Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು...

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಕೇಂದ್ರ ಕ್ರಮ ವಿಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ: ಸಿಎಂ ಸಿದ್ದರಾಮಯ್ಯ

"ಮೋದಿ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗವನ್ನೂ ಬುಡಮೇಲು ಮಾಡ ಹೊರಟಿದೆ"

ವಾರ್ತಾಭಾರತಿವಾರ್ತಾಭಾರತಿ21 March 2024 4:40 PM IST
share
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಕೇಂದ್ರ ಕ್ರಮ ವಿಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದರು.

“ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X