Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರದ...

VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರದ ಒಪ್ಪಿಗೆ; ಆ.10ರಿಂದ ಬಾರ್‌ಮಿಲ್‌ ಕಾರ್ಯಾಚರಣೆಗಳು ಪ್ರಾರಂಭ: ಸಂಸದ ರಾಘವೇಂದ್ರ

ವಾರ್ತಾಭಾರತಿವಾರ್ತಾಭಾರತಿ1 Aug 2023 8:40 PM IST
share
VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರದ ಒಪ್ಪಿಗೆ; ಆ.10ರಿಂದ ಬಾರ್‌ಮಿಲ್‌ ಕಾರ್ಯಾಚರಣೆಗಳು ಪ್ರಾರಂಭ: ಸಂಸದ ರಾಘವೇಂದ್ರ

ಶಿವಮೊಗ್ಗ: 'ವಿ.ಐ.ಎಸ್.ಎಲ್, ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ' ಎಂದು ಸಂಸದ ಬಿ, ವೈ, ರಾಘವೇಂದ್ರ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾಜಿ ರವರುಗಳ ಸ್ಪಷ್ಟ ನಿರ್ದೇಶನದೊಂದಿಗೆ, ಸೈಲ್ ಆಡಳಿತ ಮಂಡಳಿಯು ಭದ್ರಾವತಿ ವಿಐಎಸ್ಎಲ್ ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿರುವುದನ್ನು ತಿಳಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ ಎಂದು ತಿಳಿಸಿದ್ದಾರೆ.

ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ.

ವಿಐಎಸ್ಎಲ್ ಅನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ, ಕೇಂದ್ರ ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು ಸೈಲ್ ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ. ವಿಐಎಸ್ಎಲ್ ನ ಪುನರುಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ ಬದ್ಧತೆಗಾಗಿ ಕೇಂದ್ರ ಸರ್ಕಾರಕ್ಕೆ ನನ್ನ ಹೃತ್ತೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ವಿಐಎಸ್ಎಲ್ ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ಧಿಯ ಹಾದಿಯಲ್ಲಿ ಸಾಗಿ ತನ್ನ ಗತ ವೈಭವವನ್ನು ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿ.ಐ.ಎಸ್,ಎಲ್, ನ ಎಲ್ಲಾ ನೌಕರರ ಬಾಂಧವರಿಗೆ, ಕಾರ್ಮಿಕ ಸಂಘಟನೆ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ಸಂಸದ ರಾಘವೇಂದ್ರ ಧನ್ಯವಾದ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X