Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ...

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ ನಡೆಯಲಿದೆ: ಸಿಎಂ ಸಿದ್ದರಾಮಯ್ಯ

ದಿಲ್ಲಿಯಲ್ಲಿ ಕಾಂಗ್ರೆಸ್ ವರಿಷ್ಠರ ಸಭೆ

ವಾರ್ತಾಭಾರತಿವಾರ್ತಾಭಾರತಿ10 Jun 2025 5:33 PM IST
share
ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ ನಡೆಯಲಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಜಾತಿ ಗಣತಿ ಮರು ಸರ್ವೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ವರಿಷ್ಠರ ಜೊತೆ ಸಭೆ

ಹೊಸದಿಲ್ಲಿ: ರಾಜ್ಯದಲ್ಲಿ ತೀವ್ರ ಚರ್ಚೆಗೊಳಪಟ್ಟಿದ್ದ ಎಚ್.ಕಾಂತರಾಜ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು 2015-16ರಲ್ಲಿ ನಡೆಸಿದ್ದ ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ’(ಜಾತಿ ಗಣತಿ)ವರದಿಗೆ ಸಂಬಂಧಿಸಿದಂತೆ ಮರು ಸರ್ವೇ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ವರಿಷ್ಠರ ಜೊತೆ ಜಾತಿ ಗಣತಿ, ಆರ್‍ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆ ಹಾಗೂ ನಂತರ ಸರಕಾರ ಕೈಗೊಂಡ ಕ್ರಮಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜಾತಿ ಗಣತಿ ಬಗ್ಗೆ ಕೆಲವು ಸಂಘ-ಸಂಸ್ಥೆಗಳು, ಕೆಲವು ಜಾತಿಯ ಮುಖಂಡರು, ಮಠಾಧೀಶರು, ಕೆಲವು ಮಂತ್ರಿಗಳು ಅಪಸ್ವರ ಎತ್ತಿರುವುದರ ಕುರಿತು ಸಭೆಯಲ್ಲಿ ಪ್ರಸ್ತಾವ ಆಯಿತು. ಜಾತಿ ಗಣತಿ ಬಗ್ಗೆ ಹಿಂದುಳಿದ ವರ್ಗಗಳ ಆಯೋಗವು ಕೊಟ್ಟಿರುವ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಂಡು, ಕಾಲಮಿತಿಯಲ್ಲಿ ಜಾತಿ ಗಣತಿಯ ಮರು ಸರ್ವೇ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಪ್ರಕಟಿಸಿದರು.

ಈ ಸಮೀಕ್ಷೆ 10 ವರ್ಷ ಹಳೆಯದಾಗಿದೆ. ಆದುದರಿಂದ, ಮರು ಸರ್ವೇ ಮಾಡುವುದು ಉತ್ತಮ ಎಂದು ವರಿಷ್ಠರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ, ಪರಿಶಿಷ್ಟ ಜಾತಿಯವರ ಸಮೀಕ್ಷೆ ನಡೆಸಲಾಗುತ್ತಿದೆ. ಅದೇ ಮಾದರಿಯಲ್ಲಿ ಜಾತಿ ಗಣತಿಯ ಮರು ಸರ್ವೇ ಮಾಡಲಾಗುವುದು. 90 ದಿನಗಳಲ್ಲಿ ಸರ್ವೇ ಮಾಡಿ, ಸರಕಾರಕ್ಕೆ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದಂತಹ ಕಾಲ್ತುಳಿತ ದುರಂತದ ಬಗ್ಗೆಯೂ ಚರ್ಚೆ ಆಗಿದೆ. ಜೊತೆಗೆ, ಮ್ಯಾಜಿಸ್ಟ್ರೇಟಿಯಲ್ ತನಿಖೆ, ನ್ಯಾ.ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ, ಐವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತ್ತು, ಗುಪ್ತಚರ ವಿಭಾಗದ ಮುಖ್ಯಸ್ಥರ ವರ್ಗಾವಣೆ, ರಾಜಕೀಯ ಕಾರ್ಯದರ್ಶಿಯ ಬಿಡುಗಡೆ ಸೇರಿದಂತೆ ನಾವು ಕೈಗೊಂಡ ಎಲ್ಲ ಕ್ರಮಗಳ ಕುರಿತು ವರಿಷ್ಠರಿಗೆ ವಿವರಿಸಿದ್ದೇವೆ. ಅವರು ಅದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಜೂ.13ರಂದು 16ನೇ ಹಣಕಾಸು ಆಯೋಗದ ಅಧ್ಯಕ್ಷರ ಭೇಟಿಗಾಗಿ 12ರಂದು ಸಂಜೆ ಹೊಸದಿಲ್ಲಿಗೆ ಪುನಃ ಬರುತ್ತೇನೆ. ಜಾತಿ ಗಣತಿ ವರದಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆ ಚರ್ಚೆ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ನಡೆಸಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಜೊತೆ ಚರ್ಚೆ ನಡೆಸಿದ್ದೀರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಇಂದಿನ ಸಭೆಯಲ್ಲಿ ಯಾವುದೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ರಾಜ್ಯ ಸರಕಾರದ ವೈಫಲ್ಯವಿರುವ ಬಗ್ಗೆ ಸಂಸತ್ ನಲ್ಲಿ ಚರ್ಚೆ ಮಾಡಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ಬಗ್ಗೆಯೂ ಚರ್ಚೆಯಾಗಲಿ, ಪ್ರಧಾನಿ ಉದ್ಘಾಟನೆ ಮಾಡಿದ ಸೇತುವೆ ಬಿದ್ದು 140ಕ್ಕೂ ಹೆಚ್ಚು ಜನ ಸಾವನ್ನಪ್ಪಿದ ಘಟನೆ ಬಗ್ಗೆಯೂ ಚರ್ಚೆಯಾಗಲಿ ಎಂದು ಹೇಳಿದರು.

ಕರ್ನಾಟಕದಲ್ಲಿ ಸಾವೀಗಿಡಾದವರ ಬಗ್ಗೆ ನಮಗೆ ವ್ಯಥೆ ಇದೆ. ಹಾಗಾಗಿ, ಇವರ ಆರೋಪಗಳಿಗೆ ನಾನು ಕುಂಭ ಮೇಳದ ರಕ್ಷಣೆ ಪಡೆಯುವುದಿಲ್ಲ. ಆದರೆ, ಸಾವು ಸಂಭವಿಸಿದಾಗ ದುಃಖ ವ್ಯಕ್ತಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದ ಘಟನೆಯಲ್ಲಿ ಜನರ ಸಾವು ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಾವು ಈಗಾಗಲೇ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇವೆ. ತನಿಖಾ ವರದಿಯಲ್ಲಿ ಯಾರು ತಪ್ಪಿತಸ್ಥರು ಎಂದು ಬರುತ್ತದೆಯೋ ಅವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ರಾಜ್ಯ ಸರಕಾರವು ಜೂ.12ರಂದು ಜಾತಿ ಗಣತಿ ವರದಿಯ ಚರ್ಚೆ ನಡೆಸಲು ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದೆ. 10 ವರ್ಷ ಹಳೆಯ ಸಮೀಕ್ಷೆಯಲ್ಲಿನ ದತ್ತಾಂಶಗಳು ಹಳೆಯದಾಗಿದೆ ಎಂದು ಸಮಾಜದ ಕೆಲವು ವರ್ಗಗಳು ಈ ವರದಿಯ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ. ಆದುದರಿಂದ, ಕಾಲಮಿತಿಯಲ್ಲಿ ಜಾತಿ ಗಣತಿಯ ಬಗ್ಗೆ ಮರು ಸರ್ವೇ ನಡೆಸುವಂತೆ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಗೆ ತಿಳಿಸಿದೆ ಎಂದರು.

ಜೊತೆಗೆ ರಾಜ್ಯದಲ್ಲಿನ ರಾಜಕೀಯ ವಿಚಾರಗಳು, ಕಾಲ್ತುಳಿತ ದುರಂತ ಹಾಗೂ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ವಿವರಣೆ ನೀಡಿದ್ದಾರೆ. ಈ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಪ್ರತಿಯೊಂದು ಜೀವವು ಅಮೂಲ್ಯ. ದುರಾದೃಷ್ಟವಶಾತ್ ಈ ದುರಂತ ಸಂಭವಿಸಿದೆ. ಸರಕಾರ ಈಗಾಗಲೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಿದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರವು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ. ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಇನ್ನಿತರ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ವಿಶೇಷ ಸಂಪುಟದಲ್ಲಿ ಜಾತಿ ಸಮೀಕ್ಷೆ ಬಗ್ಗೆ ಚರ್ಚೆ: ವೇಣುಗೋಪಾಲ್

ಜೂನ್ 12ರಂದು ನಡೆಯಲಿರುವ ವಿಶೇಷ ಸಂಪುಟದಲ್ಲಿ ಜಾತಿ ಸಮೀಕ್ಷೆ ಬಗ್ಗೆ ಸರಕಾರ ಚರ್ಚಿಸಲಿದೆ. ಕರ್ನಾಟಕ ಸರ್ಕಾರವು ಈವರೆಗಿನ ವರದಿಯನ್ನು ತಾತ್ವಿಕವಾಗಿ ಒಪ್ಪಿದರೂ ಕೆಲವು ಜಾತಿಯ ಜನರಿಗೆ ಜಾತಿ ಗಣತಿಯ ಬಗ್ಗೆ ಅನುಮಾನವಿರುವುದರಿಂದ ಗಣತಿಯನ್ನು ಮತ್ತೆ ನಡೆಸುವಂತೆ ಕಾಂಗ್ರೆಸ್ ಪಕ್ಷ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ಮಂಗಳವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್ ಅವರು, “ಜೂನ್ 12ರಂದು ನಡೆಯಲಿರುವ ವಿಶೇಷ ಸಂಪುಟದಲ್ಲಿ ಸರ್ಕಾರ ಜಾತಿ ಸಮೀಕ್ಷೆ ಬಗ್ಗೆ ಚರ್ಚಿಸಲಿದೆ. ಜಾತಿ ಗಣತಿಯ ಈವರೆಗಿನ ವರದಿಯನ್ನು ಕರ್ನಾಟಕ ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ. ಆದರೆ ಜಾತಿ ಗಣತಿಯ ಬಗ್ಗೆ ಕೆಲವು ಜಾತಿಯ ಜನರಿಗೆ ಅನುಮಾನವಿದೆ. ಆದ್ದರಿಂದ ಗಣತಿಯನ್ನು ಮತ್ತೆ ನಡೆಸುವಂತೆ ಕಾಂಗ್ರೆಸ್ ಪಕ್ಷವು ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದೆ. ಅದಕ್ಕಾಗಿ ನಿಗದಿತ ಸಮಯ ವಿಧಿಸಲೂ ತಿಳಿಸಲಾಗಿದೆ” ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X