Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರದ ಅಸಹಕಾರದಿಂದ ರಾಜ್ಯಕ್ಕೆ 1.25...

ಕೇಂದ್ರದ ಅಸಹಕಾರದಿಂದ ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ನಷ್ಟ: ಎ.ಎಸ್.ಪೊನ್ನಣ್ಣ

ವಾರ್ತಾಭಾರತಿವಾರ್ತಾಭಾರತಿ28 Jan 2026 12:03 AM IST
share
ಕೇಂದ್ರದ ಅಸಹಕಾರದಿಂದ ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ನಷ್ಟ: ಎ.ಎಸ್.ಪೊನ್ನಣ್ಣ

ಬೆಂಗಳೂರು: ಕೇಂದ್ರ ಸರಕಾರದ ಅಸಹಕಾರದ ಕಾರಣದಿಂದಾಗಿ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಸುಮಾರು 1,25,559 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಕಾಂಗ್ರೆಸ್ ಸದಸ್ಯ ಎ.ಎಸ್.ಪೊನ್ನಣ್ಣ ಹೇಳಿದರು.

ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಪ್ರಸ್ತಾವವನ್ನು ಸೂಚಿಸಿ ಮಾತನಾಡಿದ ಅವರು, ರಾಜ್ಯದಿಂದ ಕನಿಷ್ಠ 4.50 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ ಮಾಡಿ ನಾವು ಕೇಂದ್ರಕ್ಕೆ ಕಳುಹಿಸುತ್ತೇವೆ. ಆದರೆ, ನಮಗೆ ಕೇಂದ್ರದಿಂದ ಬರುತ್ತಿರುವುದು ಶೇ.13.75 ರಿಂದ ಶೇ.14ರಷ್ಟು. ಅಂದರೆ, ಸುಮಾರು 60 ಸಾವಿರ ಕೋಟಿ ರೂ.ಗಳು ಮಾತ್ರ ಎಂದು ತಿಳಿಸಿದರು.

15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕೇಂದ್ರ ಸರಕಾರ ತನ್ನ ಬಜೆಟ್‍ನಲ್ಲಿ ಘೋಷಿಸಿರುವಂತೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ., ವಿಶೇಷ ಅನುದಾನವಾಗಿ 5,495 ಕೋಟಿ ರೂ., ಬೆಂಗಳೂರು ಅಭಿವೃದ್ಧಿಯಲ್ಲಿ ಕೆರೆ ಮತ್ತು ಫೆರಿಫೆರಲ್ ರಿಂಗ್ ರಸೆಗೆ 6 ಸಾವಿರ ಕೋಟಿ ರೂ., ಆರೋಗ್ಯ ಅನುದಾನವಾಗಿ 1,683 ಕೋಟಿ ರೂ. ನೀಡಬೇಕಿತ್ತು ಎಂದು ಅವರು ಹೇಳಿದರು.

ಅಲ್ಲದೇ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 10,547 ಕೋಟಿ ರೂ, ನಗರ ಸ್ಥಳೀಯ ಸಂಸ್ಥೆಗಳಿಗೆ 5,215 ಕೋಟಿ ರೂ., ತೆರಿಗೆ ಹಂಚಿಕೆ ಸೂತ್ರದಲ್ಲಿ ಆದ ನಷ್ಟಕ್ಕಾಗಿ 8 ಸಾವಿರ ಕೋಟಿ ರೂ.ಗಳನ್ನು ನೀಡಬೇಕಿತ್ತು. ಎನ್‍ಡಿಆರ್‍ಎಫ್ ಅಡಿ ಬೇಡಿಕೆ ಇಟ್ಟಿದ್ದ 18,171 ಕೋಟಿ ರೂ,ಗಳಲ್ಲಿ 10,907 ಕೋಟಿ ರೂ.ಗಳನ್ನು ನ್ಯಾಯಾಲಯದ ಮೊರೆ ಹೋದ ಬಳಿಕ ನೀಡಿದರು. ಇನ್ನೂ 7264 ಕೋಟಿ ರು. ಬಾಕಿಯಿದೆ ಎಂದು ಪೊನ್ನಣ್ಣ ತಿಳಿಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹೆಚ್ಚುವರಿ 10,247 ಕೋಟಿ ರೂ., ಸೆಸ್ ಮತ್ತು ಸರ್‍ಚಾರ್ಜ್ 8300 ಕೋಟಿ ರೂ.ಗಳು. ಹೀಗೆ ಕೇಂದ್ರ ಸರಕಾರದಿಂದ ನಮಗೆ 15ನೇ ಹಣಕಾಸು ಆಯೋಗದಲ್ಲಿ 1,25,559 ಕೋಟಿ ರೂ. ನಷ್ಟ ಉಂಟಾಗಿದೆ. ಇದೊಂದು ಆಘಾತಕಾರಿ ವಿಚಾರ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ. ಇಷ್ಟೊಂದು ಪ್ರಮಾಣದಲ್ಲಿ ನಷ್ಟ ಉಂಟಾದರೆ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ) ಕಾಯ್ದೆಯಡಿಯಲ್ಲಿ ನಮ್ಮ ರಾಜ್ಯದಲ್ಲಿ 2005-25ರವರೆಗೆ 76.81 ಲಕ್ಷ ಕಾಮಗಾರಿಗಳನ್ನು, 61,030 ಕೋಟಿ ರೂ.ವೆಚ್ಚದಲ್ಲಿ ನೀಡಿದ್ದೇವೆ. ಪ್ರತಿದಿನ 182.5 ಕೋಟಿ ಮಾನವ ದಿನಗಳನ್ನು ಕೊಟ್ಟಿದ್ದೇವೆ. ಇದರಲ್ಲಿ ಶೇ.90ರಷ್ಟು ಕೇಂದ್ರ, ಶೇ.10ರಷ್ಟು ರಾಜ್ಯ ಸರಕಾರದ ಪಾಲು, ಕೂಲಿ ಪಾವತಿ ಸಂಪೂರ್ಣ ಕೇಂದ್ರ ಸರಕಾರದ ಜವಾಬ್ದಾರಿಯಾಗಿತ್ತು ಎಂದು ಪೊನ್ನಣ್ಣ ಹೇಳಿದರು.

ಆದರೆ, ಈಗ ಹೊಸ ಕಾಯ್ದೆ ತಂದು ಗ್ರಾಮೀಣ ಭಾಗದ ಜನರ ಬದುಕು ಹಸನು ಮಾಡುವಂತಹ ಮನರೇಗಾ ಕಾಯ್ದೆಯ ನಿಯಮಗಳು, ಯೋಜನೆಗಳು, ಆದೇಶಗಳನ್ನು ಹಿಂಪಡೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಪಾಲು ಕ್ರಮವಾಗಿ ಶೇ.60 ಹಾಗೂ ಶೇ.40ರಷ್ಟು ಮಾಡಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದಲ್ಲಿ 7300 ಕೋಟಿ ರೂ.ವೆಚ್ಚದಲ್ಲಿ 9 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದರೆ ಅದರಲ್ಲಿ 3500 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಪಾವತಿ ಮಾಡಬೇಕು. ರಾಜ್ಯಗಳ ಮೇಲೆ ಆರ್ಥಿಕ ಹೊರೆ ಬೀಳುವಂತಹ ಈ ಕಾನೂನು ತರುವ ಮುನ್ನ ಒಂದೇ ಒಂದು ಚರ್ಚೆಯನ್ನು ರಾಜ್ಯಗಳ ಜೊತೆ ನಡೆಸಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಶಿಸ್ತು ಕಾಪಾಡಿಕೊಂಡು ದಾಖಲೆಯ ಬಜೆಟ್‍ಗಳನ್ನು ಮಂಡನೆ ಮಾಡಿದ್ದಾರೆ. ಸಾಮಾಜಿಕ ಭದ್ರತೆ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಕಾರ್ಯಕ್ರಮಗಳನ್ನು ನಮ್ಮ ಸರಕಾರ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳಡಿಯಲ್ಲಿ ಫಲಾನುಭವಿಗಳ ಖಾತೆಗೆ 1,16,706 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದೆವೆ. ಇದರಿಂದಾಗಿ, ಆಹಾರ ಭದ್ರತೆ ಹೆಚ್ಚಾಗಿ, ಬಡತನ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಪೊನ್ನಣ್ಣ ಹೇಳಿದರು.

ಇದಕ್ಕೂ ಮುನ್ನ ಎ.ಎಸ್.ಪೊನ್ನಣ್ಣ ತಮ್ಮ ಭಾಷಣದ ಆರಂಭದಲ್ಲಿ ದೇಶದಲ್ಲಿ ಸಂವಿಧಾನಕ್ಕಿಂತ ದೊಡ್ಡವರು ಯಾರೂ ಇಲ್ಲ. ಸಂವಿಧಾನದ ಅಡಿಯಲ್ಲಿ ಸರಕಾರ, ಸಚಿವ ಸಂಪುಟದ ಸಲಹೆ ಮೇರೆಗೆ ಸಿದ್ಧವಾಗುವಂತಹ ಭಾಷಣವನ್ನು ರಾಜ್ಯಪಾಲರು ಓದಬೇಕು. ಆದರೆ, ಅವರು ಭಾಷಣವನ್ನು ಮಂಡಿಸಿ ಹೊರಗೆ ಹೋಗಿದ್ದಾರೆ. ಸಂವಿಧಾನಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ಇರೋದು ನನಗೆ ನೋವು ಉಂಟು ಮಾಡಿದೆ ಎಂದರು. ಇದ್ಕಕೆ ಕೆಲಕಾಲ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಅಧಿವೇಶನ ನಡೆಯುವಾಗ ಲಕ್ಷಾಂತರ ಕಾಗದಗಳನ್ನು ಮುದ್ರಣ ಮಾಡಲಾಗುತ್ತದೆ. ಆದರೆ, ಕಾರ್ಯಕಲಾಪಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಎಲ್ಲರೂ ಸಂಪೂರ್ಣ ಓದಲು ಹೋಗುವುದಿಲ್ಲ. ಇದರಿಂದಾಗಿ, ದೊಡ್ಡ ಪ್ರಮಾಣದಲ್ಲಿ ಕಾಗದಗಳು, ಪುಸ್ತಕಗಳು ವ್ಯರ್ಥವಾಗುತ್ತಿವೆ. ಆದುದರಿಂದ, ತಮಿಳುನಾಡು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಕಾರ್ಯಕಲಾಪಗಳನ್ನು ಡಿಜಿಟಲೀಕರಣ ಮಾಡಿ, ಐ ಪಾಡ್‍ಗಳನ್ನು ನೀಡಿದ್ದಾರೆ. ಅದೇ ರೀತಿ, ಕರ್ನಾಟಕದ ವಿಧಾನಸಭೆಯನ್ನು ಡಿಜಿಟಲೀಕರಣ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಎ.ಎಸ್. ಪೊನ್ನಣ್ಣ, ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸಲಹೆ ನೀಡಿದರು.

ಸಾಂವಿಧಾನಿಕವಾಗಿ ರಾಜ್ಯಪಾಲರ ಹುದ್ದೆಯ ಸ್ಥಾನಮಾನದ ಬಗ್ಗೆ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಪದೇ ಪದೇ ಅವರಿಗೆ ಅಡ್ಡಿಪಡಿಸುವುದು ಎಷ್ಟರಮಟ್ಟಿಗೆ ಸರಿ. ರಾಜ್ಯಪಾಲರ ಬಗ್ಗೆ ವೈಯಕ್ತಿಕವಾಗಿ ಅವರು ಏನು ಹೇಳುತ್ತಿಲ್ಲ. ಈ ಸದನದಲ್ಲಿ ಎಷ್ಟೋ ಜನರಿಗೆ ಸಾಂವಿಧಾನಿಕ ಸ್ಥಾನಮಾನದ ಸ್ಪಷ್ಟವಾಗಿ ಮಾಹಿತಿ ಇಲ್ಲ. ಅದರ ಬಗ್ಗೆ ಹೇಳಿದರೆ ಏನು ಸಮಸ್ಯೆ? ತಪ್ಪೇನಿದೆ?.

-ಡಾ.ಜಿ.ಪರಮೇಶ್ವರ್, ಗೃಹ ಸಚಿವ

‘ಎ.ಎಸ್.ಪೊನ್ನಣ್ಣ ತಮ್ಮ ಮಾತುಗಳಲ್ಲಿ ಯಾರ ಬಗ್ಗೆಯೂ ವ್ಯಕ್ತಿಗತವಾಗಿ ಹೇಳುತ್ತಿಲ್ಲ. ಸಾಂವಿಧಾನಿಕ ಸ್ಥಾನಮಾನದ ಬಗ್ಗೆ ಮಾತ್ರ ಹೇಳುತ್ತಿದ್ದಾರೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags

A.S. PonnannaCentre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X