Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾತಿ ಗಣತಿ| ಸಿಎಂ ತರಾತುರಿ ನಡೆ...

ಜಾತಿ ಗಣತಿ| ಸಿಎಂ ತರಾತುರಿ ನಡೆ ಸಂಶಯಾಸ್ಪದವಾಗಿದೆ; ಆರ್‌ ಅಶೋಕ್

ವಾರ್ತಾಭಾರತಿವಾರ್ತಾಭಾರತಿ23 Nov 2023 4:28 PM IST
share
ಜಾತಿ ಗಣತಿ| ಸಿಎಂ ತರಾತುರಿ ನಡೆ ಸಂಶಯಾಸ್ಪದವಾಗಿದೆ; ಆರ್‌ ಅಶೋಕ್

ಬೆಂಗಳೂರು : ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ, ಸಚಿವ ಸಂಪುಟದಲ್ಲೇ ಸಹಮತ ಇಲ್ಲ. ಇಂತಹ ಸಂದರ್ಭದಲ್ಲಿ ವಿವಾದಿತ ವರದಿ ಪಡೆಯಲು ಆತುರ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಗುರುವಾರ ವಿಧಾನಸೌಧದ ತಮ್ಮಅಧಿಕೃತ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ " ಸರಕಾರದ ಕೋಟಿಗಟ್ಟಲೇ ಹಣ ಕೊಟ್ಟು ಸಿದ್ಧಪಡಿಸಿದ ವರದಿ ಕಳುವಾಗಲು ಯಾರು ಕಾರಣ? ಅದರ ಹೊಣೆ ಯಾರದ್ದು? ಕಳವು ಪ್ರಕರಣದ ಬಗ್ಗೆ ಏಕೆ ತನಿಖೆ ನಡೆಸಲಿಲ್ಲ. ಮೂಲ ವರದಿ ಕಳುವಾಗಿದ್ದರೂ ಅದರ ದತ್ತಾಂಶ ಇದೆ ಎಂದು ಪರಿಷ್ಕೃತ ವರದಿ ಸಿದ್ಧಪಡಿಸುವುದು ಎಷ್ಟು ಸರಿ ಎಂದು ಮುಖ್ಯಮಂತ್ರಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಯಾರನ್ನೂ ಓಲೈಸಲು ಸಿಎಂ ಯತ್ನ;

ಹತ್ತು ವರ್ಷಗಳ ಹಿಂದಿನ ಜನಸಂಖ್ಯೆಗೂ, ಈಗಿನ ಜನಸಂಖ್ಯೆಗೂ ಸಾಕಷ್ಟು ವ್ಯತ್ಯಾಸ ಇದೆ. ಸಾರ್ವಜನಿಕರಿಂದಲೂ ತಮ್ಮ ಮನೆಗಳಿಗೆ ಸಮೀಕ್ಷೆ ನಡೆಸುವವರು ಯಾರು ಬಂದಿರಲಿಲ್ಲ ಎಂದು ದೂರುಗಳು ಬಂದಿವೆ. ಇಷ್ಟಾದರೂ ವರದಿ ಸ್ವೀಕರಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಆತುರ ತೋರುತ್ತಿರುವುದು ಜನರಲ್ಲಿ ಸಂಶಯವನ್ನು ಹುಟ್ಟು ಹಾಕಿದೆ ಎಂದರು.

ಈ ಆತಿಯಾದ ಆತುರದ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಓಲೈಸುವ ಹುನ್ನಾರ ಇದ್ದಂತಿದೆ ಎಂದು ಆರೋಪಿಸಿದರು.

ಸಿಎಂ ಅವರ ಈ ನಡುವಳಿಕೆ ಹಿಂದೆ ಏನನ್ನೂ ಮುಚ್ಚಿಡುವ, ಯಾರನ್ನೂ ರಕ್ಷಿಸುವ ಸಂಶಯ ಮೂಡುತ್ತಿದೆ. ಈ ಎಲ್ಲಾ ವಿವಾದಗಳ ಕಾರಣಕ್ಕೆ ನಮ್ಮ ಸರಕಾರ ವರದಿಯ ಸಹವಾಸಕ್ಕೆ ಹೋಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ಪಾರದರ್ಶಕತೆ ಪ್ರದರ್ಶಿಸಿ;

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂಬ ವಿಷಯದಲ್ಲಿ ನಮ್ಮ ಸಹಮತವಿದೆ. ಆದರೆ ಅವೈಜ್ಞಾನಿಕ, ವಿವಾದಿತ ವರದಿ ಆಧರಿಸಿ ಕ್ರಮಕ್ಕೆ ಮುಂದಾದರೆ ನಮ್ಮ ವಿರೋಧವಿದೆ.

ಒಂದು ವೇಳೆ ಇವರಿಗೆ ನಿಜವಾಗಿಯೂ ಮೀಸಲು ನೀಡುವ ವಿಷಯದಲ್ಲಿ ಬದ್ಧತೆ ಇದ್ದರೆ ಪಾರದರ್ಶಕವಾಗಿ ಮರು ಸಮೀಕ್ಷೆ ನಡೆಸಲಿ. ವಿರೋಧ ವ್ಯಕ್ತಪಡಿಸಿರುವ ಸ್ವಾಮೀಜಿಗಳು, ಮುಖಂಡರನ್ನು ಕರೆದು ಅಭಿಪ್ರಾಯ ಕೇಳಲಿ ಎಂದು ಆಗ್ರಹಿಸಿದರು.

ಕಳೆದ ಅವಧಿಯಲ್ಲಿ ಲಿಂಗಾಯತ ವೀರಶೈವರ ವಿಚಾರಕ್ಕೆ ಕೈಹಾಕಿ ಏನಾಯಿತು? ಮತ್ತೆ ಅದೇ ರೀತಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸಕ್ಕೆ ಸಿದ್ದರಾಮಯ್ಯ ಕೈಹಾಕುವುದಿಲ್ಲ ಎಂದು ಭಾವಿಸಿರುವುದಾಗಿ ಹೇಳಿದರು.

ಹೋರಾಟ ನಿಶ್ಚಿತ;

ಈ ಎಚ್ಚರಿಕೆ, ವಿರೋಧಗಳ ನಡುವೆಯೂ ತರಾತುರಿಯಲ್ಲಿ ವರದಿ ಪಡೆಯಲು ಮುಂದಾದರೆ ರಾಜ್ಯಾದ್ಯಂತ ಪಕ್ಷವು ಉಗ್ರವಾದ ಹೋರಾಟ ನಡೆಸಲಿದೆ. ಅದಕ್ಕೆ ಅವಕಾಶ ನೀಡದೆ ವರದಿ ಕಳವಿಗೆ ಕಾರಣಗಳನ್ನು ಪತ್ತೆ ಹಚ್ಚಲಿ ಎಂದರು.

ಯಾರ ಮನೆಯಲ್ಲಿ ಕುಳಿತು ಬರೆದರು?

ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ ಎಂಬ ಕಾಂತರಾಜು ಅವರ ಸ್ಪಷ್ಟನೆಗೆ, ಹಾಗಿದ್ದರೆ ಕಾರ್ಯದರ್ಶಿ ಅವರು ಏಕೆ ಸಹಿ ಮಾಡಿಲ್ಲ? ಸಹಿ ಮಾಡಿಸಲು ಆಗಿಲ್ಲ ಎಂದರೆ ಯಾರನ್ನು ಮೆಚ್ಚಿಸಲು, ಯಾರದೊ ಮನೆಯಲ್ಲಿ ಕುಳಿತು ವರದಿ ಬರೆದಿರಬಹುದು. ಒಬ್ಬ ಜವಾಬ್ದಾರಿ ಸ್ಥಾನದಲ್ಲಿ ಇದ್ದ ವ್ಯಕ್ತಿಗೆ ಸರಕಾರಕ್ಕೆ ಸಲ್ಲಿಸುವ ವರದಿಗೆ ಸಹಿ ಮಾಡಿಸಲು ಆಗದಷ್ಟು ಮರೆವು ಇತ್ತೇ ಎಂದು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X