Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ತಿಂಗಳಲ್ಲಿ ಜಾತಿ ಗಣತಿ ವರದಿ...

ಒಂದು ತಿಂಗಳಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ, ಬಳಿಕ ಅಂಗೀಕರಿಸಿ ಜಾರಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 Feb 2026 6:28 PM IST
share
ಒಂದು ತಿಂಗಳಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ, ಬಳಿಕ ಅಂಗೀಕರಿಸಿ ಜಾರಿ:  ಸಿಎಂ ಸಿದ್ದರಾಮಯ್ಯ

ರಾಯಚೂರು :ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಹೇಳಿದ್ದಾರೆ.

ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು , ಮೈಸೂರು ಮುಂಬೈ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಹೇಳಿದರು.

ಕನಕದಾಸರು ‘ಕುಲಕುಲವೆಂದು ಹೊಡೆದಾಡದಿರಿ’ ಎಂದಂತೆ ಬುದ್ಧ ಬಸವಾದಿಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ ಧರ್ಮ ವರ್ಗ ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ. ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಯಾವುದೇ ಧರ್ಮವೂ ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭಿಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಯುವ ಪೀಳಿಗೆ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು ಎಂದರು.

ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಕೆಲಸ ಎಂದು ತಿಳಿಸಿದರು.

ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿ ನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿಗೆ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಳ್ಳಲಿದ್ದು, ರಾಜ್ಯ ಸರಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X