Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ನೀರು ವಿಚಾರ: ಕರ್ನಾಟಕ ಬಂದ್ ಗೆ ...

ಕಾವೇರಿ ನೀರು ವಿಚಾರ: ಕರ್ನಾಟಕ ಬಂದ್ ಗೆ ಚಾಮರಾಜನಗರ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ29 Sept 2023 9:10 AM IST
share
ಕಾವೇರಿ ನೀರು ವಿಚಾರ: ಕರ್ನಾಟಕ ಬಂದ್ ಗೆ  ಚಾಮರಾಜನಗರ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ

ಚಾಮರಾಜನಗರ: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವ ಹಿನ್ನಲೆಯಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ತಮಿಳು ನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಯಶಸ್ವಿಯತ್ತ ಸಾಗಿದೆ.

ಚಾಮರಾಜನಗರ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಬೆಳಗ್ಗೆಯಿಂದಲೇ ಕನ್ನಡ ಪರ ಹೋರಾಟಗಾರರು, ರೈತರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ರಸ್ತೆಗಿಳಿದು, ಹೆದ್ದಾರಿ ತಡೆಯೊಡ್ಡಿ ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರ, ತಮಿಳುನಾಡು ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗ ಜಮಾಯಿಸಿದ ಹೋರಾಟಗಾರರು ಧರಣಿ ನಡೆಸಿದರೆ, ಕಾವೇರಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪಾದಯಾತ್ರೆ ಮೂಲಕ ಕಿವಿಯಲ್ಲಿ ಗುಲಾಬಿ ಹೂವಿಟ್ಟುಕೊಂಡು ಬಂದ್ ಸಹಕರಿಸುವಂತೆ ಸಾರ್ವಜನಿಕರಲ್ಲಿ ಹಾಗೂ ವರ್ತಕರಲ್ಲಿ ಮನವಿ ಮಾಡಿದರು.

ಶ್ರೀ ಭುವನೇಶ್ವರಿ ವೃತ್ತದ ಮೂಲಕ ತಮಿಳುನಾಡಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋರಾಟಗಾರರು ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದರು.

ಈ ನಡುವೆ ಕೆ.ಎಸ್.ಆರ್. ಟಿ.ಸಿ ಬಸ್ ಗಳು ರಸ್ತೆಗಿಳಿಯದೆ ಬಸ್ ನಿಲ್ದಾಣದಲ್ಲೇ ಇದ್ದವು. ಪೊಲೀಸ್ ಪಹರೆ ಹೆಚ್ಚಾಗಿತ್ತು. ಕರ್ನಾಟಕ ಬಂದ್ ವಿಷಯ ಮೊದಲೇ ತಿಳಿದಿದ್ದರಿಂದ ದೂರದೂರಿಗೆ ಹೋಗುವ ಪ್ರಯಾಣಿಕರು ಬಸ್ ನಿಲ್ದಾಣದತ್ತ ಬಂದಿರಲಿಲ್ಲ. ತುರ್ತು ಕೆಲಸ ನಿಮಿತ್ತ ತೆರಳುವವರು ಮಾತ್ರ ಬಂದದ್ದು ಕಂಡು ಬಂದಿದೆ.

ಅಂತರಾಜ್ಯ ಗಡಿಯಲ್ಲಿ ಭದ್ರತೆ:

ಕರ್ನಾಟಕ ತಮಿಳುನಾಡು ಗಡಿ ಭಾಗವಾಗಿರುವ ಕಾರ್ಯಪಾಳ್ಯಂ ಬಳಿ ತಮಿಳುನಾಡು ಪೊಲೀಸರನ್ನು ನಿಯೋಜಿಸಲಾಗಿದ್ದು, ಗಡಿಯಿಂದ ಕರ್ನಾಟಕದೊಳಗೆ ಯಾವುದೇ ವಾಹನವನ್ನು ಬಿಡದೇ ತಮಿಳುನಾಡು ಪೊಲೀಸರು ಕಾವಲು ಕಾಯುತ್ತಿದ್ದರು.

ತಮಿಳುನಾಡಿನಿಂದ ತಾಳವಾಡಿಗೆ ಹೋಗುವ ವಾಹನಗಳನ್ನು ದಿಂಬಂ ತಲೈಮಲೆ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದ್ದು, ಚಾಮರಾಜನಗರ ತಾಲ್ಲೂಕಿನ ಪುಣಜನೂರು ಚಕ್ ಪೋಸ್ಟ್ ಬಳಿ ಕರ್ನಾಟಕ ಪೊಲೀಸರನ್ನು ನಿಯೋಜನೆ ಮಾಡಿದ್ದರಿಂದ ಎರಡೂ ರಾಜ್ಯಗಳ ನಡುವೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಅಂಗಡಿಗಳು ಬಂದ್: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳನ್ನು ವರ್ತಕರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದರಿಂದ ವ್ಯಾಪಾರ ವಹಿವಾಟು ಇಲ್ಲದೆ ಬಿಕೋ ಎನ್ನುತ್ತಿದ್ದವು ಸಾರ್ವಜನಿಕರ ಸಂಚಾರ ವಿರಳವಾಗಿದ್ದರಿಂದ ರಸ್ತೆಯಲ್ಲಿ ಬಿಕೋ ಎನ್ನುವ ಸ್ಥಿತಿ ಇತ್ತು.

ಬಣ್ಣಾರಿ ಚಕ್ ಪೋಸ್ಟ್ ನಲ್ಲೇ ವಾಹನಗಳಿಗೆ ತಡೆ: ತಮಿಳುನಾಡಿನ ಬಣ್ಣಾರಿ ಚಕ್ ಪೋಸ್ಟ್ ನಲ್ಲಿ ಕರ್ನಾಟಕಕ್ಕೆ ತೆರಳುವ ವಾಹನಗಳಿಗೆ ತಡೆ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವನ್ನು ತಮಿಳುನಾಡು ಪೊಲೀಸರು ವಹಿಸಿದ್ದರು. ದಿಂಬಂ ತಲೈಮಲೆ ಮೂಲಕ ತಾಳವಾಡಿಯತ್ತ ಸಾಗುವ ವಾಹನಗಳಿಗೆ ಮಾತ್ರ ಬಣ್ಣಾರಿ ಚಕ್ ಪೋಸ್ಟ್ ನಲ್ಲಿ ಅವಕಾಶ ನೀಡಲಾಗಿತ್ತು. ಇದರಿಂದಾಗಿ ಬಣ್ಣಾರಿ ಚಕ್ ಪೋಸ್ಟ್ ನಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X