ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡುವಂತೆ ಒತ್ತಾಯ

ಸಾಂದರ್ಭಿಕ ಚಿತ್ರ | PC : freepik
ಸಚಿವ ದಿನೇಶ್ ಗುಂಡೂರಾವ್ಗೆ ರಾಜ್ಯ ಮಹಿಳಾ ಆಯೋಗ ಪತ್ರ
ಬೆಂಗಳೂರು : ರಾಜ್ಯದಲ್ಲಿರುವ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಗೆ ಕಾರಣವಾಗುವ ಎಚ್.ಪಿ.ವಿ. ವೈರಸ್ ತಡೆಗಟ್ಟಲು ಉಚಿತ ಲಸಿಕೆ ನೀಡುತ್ತಿದೆ. ರಾಜ್ಯದಲ್ಲೂ ಗರ್ಭಕಂಠ ಕ್ಯಾನ್ಸರ್ ಗೆ ಕಾರಣವಾಗುವ ವೈರಸ್ ತಡೆಗಟ್ಟುವಲ್ಲಿ ಮಹಿಳೆಯರಿಗೆ ಉಚಿತವಾಗಿ ಲಸಿಕೆಯನ್ನು ನೀಡಿ, ಅವರಲ್ಲಿ ಕ್ಯಾನ್ಸರ್ ತಡೆಗಟ್ಟಲು ನೆರವಾಗಬೇಕು ಎಂದು ಅವರು ಹೇಳಿದ್ದಾರೆ.
Next Story





