Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯಗೆ ನಾನು ʼವಿಲನ್ʼ ಆಗದೇ...

ಸಿದ್ದರಾಮಯ್ಯಗೆ ನಾನು ʼವಿಲನ್ʼ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Oct 2023 6:58 PM IST
share
ಸಿದ್ದರಾಮಯ್ಯಗೆ ನಾನು ʼವಿಲನ್ʼ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ. 26: ‘ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಜ್ ಹೊಟೇಲ್‍ನಲ್ಲಿದ್ದೆ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದಾರೆ. ತಾಜ್ ಹೊಟೇಲ್‍ನಲ್ಲಿ ನಾನು ಮೋಜು-ಮಸ್ತಿ ಮಾಡುತ್ತಿರಲಿಲ್ಲ. ಬದಲಿಗೆ ಅಲ್ಲಿ ಅಭಿವೃದ್ಧಿ ಕೆಲಸದ ಚರ್ಚೆ ಮಾಡುತ್ತಿದ್ದೆ. ನನ್ನ ಬಳಿ ಎಲ್ಲ ದಾಖಲಾತಿಗಳು ಇವೆ’ ಎಂದು ತಿರುಗೇಟು ನೀಡಿದರು.

‘ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್(ಗಿಳಿಮರಿ) ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ʻಸರಕಾರ ಬೀಳಿಸಿದ್ದ ಸಿದ್ದರಾಮಯ್ಯʻ: ‘ನನ್ನ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ. ಬಿಜೆಪಿಯವರು ಸರಕಾರ ಬೀಳಿಸಿದ್ದರು ಎಂದು ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ. ರಮೇಶ್ ಜಾರಕಿಹೋಳಿ ಯಾರು?’ ಎಂದು ಖಾರವಾಗಿ ಪ್ರಶ್ನಿಸಿದರು.

‘ರಮೇಶ್ ಜಾರಕಿಹೊಳಿ ಅವರಿಗೂ ನನಗೂ ಯಾವ ಶತ್ರುತ್ವ ಇತ್ತಾ? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ಸಮ್ಮಿಶ್ರ ಸರಕಾರ ಬಿದ್ದು ಹೋಯಿತು’ ಎಂದು ಕುಮಾರಸ್ವಾಮಿ ಆರೋಪ ಮಾಡಿದರು.

‘ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ, ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್‍ನಿಂದ ಕಳುಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಿಸಿದ ಅವರು, ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ. ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಲೇವಡಿ ಮಾಡಿದರು.

‘ಗೃಹಲಕ್ಷ್ಮಿ ರಾಜಸ್ಥಾನದಲ್ಲಿ ಏಕೆ 10 ಸಾವಿರ ರೂ.ಕೊಡ್ತಿದ್ದೀರಾ? ಎಲ್ಲ ಕಡೆ ಗ್ಯಾರಂಟಿಗಳನ್ನು ಕೊಡುತ್ತಿದೆ ಕಾಂಗ್ರೆಸ್. ಈ ಕಾರಣಕ್ಕೆ ಎಲ್ಲ ಯೋಜನೆಗಳು ಹಳ್ಳ ಹಿಡಿದು ಹೋಗಿವೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ.. ಥೂ.. ಎಂದು ಉಗಿಯೋ ಕಾಲ ಬರುತ್ತದೆ ಎಂದು ಕುಮಾರಸ್ವಾಮಿ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X