Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದೇಶ ಪ್ರವಾಸ ರದ್ದು: ನಷ್ಟ ಮರುಪಾವತಿ...

ವಿದೇಶ ಪ್ರವಾಸ ರದ್ದು: ನಷ್ಟ ಮರುಪಾವತಿ ಮಾಡುವಂತೆ ಮಾಜಿ ಶಾಸಕ ಚಿಕ್ಕಣ್ಣಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ8 Sept 2023 7:15 PM IST
share
ವಿದೇಶ ಪ್ರವಾಸ ರದ್ದು: ನಷ್ಟ ಮರುಪಾವತಿ ಮಾಡುವಂತೆ ಮಾಜಿ ಶಾಸಕ ಚಿಕ್ಕಣ್ಣಗೆ ಹೈಕೋರ್ಟ್ ಆದೇಶ

ಬೆಂಗಳೂರು, ಸೆ.8: ರಾಜ್ಯ ವಿಧಾನಸಭಾ ಸಮಿತಿಯಿಂದ ವಿದೇಶಗಳಲ್ಲಿ ಕಾನೂನು ಅಧ್ಯಯನಕ್ಕಾಗಿ ಆಯ್ಕೆಯಾಗಿ, ಕೊನೆಗಳಿಗೆಯಲ್ಲಿ ಪ್ರವಾಸ ರದ್ದುಗೊಳಿಸಿದ್ದರಿಂದ ಉಂಟಾದ 3.89 ಲಕ್ಷ ರೂ.ನಷ್ಟದ ಹಣವನ್ನು ಮರುಪಾವತಿ ಮಾಡುವಂತೆ ವಿಧಾನಸಭಾ ಸಚಿವಾಲಯ ಎಚ್.ಡಿ.ಕೋಟೆ ಕ್ಷೇತ್ರದ ಮಾಜಿ ಶಾಸಕ ಚಿಕ್ಕಣ್ಣ ವಿರುದ್ಧ ಹೊರಡಿಸಿದ್ದ ಆದೇಶ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ವಿಧಾನಸಭಾ ಕಾರ್ಯದರ್ಶಿಯ ಆದೇಶ ರದ್ದು ಕೋರಿ ಚಿಕ್ಕಣ್ಣ ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾ.ಆರ್.ನಟರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿತು. ಅಧ್ಯಯನ ಪ್ರವಾಸ 2009ರ ಆ.23 ರಂದು ನಿಗದಿಯಾಗಿತ್ತು. ಆ ದಿನಕ್ಕೆ ತೀರಾ ಹತ್ತಿರದಲ್ಲಿ ಅಂದರೆ 5 ದಿನಗಳ ಮುನ್ನ ಪ್ರವಾಸ ರದ್ದುಗೊಳಿಸಲು ಮನವಿ ಸಲ್ಲಿಸಿದ್ದರು.

ಪ್ರವಾಸ ಆಯೋಜಕರು ಮೊದಲೇ ವಿಮಾನ ಪ್ರಯಾಣ, ವಸತಿ ಮತ್ತಿತರ ವ್ಯವಸ್ಥೆಗಾಗಿ ಖರ್ಚು ಮಾಡಿದ್ದು, ಅದನ್ನು ಶಾಸಕರು ಮರುಪಾವತಿಸಲಿಲ್ಲ. ಅರ್ಜಿದಾರರು ಗಂಭೀರ ಕಾರಣದಿಂದ ಪ್ರವಾಸ ಮಾಡಲಿಲ್ಲ ಎಂದು ಈಗ ಹೇಳುತ್ತಿರುವುದನ್ನು ಒಪ್ಪಲಾಗದು. ಸಚಿವಾಲಯದ ಆದೇಶದಂತೆ 3,89,800 ರೂ. ಮರುಪಾವತಿ ಮಾಡಲು ಸಾಧ್ಯವಿಲ್ಲ ಎನ್ನಲಾಗದು ಎಂದು ನ್ಯಾಯಪೀಠ ಹೇಳಿತು.

ಪ್ರಕರಣದ ಎಲ್ಲ ಅಂಶಗಳು ಸ್ಪಷ್ಟವಾಗಿವೆ. ಹೀಗಾಗಿ, ಸ್ಪೀಕರ್ ಅವರು, ಚಿಕ್ಕಣ್ಣ ಅವರ ಭತ್ಯೆ ಮತ್ತಿತರವುಗಳಿಂದ ಆಗಿರುವ ನಷ್ಟವನ್ನು ಕಡಿತಗೊಳಿಸುವಂತೆ ಮಾಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡಲಾಗದು. ಸ್ವಾಭಾವಿಕ ನ್ಯಾಯದ ತತ್ವದಂತೆ 3,89,800 ರೂ. ಮರುಪಾವತಿ ಮಾಡಲೇಬೇಕಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಪ್ರಕರಣವೇನು?: 2009ರಲ್ಲಿ ವಿದೇಶದಲ್ಲಿ ಕಾನೂನು ವ್ಯವಸ್ಥೆಗಳ ಬಗ್ಗೆ ಅಧ್ಯಯನ ನಡೆಸುವ ಸಮಿತಿಗೆ ಶಾಸಕ ಚಿಕ್ಕಣ್ಣ ಸದಸ್ಯರಾಗಿ ನೇಮಕಗೊಂಡಿದ್ದರು. ಸಮಿತಿಯು ಅಧ್ಯಯನಕ್ಕಾಗಿ 2009ರ ಆ.23 ರಿಂದ ಸೆ.10 ರವರೆಗೆ ಆಸ್ಟೇಲಿಯಾ, ನ್ಯೂಜಿಲೆಂಡ್, ಹಾಂಕಾಂಗ್ ಮತ್ತು ಬ್ಯಾಂಕಾಕ್ ಪ್ರವಾಸ ಆಯೋಜಿಸಿತ್ತು.

ರಾಜ್ಯ ಸರಕಾರ ಸಮಿತಿಯ ಸದಸ್ಯರ ಪ್ರವಾಸದ ಖರ್ಚು ವೆಚ್ಚವನ್ನು ಭರಿಸುವುದಾಗಿ ಒಪ್ಪಿ, ಚಿಕ್ಕಣ್ಣ ಪರವಾಗಿ ಪ್ರವಾಸ ಆಯೋಜಕ ಕಾಕ್ಸ್ ಆ್ಯಂಡ್ ಕಿಂಗ್ಸ್‍ಗೆ 3,89,800ರೂ. ಪಾವತಿ ಮಾಡಿತ್ತು. ಅದರಂತೆ ಚಿಕ್ಕಣ್ಣ 2009ರ ಆ.23ರಂದು ಆಸ್ಟ್ರೇಲಿಯಾಕ್ಕೆ ತೆರಳಬೇಕಿತ್ತು. ಆದರೆ ಅದಕ್ಕೂ ಐದು ದಿನ ಮುಂಚೆ ತಮಗೆ ಅನಾರೋಗ್ಯದಿಂದ ಪ್ರವಾಸ ಕೈಗೊಳ್ಳಲು ಸಾಧ್ಯವಿಲ್ಲ. ಪ್ರವಾಸ ಆಯೋಜಕ ಸಂಸ್ಥೆಗೆ ನೀಡಿರುವ 4.15 ಲಕ್ಷ ರೂ.ಗಳನ್ನು ವಾಪಸ್ ಪಡೆದುಕೊಳ್ಳುವಂತೆ ಅರ್ಜಿದಾರರು ಸ್ಪೀಕರ್‌ ಗೆ ತಿಳಿಸಿದ್ದರು.

ಪ್ರವಾಸ ಆಯೋಜಕ ಸಂಸ್ಥೆ, ಕೊನೆಯ ಕ್ಷಣದಲ್ಲಿ ಪ್ರವಾಸ ರದ್ದುಪಡಿಸಿರುವುದರಿಂದ ವೆಚ್ಚದ ಶೇ.20ರಷ್ಟು ಮಾತ್ರ ಮರುಪಾವತಿ ಪಡೆಯಲು ಅರ್ಹರು ಎಂದು ಹೇಳಿತ್ತು. ವಿಧಾನಸಭೆಯ ಸ್ಪೀಕರ್, ಚಿಕ್ಕಣ್ಣ ಪ್ರವಾಸವನ್ನು ಕೊನೆ ಗಳಿಗೆಯಲ್ಲಿ ರದ್ದುಗೊಳಿಸಿರುವುದರಿಂದ ಆಗಿರುವ ನಷ್ಟವನ್ನು ಭರ್ತಿ ಮಾಡಿಕೊಳ್ಳಲು 3,89,800 ರೂ.ಗಳ ಮರು ಪಾವತಿಗೆ ಚಿಕ್ಕಣ್ಣ ಅವರಿಗೆ ಸೂಚನೆ ನೀಡಿತ್ತು. ಅದನ್ನು ಪ್ರಶ್ನಿಸಿ ಚಿಕ್ಕಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X