Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ವಿವಾದ | ರಸ್ತೆಯಲ್ಲಿರುವ ವಾಹನಗಳ...

ಕಾವೇರಿ ವಿವಾದ | ರಸ್ತೆಯಲ್ಲಿರುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರೆ ಅದು ಹೋರಾಟ ಆಗುವುದಿಲ್ಲ: ನಟ ಶಿವರಾಜಕುಮಾರ್

''ಸರಕಾರಗಳು ಕೂಲಂಕುಷವಾಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು''

ವಾರ್ತಾಭಾರತಿವಾರ್ತಾಭಾರತಿ29 Sept 2023 6:29 PM IST
share
ಕಾವೇರಿ ವಿವಾದ | ರಸ್ತೆಯಲ್ಲಿರುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರೆ ಅದು ಹೋರಾಟ ಆಗುವುದಿಲ್ಲ: ನಟ ಶಿವರಾಜಕುಮಾರ್

ಬೆಂಗಳೂರು, ಸೆ.29: ಕಲಾವಿದರು ಬಂದು ನಿಂತು ಧರಣಿ ನಡೆಸಿದರೆ ಪರಿಹಾರ ಸಮಸ್ಯೆ ಆಗುವುದಿಲ್ಲ. ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳು ಕೂಲಂಕುಷವಾಗಿ ಪರಿಶೀಲಿಸಿ ಕಾವೇರಿ ನದಿ ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ನಟ ಶಿವರಾಜ್‍ಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಸುಮಾರು ವರ್ಷಗಳ ಕಾಲದಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ನಾವೂ ಅದರಲ್ಲಿ ಭಾಗಿಯಾಗುತ್ತೇವೆ. ಅದೇ ರೀತಿ ಈ ತರ ಸಮಸ್ಯೆ ಬಂದಾಗ ನಾವೆಲ್ಲರೂ ಸೇರಿ ಒಗ್ಗಟ್ಟಾಗಿ ಹೋರಾಟ ಮಾಡಬೇಕಾಗಿದೆ. ಆದರೆ ನಮ್ಮ ಹೋರಾಟವನ್ನು ಲಾಭಕ್ಕಾಗಿ ಪಡೆದುಕೊಳ್ಳಬಾರದು. ನಾವು ಆಯ್ಕೆ ಮಾಡಿರುವ ಸರಕಾರ ಈ ವಿವಾದವನ್ನು ಬಗೆಹರಿಸಬೇಕು ಎಂದರು.

ಹೋರಾಟದಲ್ಲಿ ಯಾವಾಗಲೂ ನಂಬಿಕೆ ಮತ್ತು ವಿಶ್ವಾಸದಿಂದ ಇದ್ದರೆ ಮಾತ್ರ ಗೆಲ್ಲುವುದಕ್ಕೆ ಸಾಧ್ಯವಾಗುತ್ತದೆ. ಆದರಿಂದ ರಾಜ್ಯ ಹಾಗೂ ತಮಿಳುನಾಡಿನ ಸರಕಾರ ಜೊತೆಗೆ ಕೇಂದ್ರ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು. ಪ್ರತಿಯೊಬ್ಬರಿಗೂ ಕಾವೇರಿ ನೀರಿನ ಮೇಲೆ ಪ್ರೀತಿ ಇರುತ್ತದೆ ಎಂದು ಅವರು ತಿಳಿಸಿದರು.

ತಮಿಳುನಾಡಿನ ರೈತರು ಬೇರೆಯಲ್ಲ, ಕರ್ನಾಟಕದ ರೈತರು ಬೇರೆಯಲ್ಲ. ರೈತರು ಎಲ್ಲಿದ್ದರೂ ರೈತರೆ. ಆದುದರಿಂದ ರಸ್ತೆಯಲ್ಲಿರುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರೆ ಅದು ಹೋರಾಟ ಆಗುವುದಿಲ್ಲ, ಅದು ತಪ್ಪು. ಸಮಸ್ಯೆಯಿಂದ ಯಾವ ರೀತಿ ಹೊರ ಬರಬೇಕೆಂಬುದನ್ನು ಕೂಲಂಕುಷವಾಗಿ ವಿಚಾರ ಮಾಡಬೇಕಾಗಿದೆ ಹೊರತು ಈ ರೀತಿ ಹೋರಾಟ ಮಾಡುವುದು ಸರಿಯಲ್ಲ. ಯಾವುದೇ ರೀತಿಯಾದ ಹೋರಾಟ ಮಾಡಿದರೂ ಬೇರೆಯವರ ಭಾವನೆಗಳಿಗೆ ಹಾಗೂ ಮನಸ್ಸಿಗೆ ನೋವಾಗಬಾರದು ಎಂದು ತಿಳಿಸಿದರು.

ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, ‘ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಯೇ ಶ್ರೇಷ್ಠ ಮಾರ್ಗ. ರಾಜಕಾರಣಿಗಳು ಪ್ರತಿಭಟನೆ ಮಾಡಿದರೆ ಆಕ್ರೋಶ ಹೊರಬರುತ್ತದೆ. ದಾಳಿಕೋರರು ಪ್ರತಿಭಟನೆ ಮಾಡಿದರೆ ಹಿಂಸೆ ಆಗುತ್ತದೆ. ಮಣಿಪುರದಲ್ಲಿ ಇಂದು ಎರಡು ಸಮುದಾಯಗಳ ನಡುವೆ ಹಿಂಸಾಚಾರ ಆಗುತ್ತಿದೆ. ನಿತ್ಯ ಕೊಲೆ ಆಗುತ್ತಿದೆ. ನಾವು ಪ್ರತಿಭಟನೆ ಮಾಡಿದರೆ ಶಾಂತಿ ಮತ್ತು ಸಂಯಮದಿಂದ ಕೂಡಿರಬೇಕು’ ಎಂದರು.

ಕಾವೇರಿ ಸಮಸ್ಯೆ ಮೊದಲಿನಿಂದಲೂ ಇದೆ. 10ನೇ ಶತಮಾನದಲ್ಲಿ ಈ ಬಗ್ಗೆ ಒಂದು ಶಾಸನದಲ್ಲಿ ಪ್ರಸ್ತಾಪ ಇದೆ. ಆ ಸಮಸ್ಯೆಯನ್ನು ಬಗೆಹರಿಸುವುದು ಕಲಾವಿದರ ಕೆಲಸ ಅಲ್ಲ. ಸಿನಿಮಾದ ಮೂಲಕ ಮಾರ್ಗಸೂಚಿ ನೀಡಬಹುದು ಎಂದು ಅವರು ಹೇಳಿದರು.

ನಟ ಉಪೇಂದ್ರ ಮಾತನಾಡಿ, ನಾನು ಚಿತ್ರರಂಗಕ್ಕೆ ಬಂದಾಗಿನಿಂದ ಸುಮಾರು 20ರಿಂದ 25 ಬಾರಿ ಈ ವಿಚಾರವಾಗಿ ಹೋರಾಟ ಮಾಡಿದ್ದೇನೆ. ಆದರೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಪರಿಹಾರವೇ ಆಗದ ಸಮಸ್ಯೆ ಎಂದರೆ ಅದು ಇದೇ ಇರಬೇಕು. ನಾವೆಲ್ಲರೂ ವಿಚಾರವಂತರಾಗಬೇಕು. ಸ್ವಲ್ಪ ವಿಚಾರ ಮಾಡಿದರೆ ಇದರ ಹಿಂದಿನ ರಹಸ್ಯ ಏನು ಎಂಬುದು ಗೊತ್ತಾಗುತ್ತದೆ. ನಮ್ಮ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳೋಣ ಎಂದರು.

ಇದೆ ಸಂದರ್ಭದಲ್ಲಿ ಹಿರಿಯ ಕಲಾವಿದರಾದ ಗಿರಿಜಾ ಲೋಕೇಶ್, ಉಮಾಶ್ರೀ, ಶ್ರೀನಿವಾಸಮೂರ್ತಿ, ಶ್ರೀನಾಥ್, ಸುಂದರ್ ರಾಜ್, ವಾಸಂತಿ, ಶೃತಿ, ಪೂಜಾಗಾಂಧಿ, ದರ್ಶನ್ ಸೇರಿದಂತೆ ಅನೇಕ ಸಂಖ್ಯೆಯಲ್ಲಿ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X