Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಸಂಪುಟ ಸಭೆ | ರಾಜ್ಯದಲ್ಲಿ 100...

ಸಚಿವ ಸಂಪುಟ ಸಭೆ | ರಾಜ್ಯದಲ್ಲಿ 100 ಗ್ರಾಮ ಕೋರ್ಟ್‌ ಸ್ಥಾಪನೆ; ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗಲಿದೆ ʼಗೃಹಲಕ್ಷ್ಮಿʼ ಹಣ

ವಾರ್ತಾಭಾರತಿವಾರ್ತಾಭಾರತಿ19 Oct 2023 9:02 PM IST
share
ಸಚಿವ ಸಂಪುಟ ಸಭೆ | ರಾಜ್ಯದಲ್ಲಿ 100 ಗ್ರಾಮ ಕೋರ್ಟ್‌ ಸ್ಥಾಪನೆ; ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗಲಿದೆ ʼಗೃಹಲಕ್ಷ್ಮಿʼ ಹಣ

ಬೆಂಗಳೂರು: 2008-09ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರವು ‘ಗ್ರಾಮ ನ್ಯಾಯಾಲಯ’ಗಳನ್ನು ಸ್ಥಾಪಿಸುವ ಸಂಬಂಧ ಕಾನೂನು ಜಾರಿಗೆ ತಂದಿತ್ತು. ಅದರಂತೆ, ರಾಜ್ಯದಲ್ಲಿ 25 ಕೋಟಿ ರೂ.ವೆಚ್ಚದಲ್ಲಿ 100 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ʼʼಗ್ರಾಮೀಣ ಪ್ರದೇಶದ ಜನರ ಮನೆಯ ಬಾಗಿಲಿಗೆ ನ್ಯಾಯದಾನ ಸಿಗಬೇಕು. ಗ್ರಾಮೀಣ ಜನರು ನ್ಯಾಯಕ್ಕಾಗಿ ಪಟ್ಟಣ, ನಗರ ಪ್ರದೇಶಗಳಿಗೆ ಅನಗತ್ಯವಾಗಿ ಅಲೆದಾಡಬಾರದು ಎಂಬ ಉದ್ದೇಶದಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಇವು ಜೆಎಂಎಫ್‍ಸಿ ಹಂತದ ನ್ಯಾಯಾಲಯಗಳ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿವೆʼʼ ಎಂದು ಅವರು ಹೇಳಿದರು.

ಕೇಂದ್ರ ಸರಕಾರವು ಈ ಯೋಜನೆ ಅನುಷ್ಠಾನಕ್ಕಾಗಿ ಒಂದು ಬಾರಿಗೆ ಅನ್ವಯಿಸುವಂತೆ ಒಂದು ಗ್ರಾಮ ನ್ಯಾಯಾಲಯಕ್ಕೆ 18 ಲಕ್ಷ ರೂ.ಗಳನ್ನು ನೀಡಲಿದೆ. ಈ ಗ್ರಾಮ ನ್ಯಾಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಿಗಲಿದೆ ʼಗೃಹಲಕ್ಷ್ಮಿʼಹಣ

ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡುವುದು ಹಾಗೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಹಣ ನೀಡುವ ವ್ಯವಸ್ಥೆಯನ್ನೆ ಮುಂದುವರೆಸಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಅವರು ತಿಳಿಸಿದರು.


110 ಮಲ ತ್ಯಾಜ್ಯ ಸಂಸ್ಕರಣಾ ಸ್ಥಾವರಗಳ ನಿರ್ಮಾಣ: 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಯಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎನ್‍ಜಿಟಿ ಪರಿಸರ ಪರಿಹಾರ ನಿಧಿಯಡಿ 400.24 ಕೋಟಿ ರೂ.ವೆಚ್ಚದಲ್ಲಿ ಒಟ್ಟು 110 ಮಲ ತ್ಯಾಜ್ಯ ಸಂಸ್ಕರಣಾ ಸ್ಥಾವರಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸೆಪ್ಟಿಕ್ ಟ್ಯಾಂಕ್‍ಗಳಿಂದ ಎಫ್‍ಎಸ್‍ಟಿಪಿ ಘಟಕಗಳಿಗೆ ಮಲದ ಕೆಸರನ್ನು ಸಾಗಿಸಲು ಕೆಯುಐಡಿಎಫ್‍ಸಿ ವತಿಯಿಂದ ಎಸ್‍ಬಿಎಂ ನಿಧಿ ಅಡಿಯಲ್ಲಿ 40.25 ಕೋಟಿ ರೂ.ವೆಚ್ಚದಲ್ಲಿ 161 ಸೆಸ್‍ಪೂಲ್ ವಾಹನಗಳನ್ನು ಖರೀದಿಸಲು ಅನುಮೋದಿಸಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X