ರಾಷ್ಟ್ರಕವಿ ಕುವೆಂಪು ಅವರಿಗೆ ʼಭಾರತ ರತ್ನʼ : ಕೇಂದ್ರಕ್ಕೆ ಸಚಿವ ಸಂಪುಟ ಶಿಫಾರಸು

ಕುವೆಂಪು
ಬೆಂಗಳೂರು, ಸೆ.11: ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಕೇಂದ್ರ ಸರಕಾರ ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡುವಂತೆ ರಾಜ್ಯ ಸರಕಾರ ಶಿಫಾರಸು ಮಾಡಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಯುಗದ ಕವಿ, ಜಗದ ಕವಿ ಎಂದೇ ಖ್ಯಾತರಾಗಿರುವ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಕೇಳದವರಿಲ್ಲ. ಅವರು ಕನ್ನಡ ಸಾಹಿತ್ಯ, ಸಂಸ್ಕೃತಿಯ ಶತ ಪುರುಷರೂ ಆಗಿದ್ದು, ಮರಣೋತ್ತರವಾಗಿ ʼಭಾರತ ರತ್ನʼ ಪ್ರಶಸ್ತಿ ನೀಡಲು ಕೇಂದ್ರಕ್ಕೆ ರಾಜ್ಯವು ಶಿಫಾರಸು ಮಾಡಿದೆ ಎಂದು ನುಡಿದರು.
Next Story





