Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಇಟಿ ಫಲಿತಾಂಶ | ಯೂನಿಕ್ ಸಂಖ್ಯೆ...

ಸಿಇಟಿ ಫಲಿತಾಂಶ | ಯೂನಿಕ್ ಸಂಖ್ಯೆ ತಪ್ಪಾಗಿ ದಾಖಲಿಸಿದ 3 ಸಾವಿರ ಅಭ್ಯರ್ಥಿಗಳ ಫಲಿತಾಂಶಕ್ಕೆ ತಡೆ

ತಿದ್ದುಪಡಿಗೆ ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಿದ ಕೆಇಎ

ವಾರ್ತಾಭಾರತಿವಾರ್ತಾಭಾರತಿ2 Jun 2024 6:47 PM IST
share
ಸಿಇಟಿ ಫಲಿತಾಂಶ | ಯೂನಿಕ್ ಸಂಖ್ಯೆ ತಪ್ಪಾಗಿ ದಾಖಲಿಸಿದ 3 ಸಾವಿರ ಅಭ್ಯರ್ಥಿಗಳ ಫಲಿತಾಂಶಕ್ಕೆ ತಡೆ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಪಿಯುಸಿಯಲ್ಲಿ ನೀಡಿದ್ದ ಯೂನಿಕ್ ಸಂಖ್ಯೆಯನ್ನು ತಪ್ಪಾಗಿ ದಾಖಲಿಸಿದ ಸುಮಾರು ಮೂರು ಸಾವಿರ ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರ್‍ಯಾಂಕ್‌ ತಡೆಹಿಡಿದಿರುವ ಅಥವಾ ರ್‍ಯಾಂಕ್‌ ನೀಡದೇ ಇರುವ ಅಭ್ಯರ್ಥಿಗಳು ಆತಂಕಪಡುವ ಅಗತ್ಯ ಇಲ್ಲ. ಅಂತಹವರು ನಾಳೆಯಿಂದಲೇ(ಜೂ.3) ಕೆಇಎ ಬಿಡುಗಡೆ ಮಾಡುವ ಪೋರ್ಟಲ್ ನಲ್ಲಿ ತಮ್ಮ ಅಂಕಗಳನ್ನು ದಾಖಲಿಸಿ ರ್‍ಯಾಂಕ್ ಪಡೆಯಬಹುದು ಎಂದರು.

ಪಿಯುಸಿಯಲ್ಲಿ ನೀಡಿದ್ದ ಯೂನಿಕ್ ಸಂಖ್ಯೆಯನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲ ಅಭ್ಯರ್ಥಿಗಳು ತಪ್ಪಾಗಿ ನಮೂದಿಸಿದ್ದ ಪಕ್ಷದಲ್ಲಿ ರ್‍ಯಾಂಕ್‌ ಪ್ರಕಟಣೆ ಆಗಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸರಿ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ಈ ರೀತಿ ರ್‍ಯಾಂಕ್‌ ತಡೆಹಿಡಿದಿರುವ ಸುಮಾರು ಮೂರು ಸಾವಿರ ಅಭ್ಯರ್ಥಿಗಳು ಇದ್ದಾರೆ. ಅಂತಹವರಿಗೆ ಈ ತೀರ್ಮಾನದಿಂದ ಅನುಕೂಲ ಆಗಲಿದೆ. ಪ್ರತಿಬಾರಿಯೂ ಈ ರೀತಿಯ ಒಂದಷ್ಟು ಮಂದಿ ತಪ್ಪುಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಜಂಟಿ ಕೌನ್ಸೆಲಿಂಗ್: ನೀಟ್ ಫಲಿತಾಂಶದ ನಂತರ ಹಾಗೂ ಅದರ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ನೋಡಿಕೊಂಡು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಒಟ್ಟಿಗೇ ಕೌನ್ಸೆಲಿಂಗ್ ಮಾಡಲಾಗುವುದು. ಇದರಿಂದ ಅನಗತ್ಯ ಗೊಂದಲ ತಪ್ಪಿಸಬಹುದು. ಹೀಗಾಗಿ ಕೌನ್ಸೆಲಿಂಗ್ ದಿನಾಂಕಗಳನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಮತ್ತೊಂದು ಅವಕಾಶ: ನೀಟ್ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಸರಕಾರಿ ಕೋಟಾ ಸೀಟು ಎಲ್ಲೂ ಹೋಗಲ್ಲ: ವೃತ್ತಿಪರ ಕೋರ್ಸ್‌ಗಳಲ್ಲಿ ಸರಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷನ್ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು.

ಕೆಇಎ ಮೂಲಕವೇ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್ ಲೈನ್ ದಾಖಲೆ ಪರಿಶೀಲನೆ: ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳು ಅಪ್ಲೋಡ್ ಮಾಡಿರುವ ಶೈಕ್ಷಣಿಕ ದಾಖಲೆಗಳನ್ನು(ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿ, ಭಾಷಾ ಅಲ್ಪಸಂಖ್ಯಾತ ಮೀಸಲಾತಿ) ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆನ್ಲೈನ್‌ನಲ್ಲಿ ಪರಿಶೀಲನೆ ನಡೆಸಿ, ಮಂಜೂರಾತಿ ನೀಡುತ್ತಿದ್ದು, ಯಾವುದೇ ಗೊಂದಲ ಇಲ್ಲದೆ ಸಾಗಿದೆ. ಸೋಮವಾರಕ್ಕೆ ಇದು ಪೂರ್ಣವಾಗಲಿದೆ ಎಂದು ಹೇಳಿದರು.

ಸೀಟ್ ಮ್ಯಾಟ್ರಿಕ್: ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X