Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ಬಿಕ್ಕಟ್ಟು | ಪ್ರಧಾನಿ ಮೋದಿ...

ಕಾವೇರಿ ಬಿಕ್ಕಟ್ಟು | ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಎಚ್.ಡಿ.ದೇವೇಗೌಡ ಒತ್ತಾಯ

ʼʼತಮಿಳರಲ್ಲಿ ಕಂಡು ಬರುವ ಐಕ್ಯತೆ ನಮ್ಮಲ್ಲಿ ಇಲ್ಲ‌ʼʼ

ವಾರ್ತಾಭಾರತಿವಾರ್ತಾಭಾರತಿ25 Sept 2023 6:22 PM IST
share
ಕಾವೇರಿ ಬಿಕ್ಕಟ್ಟು | ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಎಚ್.ಡಿ.ದೇವೇಗೌಡ ಒತ್ತಾಯ

ಬೆಂಗಳೂರು, ಸೆ. 25: ‘ಕಾವೇರಿ ನದಿ ನೀರಿನ ವಿಷಯದಲ್ಲಿ ಪ್ರಧಾನಿ ಮೋದಿ ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಹಾಗೂ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂ ಕೋರ್ಟಿಗೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಲಶಕ್ತಿ ಸಚಿವಾಲಯಕ್ಕೆ ಆದೇಶ ಮಾಡಬೇಕು’ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

ಸೋಮವಾರ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆಂದು ಆ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಎರಡು ರಾಜ್ಯಗಳಿಗೆ ಸಂಬಂಧವಿಲ್ಲದ, ತಟಸ್ಥವಾದ ಒಂದು ಸಮಿತಿಯನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳುಹಿಸಿ ವಸ್ತುನಿಷ್ಠ ಮಾಹಿತಿ ಪಡೆದುಕೊಳ್ಳಬೇಕೆಂದು ಮೋದಿಯವರನ್ನು ಮನವಿ ಮಾಡುತ್ತೇನೆ ಎಂದರು.

ವಾಸ್ತವಾಂಶ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‍ಗೆ ಅರ್ಜಿ ಹಾಕಬೇಕು. ಮಳೆ ಇಲ್ಲದೆ ಕಂಗಾಲಾಗಿರುವ ರಾಜ್ಯದ ರೈತರ ನೆರವಿಗೆ ಧಾವಿಸಬೇಕು. ಮಳೆ ಕೊರತೆ ಕಾರಣದಿಂದ ರೈತರು ಪರದಾಡುತ್ತಿದ್ದಾರೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ ನೀರು ಹರಿದು ಬಂದಿಲ್ಲ. ವಸ್ತುಸ್ಥಿತಿ ಹೀಗಿದ್ದರೂ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿವೆ. ಇದು ರಾಜ್ಯದ ಸಂಕಷ್ಟ ತಂದಿದೆ. ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ಕುಮಾರಸ್ವಾಮಿ ಸ್ಥಳ ಪರಿಶೀಲನೆ ಮಾಡಬೇಕಿತ್ತಾ? ಯಾಕೆ ಸರಕಾರಕ್ಕೆ ಸಾಧ್ಯವಿಲ್ಲವೇ? ನಮ್ಮ ಜಲ ಸಂಪನ್ಮೂಲ ಇಲಾಖೆಗೆ ಏನಾಗಿದೆ? ಕುಮಾರಸ್ವಾಮಿ ಕೆಆರ್‍ಎಸ್‍ಗೆ ಹೋಗಿ ಬಂದ ಒಂದು ಗಂಟೆಯೊಳಗೆ ಅಂದೇ ಈ ಮಾಹಿತಿ ಕೊಟ್ಟಿದ್ದೇನೆ’ ಎಂದು ಅವರು ಟೀಕಿಸಿದರು.

ಕಾಂಗ್ರೆಸ್ ಅನ್ಯಾಯ ಮಾಡಿದೆ: ಕುಮಾರಸ್ವಾಮಿ ಮಾತಿಗೆ ಸರಕಾರ ಎಷ್ಟು ಮಾನ್ಯತೆ ಕೊಟ್ಟಿದೆ? ಕಾಂಗ್ರೆಸ್‍ಗೆ ಮೊದಲಿನಿಂದಲೂ ಕಾವೇರಿ ಬಗ್ಗೆ ಕರ್ನಾಟಕದ ಪರ ನಿಲುವು ಇಲ್ಲ. ಕುಮಾರಸ್ವಾಮಿ ರಾಜ್ಯದ ಎಲ್ಲ ನೀರನ್ನು ಸದ್ಬಳಕೆ ಮಾಡಿಕೊಂಡು ಇಡೀ ರಾಜ್ಯಕ್ಕೆ ನೀರು ಕೊಡಬೇಕೆಂದು ಜಲಧಾರೆ ಕಾರ್ಯಕ್ರಮ ಮಾಡಿದರು. ಹಾಗಾದರೆ, ಈ ಸರಕಾರ ಮಾಡುತ್ತಿರುವುದು ಏನು ಕಾರ್ಯಕ್ರಮ? ಕೇವಲ ತಮಿಳುನಾಡಿಗೆ ನೀರು ಹರಿಸುವುದೆ? ಎಂದು ದೇವೇಗೌಡ ಪ್ರಶ್ನಿಸಿದರು.

ಕುಮಾರಸ್ವಾಮಿ, ಕೆಆರ್‍ಎಸ್‍ಗೆ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅವರು ಎಲ್ಲ ಮಾಹಿತಿ ಸಂಗ್ರಹ ಮಾಡಿದ್ದಾರೆ. ಹೀಗಾಗಿ ಕಾವೇರಿ ವಿಷಯ ಹೊರತುಪಡಿಸಿ ಯಾವುದೇ ಕಾರಣಕ್ಕೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ, ಕಾವೇರಿ ವಿಷಯವನ್ನು ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪ ಮಾಡಿದರು.

ಚಿತ್ರಗಳ ಪ್ರದರ್ಶನ: ರಾಜ್ಯದಲ್ಲಿ ಜಲ ಸಂಕಷ್ಟ ಉಂಟಾಗಿದೆ. ಜಲಾಶಯಗಳಲ್ಲಿ ನೀರಿಲ್ಲ. ಆದರೂ ತಮಿಳುನಾಡಿಗೆ ನೀರು ಬಿಡಿ ಎಂದು ಆದೇಶಗಳು ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಸುದ್ದಿಗೋಷ್ಟಿಯಲ್ಲಿ ಬರಿದಾದ ಕೆಆರ್ ಎಸ್ ಜಲಾಶಯದ ಚಿತ್ರಗಳನ್ನು ಪ್ರದರ್ಶಿಸಿದರು. ಈ ಫೆÇೀಟೋಗಳನ್ನು ಪ್ರಧಾನಿಯವರಿಗೂ ಕಳಿಸುತ್ತೇವೆ. ಅವರೇ ಗಮನಿಸಲಿ’ ಎಂದು ದೇವೇಗೌಡ ನುಡಿದರು.

ಎರಡೂ ರಾಜ್ಯಗಳಿಗೆ ಸಂಬಂಧ ಇಲ್ಲದಿರುವ ಐವರ ತಂಡವನ್ನು ಕಳುಹಿಸಕೊಡಿ, ವಾಸ್ತವ ಪರಿಸ್ಥಿತಿ ನೋಡಲಿ ಅಂತ ರಾಜ್ಯಸಭೆಯಲ್ಲಿ ಹೇಳಿದ್ದೇನೆ. ಬೇರೆ ರಾಜ್ಯದವರನ್ನು ಕಳುಹಿಸಿ ಸ್ಥಳ ಪರಿಶೀಲನೆ ಮಾಡಲಿ ಅಂತ ಹೇಳಿದೆ. ಯಾವ ಪರಿಸ್ಥಿತಿ ಇದೆ ಎಂದು ತಿಳಿಸಲಿ ಅಂತ ಉಪರಾಷ್ಟ್ರಪತಿಯವರಿಗೆ ಹೇಳಿದ್ದೇನೆ. ಅದನ್ನೇ ಪ್ರಧಾನಿಯಾರಿಗೂ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪರಿಷತ್ ಸದಸ್ಯರಾದ ಬಿ.ಎಂ.ಫಾರೂಖ್, ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಬಾಕ್ಸ್...

ಬಂದ್ ಶಾಂತಿಯುತವಾಗಿ ನಡೆಯಲಿ: ‘ನಮಗೆ ಅನ್ಯಾಯ ಆಗಿದೆ, ನಿಜ. ಹಾಗಂತ ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಬೇಡ. ಶಾಂತಿಯುತವಾಗಿ ಬಂದ್ ನಡೆಯಲಿ. ಬಂದ್‍ಗೆ ಕುಮಾರಸ್ವಾಮಿ ಬೆಂಬಲ ಕೊಟ್ಟಿದ್ದಾರೆ. ಎಲ್ಲರೂ ಶಾಂತಿಯುತ ಹೋರಾಟ ಮಾಡಿ. ಅಹಿತಕರ ಘಟನೆ ನಡೆಯಬಾರದು. ನೆಲ, ಜಲ, ಭಾಷೆ ವಿಷಯ ಬಂದಾಗ ತಮಿಳರಲ್ಲಿ ಕಂಡು ಬರುವ ಐಕ್ಯತೆ ನಮ್ಮಲ್ಲಿ ಇಲ್ಲ. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು’

-ಎಚ್.ಡಿ.ದೇವೇಗೌಡ ಮಾಜಿ ಪ್ರಧಾನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X