Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಪುಟ ಸಭೆ | ನೀಟ್ ಪರೀಕ್ಷೆ, ಒಂದು ದೇಶ...

ಸಂಪುಟ ಸಭೆ | ನೀಟ್ ಪರೀಕ್ಷೆ, ಒಂದು ದೇಶ - ಒಂದು ಚುನಾವಣೆ ವಿರುದ್ಧ ನಿರ್ಣಯ?

ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆಗೆ ವಿಧೇಯಕ ಮಂಡನೆಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ22 July 2024 11:27 PM IST
share
ಸಂಪುಟ ಸಭೆ | ನೀಟ್ ಪರೀಕ್ಷೆ, ಒಂದು ದೇಶ - ಒಂದು ಚುನಾವಣೆ ವಿರುದ್ಧ ನಿರ್ಣಯ?

ಬೆಂಗಳೂರು : ನೀಟ್ ಪರೀಕ್ಷೆ, ಒಂದು ದೇಶ ಒಂದು ಚುನಾವಣೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ ಸಂಬಂಧ ಬಿ.ಎಸ್.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆ ಮಾಡುವ ಸಂಬಂಧ ನೀಡಿರುವ ಶಿಫಾರಸ್ಸು ಒಪ್ಪಿಕೊಂಡಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಿದೆ.

ಕಾರ್ಮಿಕರ ಕೆಲಸದ ಅವಧಿಯ ಹೆಚ್ಚಳ ವಿಚಾರ: ಕಾರ್ಮಿಕರ ಕೆಲಸದ ಅವಧಿಯನ್ನು12 ರಿಂದ 14 ತಾಸು ಹೆಚ್ಚಳ ಮಾಡುವ ಕುರಿತು ವಿಧೇಯಕ ಮಂಡನೆ ಮಾಡುವ ವಿಚಾರದಲ್ಲಿ ಸಚಿವ ಸಂಪುಟ ಹಿಂದೆ ಸರಿದಿದೆ.

ಈ ಬಗ್ಗೆ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ ನಡೆದಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಈ‌ ಬಗ್ಗೆ ಸದ್ಯ ಯಾವುದೇ ತೀರ್ಮಾನ ಬೇಡ. ಮುಂದಿನ ದಿನಗಳಲ್ಲಿ ಚರ್ಚಿಸೋಣ ಎಂದು ಸಂಪುಟ ಸದಸ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ವಿಚಾರವು ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಈ ಬಗ್ಗೆಯೂ ಯಾವುದೇ ಆತುರದ ನಿರ್ಧಾರ ಬೇಡ. ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಇದಲ್ಲದೇ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 13 ಕೈಗಾರಿಕಾ ವಸಾಹತುಗಳನ್ನು ಭಾರತ ಸರಕಾರದ ಎಂ.ಎಸ್.ಇ-ಸಿಡಿಪಿ ಯೋಜನೆಯಡಿ 39 ಕೋಟಿ ರೂ.ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ 9 ಹಿರಿಯ ಸಹಾಯಕ ಸರಕಾರಿ ಅಭಿಯೋಜಕರ ಸೇವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ರಾಜ್ಯ ವಿದ್ಯುತ್ ನಿಗಮವು ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳಿಂದ 6750 ಕೋಟಿ ರೂ.ಗಳ ಸಾಲ ಪಡೆಯುವ ಸಂಬಂಧ ಸರಕಾರದ ಖಾತರಿಯನ್ನು ನೀಡಿ ಪ್ರಸಕ್ತ ಸಾಲಿನ ಮಾ.30ರಂದು ಸರಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

‘ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಕೆಲವು ಇತರೆ ಕಾನೂನು(ತಿದ್ದುಪಡಿ) ವಿಧೇಯಕ-2024ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಿಜ್ಞಾನ ಗ್ಯಾಲರಿ ಸಂಸ್ಥೆಯಲ್ಲಿ 10 ಕೋಟಿ ರೂ.ಮೊತ್ತದ ಕಾರ್ಪಸ್ ಫಂಡ್ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಲಗೇರಿ ನೌಕಾ ನೆಲೆಯ ಸಮೀಪದಲ್ಲಿ ಕಾರವಾರ ಸಿವಿಲ್ ಎನ್‌ಕ್ಲೇವ್ ಅನ್ನು ಅಭಿವೃದ್ಧಿಪಡಿಸಲು ಹೆಚ್ಚುವರಿ ಭೂ ಪರಿಹಾರ ಮೊತ್ತ 70.40 ಕೋಟಿ ರೂ.ಗಳನ್ನು ಭೂ ಮಾಲಕರಿಗೆ ಪಾವತಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 44 ಪೂರ್ಣ ಕವಚ ನಿರ್ಮಿತ ಗ್ರಾಮಾಂತರ ಸಾರಿಗೆ ಬಸ್ಸುಗಳನ್ನು 18.42 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಖಾಸಗಿ ಆಸ್ಪತ್ರೆ, ವೈದ್ಯೋಪಚಾರ ಸಿಬ್ಬಂದಿ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸುವ ವಿಧೇಯಕ ಮಂಡಿಸಲು ಸರ್ಕಾರ ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X