಪುಟ ಸಭೆ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧರಿಸಿದೆ ಎಂದು ಪರಮೇಶ್ವರ್ ಹೇಳಿದರು.

ಉದ್ಯೋಗ ನಿಧಿ ಕಾರ್ಯಕ್ರಮ: ರಾಜ್ಯದಲ್ಲಿ ಅಭಿವೃದ್ಧಿ ಹೊಂದಿದ 10 ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವಂತಹ ಕಂಪೆನಿಗೆ ಪ್ರತಿ ಉದ್ಯೋಗಕ್ಕೆ ಪ್ರತಿ ತಿಂಗಳು 2500 ರೂ.ಗಳಂತೆ ಎರಡು ವರ್ಷಗಳ ವರೆಗೆ ಪ್ರೋತ್ಸಾಹ ಧನ ನೀಡುವ ‘ಉದ್ಯೋಗ ನಿಧಿ’ ಕಾರ್ಯಕ್ರಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಇದಕ್ಕಾಗಿ 300 ಕೋಟಿ ರೂ.ಅನುದಾನ ಮೀಸಲಿಡಲಾಗುವುದು ಎಂದು ಅವರು ಹೇಳಿದರು.

ಏರೋಸ್ಪೇಸ್ ನೀತಿ 2026-31ಕ್ಕೆ ಅನುಮೋದನೆ: ‘ಕರ್ನಾಟಕ ಏರೋಸ್ಪೇಸ್ ನೀತಿ 2026-31’ಕ್ಕೆ ಅನುಮೋದನೆ ನೀಡಲಾಗಿದೆ. ಏರೋಸ್ಪೇಸ್, ಡಿಫೆನ್ಸ್, ಏವಿಯೇಷನ್, ಸ್ಪೇಸ್ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಪಾದನೆ ಹಾಗೂ ನಾವೀನ್ಯತೆಯ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಕೇಂದ್ರವನ್ನಾಗಿ ಸ್ಥಾಪಿಸುವುದು ಈ ನೀತಿಯ ಗುರಿಯಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಈ ನೀತಿಯಡಿ ಐದು ವರ್ಷಗಳಲ್ಲಿ 60 ಸಾವಿರ ಕೋಟಿ ರೂ. ಹೂಡಿಕೆ ಹಾಗೂ 60 ಸಾವಿರ ಉದ್ಯೋಗಗಳನ್ನು ಸೃಷ್ಟಿ ಮಾಡುವುದಾಗಿದೆ. ಅದರಂತೆ, ವಿವಿಧ ವರ್ಗಗಳಡಿ ಶೇ.25 ರಿಂದ 30ರಷ್ಟು ಬಂಡವಾಳ ಸಹಾಯ ಧನ ಸೇರಿದಂತೆ ಇತರ ಸೌಕರ್ಯಗಳನ್ನು ಸರಕಾರ ನೀಡಲಿದೆ. ಎಚ್‍ಎಎಲ್ ಕೇಂದ್ರದಲ್ಲಿ 40 ವಿಮಾನಗಳು, 97 ಎಲ್‍ಸಿಎ ನಿರ್ಮಾಣದ ಯೋಜನೆಯಿದ್ದು, ಇದಕ್ಕೆ ಅಗತ್ಯವಿರುವ ಉಪಕರಣಗಳ ಉತ್ಪಾದನೆಗೆ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬರುವವರಿಗೆ ನಾವು ಅಗತ್ಯ ನೆರವು ನೀಡಲಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

ಶ್ರಮಿಕ್ ನಿವಾಸ್: ಕಾರ್ಮಿಕರು ಕೆಲಸ ಮಾಡುವ ಜಾಗದಲ್ಲೆ ಮನೆಗಳನ್ನು ಸಂಬಂಧಪಟ್ಟ ಕೈಗಾರಿಕೆಗಳು, ಕಂಪೆನಿಗಳು ನಿರ್ಮಿಸಿಕೊಡುವಂತಹ ‘ಶ್ರಮಿಕ್ ನಿವಾಸ್’ ವಸತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಡಿ 10 ಸಾವಿರ ಮನೆಗಳನ್ನು ನಿರ್ಮಿಸಬೇಕು ಎಂಬ ಚಿಂತನೆಯಿದೆ. ಯಾವ ಕೈಗಾರಿಕೆ, ಕಂಪೆನಿ ಕಾರ್ಮಿಕರಿಗೆ ಮನೆಗಳನ್ನು ಕಟ್ಟಿಕೊಡಲು ಮುಂದೆ ಬರುತ್ತದೆಯೋ ಅವರಿಗೆ ಸರಕಾರದಿಂದ ಭೂಮಿ, ಸಹಾಯಧನ ಸೇರಿದಂತೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಪರಮೇಶ್ವರ್ ಮಾಹಿತಿ ನೀಡಿದರು.

‘ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆ ಜಾರಿ’: ರೈತರಿಂದ ಟ್ರ್ಯಾಕ್ಟರ್‍ಗಳನ್ನು ರಾಜ್ಯ ಸರಕಾರವೆ ಬಾಡಿಗೆಗೆ ಪಡೆದು ಬಡ ರೈತರ ಜಮೀನು ಉಳುಮೆ ಮಾಡಲು ಬಳಸಲು ಅನುವು ಮಾಡಿಕೊಡುವ ‘ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆ’ ಜಾರಿಗೆ ತರಲು ಸಂಪುಟ ಸಭೆ ನಿರ್ಧರಿಸಿದೆ. ಅದರಂತೆ, ಪ್ರತಿ ಜಿಲ್ಲೆಯ ಒಂದು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲು 152ಕೋಟಿ ರೂ.ಗಳ ಅನುದಾನ ಒದಗಿಸಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಪುಟ್ಟಸ್ವಾಮಿಗೌಡ ತಮ್ಮ ಕ್ಷೇತ್ರದಲ್ಲಿ ಸಣ್ಣ ಪ್ರಮಾಣದಲ್ಲಿ ಈ ಕಾರ್ಯಕ್ರಮ ಕೈಗೊಂಡಿದ್ದರು. ಅದೇ ಮಾದರಿಯಲ್ಲಿ ಇಡೀ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ತರಲು ಸರಕಾರ ನಿರ್ಧರಿಸಿದೆ. ಈಗ ಎತ್ತುಗಳು ಇಲ್ಲ, ಉಳುಮೆ ಮಾಡಲು ಜನ ಸಿಗುತ್ತಿಲ್ಲ. ಬಡ ರೈತರಿಗೆ ಅನುಕೂಲ ಕಲ್ಪಿಸಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.

Tags

Cabinet meetinghousing sites
share
ವಾರ್ತಾಭಾರತಿ
ವಾರ್ತಾಭಾರತಿ
Next Story
X