Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ವಿವಾದ | ತಜ್ಞರ ತಂಡದ ಜತೆ ಚರ್ಚೆ...

ಕಾವೇರಿ ವಿವಾದ | ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರ ನಿಯೋಗಕ್ಕೆ ಸಿಎಂ ಭರವಸೆ

ʼʼಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವ ಅಗತ್ಯವಿದೆʼʼ

ವಾರ್ತಾಭಾರತಿವಾರ್ತಾಭಾರತಿ29 Sept 2023 4:17 PM IST
share
ಕಾವೇರಿ ವಿವಾದ | ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರ ನಿಯೋಗಕ್ಕೆ ಸಿಎಂ ಭರವಸೆ

ಬೆಂಗಳೂರು, ಸೆ. 29: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.

ʼʼಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆʼʼ ಎಂದು ವಿವರಿಸಿದರು.

ʼʼಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆʼʼ

ʼʼಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿ ಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರುʼʼ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X