ಸಿಇಟಿ ಫಲಿತಾಂಶ ಪ್ರಕಟ

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇಂದು(ಜೂ.6) ಪ್ರಕಟವಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಮಧ್ಯಾಹ್ನ 2:00 ಗಂಟೆಯ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅಂಕಪಟ್ಟಿ ಮತ್ತು ರ್ಯಾಂಕ್ ಅನ್ನು ವೀಕ್ಷಿಸಬಹುದಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
https://keaonline.karnataka.gov.in/ugcet_2026_results/ ಅಥವಾ https://cetonline.karnataka.gov.in/kea/ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
Next Story




