Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ...

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ

ವಾರ್ತಾಭಾರತಿವಾರ್ತಾಭಾರತಿ19 Aug 2026 7:21 PM IST
share
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ
ರಾಜ್ಯದ ಬರ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್ ಆಗಮನ: ಪಿ.ಎಂ.ನರೇಂದ್ರಸ್ವಾಮಿ

ಬೆಂಗಳೂರು: ನೂತನ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಮಾಡಿರುವ ಮನವಿಗೆ ಸ್ಪಂದಿಸಿರುವ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸೆಪ್ಟಂಬರ್ ಮೊದಲ ವಾರದಲ್ಲಿ ರಾಜ್ಯದ ಯಾವುದಾದರೂ ಒಂದು ಬರಪೀಡಿತ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ನರೇಂದ್ರ ಸ್ವಾಮಿ, ಬರದ ಹಿನ್ನೆಲೆಯಲ್ಲಿ ಉಂಟಾಗಿರುವ ರಾಜ್ಯದ ಕೃಷಿ ಸಮಸ್ಯೆಗಳು ಹಾಗೂ ಪ್ರಧಾನಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಆಗಸ್ಟ್ ಕೊನೆಯವರೆಗೆ ಅವಧಿ ವಿಸ್ತರಣೆ ಮಾಡುವ ಬಗ್ಗೆ ಸಮಾಲೋಚನೆ ನಡೆಸಿದರು.

ಪ್ರಧಾನಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಅವಧಿ ವಿಸ್ತರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದನ್ನು ನರೇಂದ್ರಸ್ವಾಮಿ ಅವರು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದರು.

ಸಮಾಲೋಚನೆ ವೇಳೆ ಶಿವರಾಜ್ ಸಿಂಗ್ ಚೌಹಾಣ್ ಕರ್ನಾಟಕಕ್ಕೆ ಭೇಟಿ ಕೊಡುವುದು ಮಾತ್ರವಲ್ಲದೆ ಕರ್ನಾಟಕದಲ್ಲಿ ಮಳೆಯ ಅಭಾವದಿಂದಾಗಿ ಸೃಷ್ಟಿಯಾಗಿರುವ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಈಗಾಗಲೇ ಕೃಷಿ ವಿಮಾ ಅವಧಿ ಮುಕ್ತಾಯವಾಗುತ್ತಿರುವುದರಿಂದ ರೈತರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ 666 ಕೃಷಿ ವಿಮಾ ಘಟಕಗಳಲ್ಲಿ ಮಧ್ಯಂತರ ಪರಿಹಾರ ಕೊಡಲು ಆದೇಶ ನೀಡಲಾಗಿದೆ. ಕೇಂದ್ರ ಪುರಸ್ಕೃತ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿದೆ. ಜೊತೆಗೆ ಕೇಂದ್ರ ಸರಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಾಜ್ಯದ ರೈತರ ಹಿತ ಕಾಪಾಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ನರೇಂದ್ರಸ್ವಾಮಿ ಹೇಳಿದರು.

ತಮಿಳುನಾಡಿಗೆ ನೀರು ಬಿಡುವುದರ ಜೊತೆಗೆ ರೈತರ ಬೆಳೆಗೆ ನೀರು ಬಿಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನರೇಂದ್ರಸ್ವಾಮಿ, ರಾಜ್ಯದ ಕೃಷಿ ಚಟುವಟಿಕೆಗಳಿಗೆ ನೀರು ಬಿಡುವ ವಿಚಾರದಲ್ಲಿ ಯಾವುದನ್ನು ಮುಚ್ಚಿಡುವ ಅಗತ್ಯವಿಲ್ಲ. ಕೆಆರ್ ಎಸ್ ಜಲಾಶಯದಲ್ಲಿ ಕೇವಲ 109 ಅಡಿ ನೀರಿದೆ. ಇದು ನಮ್ಮ ರೈತರು ಒಂದು ಬೆಳೆ ಬೆಳೆಯುವುದಕ್ಕೆ ಸಾಲುವುದಿಲ್ಲ ಎಂದು ತಿಳಿಸಿದರು.

ಇದರ ನಡುವೆ ಸುಪ್ರೀಂ ಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದು ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದೆ. ಈ ಸಮಸ್ಯೆಗೆ ಈಗ ಮಳೆಯೇ ಪರಿಹಾರ. ಕೃಷಿ ಚಟುವಟಿಕೆಗಳಿಗೆ ನೀರು ಬಿಡುವುದು ಕಷ್ಟಕರವಾಗಿದೆ. ಲಭ್ಯತೆ ಆಧಾರದ ಮೇಲೆ ನೀರು ಬಿಡುವ ಬಗ್ಗೆ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ನರೇಂದ್ರ ಸ್ವಾಮಿ ಹೇಳಿದರು.

Tags

Agriculture MinisterP. M. Narendraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X