Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಕ್ಕೂಟ ವ್ಯವಸ್ಥೆಯಲ್ಲಿ ಏಕಸ್ವಾಮ್ಯ,...

ಒಕ್ಕೂಟ ವ್ಯವಸ್ಥೆಯಲ್ಲಿ ಏಕಸ್ವಾಮ್ಯ, ಅಧ್ಯಕ್ಷೀಯ ಮಾದರಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

"ರಾಜ್ಯದ ಕೇಂದ್ರ ಮಂತ್ರಿಗಳು, ಸಂಸದರು ಅನ್ಯಾಯವನ್ನು ಸಮರ್ಥಿಸುತ್ತಿದ್ದರೆ ರಾಜ್ಯದ ಭವಿಷ್ಯದ ಗತಿ ಏನು?"

ವಾರ್ತಾಭಾರತಿವಾರ್ತಾಭಾರತಿ14 Feb 2024 8:31 PM IST
share
ಒಕ್ಕೂಟ ವ್ಯವಸ್ಥೆಯಲ್ಲಿ ಏಕಸ್ವಾಮ್ಯ, ಅಧ್ಯಕ್ಷೀಯ ಮಾದರಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು , ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಕ್ಸ್ ಸ್ಪೇಸ್ ನಲ್ಲಿ ಇಂದು ನಡೆದ "ನಮ್ಮ ಹಕ್ಕು ನಮ್ಮ ತೆರಿಗೆ" ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡಿ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿ ಇದರ ಶಿಫಾರಸ್ಸುಗಳನ್ನು ಕೇಂದ್ರ ಸರಕಾರ ಜಾರಿ ಮಾಡುತ್ತದೆ ಎಂದರು.

ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ

15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14 ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ 4.71% ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ 1.07% ನಮಗೆ ಕಡಿತ ಆಗಿ ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದ್ದು ರಾಜ್ಯಕ್ಕೆ 1,87000 ಕೋಟಿ ನಷ್ಟ ಆಗಿದೆ. ಅಂದರೆ ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ತಿಳಿಸಿದರು.

ಬೆಂಗಳೂರು ಫೆರಿಫೆರಲ್ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6000 ಕೋಟಿ ಸೇರಿ ಒಟ್ಟು 11495 ಕೋಟಿ ವಿಶೇಷ ಅನುದಾನ ಕೊಡಲು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಬೇಸರ ವ್ಯಕ್ತಪಡಿಸಿದರು.

ಸೆಸ್ ಮತ್ತು ಸರ್ ಚಾರ್ಜ್ ನಿಂದ ಸಂಗ್ರಹ ಆಗಿದ್ದ ತೆರಿಗೆರಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ ಇದರಲ್ಲೂ ನಾವು ರಾಜ್ಯಗಳು ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ಹೇಳೋದು, "ನನ್ನ ತೆರಿಗೆ ನನ್ನ ಹಕ್ಕು" ಎಂದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದ್ರೆ ದೇಶ ದುರ್ಬಲ ಆಗ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗ್ತದೆ ಎಂದು ನುಡಿದರು.

ನಮಗೆ ಅನ್ಯಾಯ ಮಾಡಬೇಡಿ

ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ಅಧಿಕ ಹಣ ಹೋಗ್ತದೆ. ನಮಗೆ 52000 ಸಾವಿರ ಕೋಟಿ ಮಾತ್ರ ಕೊಡ್ತಾರೆ. ಇದನ್ನು ಸಹಿಸಬೇಕಾ? ಆದರೆ ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು 30% ನಿಂದ 22.5%ಕ್ಕೆ ಇಳಿಸಿದರು. ಕಾರ್ಪೋರೇಟ್ ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದರು. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚೆಚ್ಚೆ ಮಾಡುತ್ತಲೇ ಹೋಗುತ್ತಿದ್ದಾರೆ ಎಂದರು.

ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ

ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದುಕೊಂಡು , ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದರು.

ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 50 % ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ ಎಂದು ಮೋದಿ ಕೇಳಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಇದೇ ನರೇಂದ್ರ ಮೋದಿ ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. "ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಆಕ್ರೋಶ ವ್ಯಾಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X