ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಿರುವುದು ದ್ವೇಷ ರಾಜಕಾರಣವಲ್ಲ: ಜಿ.ಪರಮೇಶ್ವರ್

ಬೆಂಗಳೂರು : ಮುಸ್ಲಿಮ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣೆ ಮಾಡಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಿರುವುದು ದ್ವೇಷದ ರಾಜಕಾರಣವಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸುಖಾಸುಮ್ಮನೆ ಯಾರು ಕೂಡ ಒಬ್ಬ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲು ಆಗುವುದಿಲ್ಲ ನಿಜಕ್ಕೂ ಹರೀಶ್ ಪೂಂಜಾ ಅವರು ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡುವುದು ಒಳ್ಳೆಯದಲ್ಲ. ಅವರು ದ್ವೇಷದ ರಾಜಕಾರಣದಿಂದ ಆ ರೀತಿ ಹೇಳಿಕೆ ನೀಡಿದ್ದಾರೋ, ಏನೋ ನನಗೆ ಗೊತ್ತಿಲ್ಲ ಎಂದರು.
ಹರೀಶ್ ಪೂಂಜಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅವರ ಭಾಷಣಗಳ ದಾಖಲೆಗಳನ್ನು ಸಂಗ್ರಹಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸರೇ ಕ್ರಮ ಜರುಗಿಸುತ್ತಾರೆ, ಸರಕಾರದ ಹಸ್ತಕ್ಷೇಪ ಇರುವುದಿಲ್ಲ ಎಂದು ಜಿ.ಪರಮೇಶ್ವರ್ ಹೇಳಿದರು.
Next Story





