Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೂನ್ಯ ಸಾಧನೆ, ಮಿತಿ ಮೀರಿದ...

ಶೂನ್ಯ ಸಾಧನೆ, ಮಿತಿ ಮೀರಿದ ಭ್ರಷ್ಟಾಚಾರಕ್ಕೂ ಸಮಾವೇಶ ಬೇಕೇ? : ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 July 2025 4:22 PM IST
share
ಶೂನ್ಯ ಸಾಧನೆ, ಮಿತಿ ಮೀರಿದ ಭ್ರಷ್ಟಾಚಾರಕ್ಕೂ ಸಮಾವೇಶ ಬೇಕೇ? : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಶೂನ್ಯ ಸಾಧನೆ, ಮಿತಿ ಮೀರಿದ ಭ್ರಷ್ಟಾಚಾರಕ್ಕೂ ಒಂದು ಸಮಾವೇಶ ಬೇಕೇ? ಸಿದ್ದರಾಮಯ್ಯನವರೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಶಾಸಕರು ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಅವರೇ ಧ್ವನಿ ಎತ್ತಿದ್ದು, ಸಾಧನೆ ಏನೂ ಆಗಿಲ್ಲ ಎಂದಿದ್ದಾರೆ. ತಾವು ಕ್ಷೇತ್ರಗಳಿಗೆ ಹೋಗಲಾಗುತ್ತಿಲ್ಲ ಎಂದು ಆರೋಪಿಸಿದ ಬಳಿಕ ಕೇವಲ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಲ್ಲ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ಮುಖ್ಯಮಂತ್ರಿ ಎಂದು ಜನರು ಮಾತನಾಡುತ್ತಾರೆ. ಇದಕ್ಕೆ ನಿಮ್ಮ ಉತ್ತರವೇನು ಸಿದ್ದರಾಮಯ್ಯನವರೇ ಎಂದು ಕೇಳಿದರು.

ವಿಪಕ್ಷಗಳ ಕ್ಷೇತ್ರಗಳಿಗೆ ಅಭಿವೃದ್ಧಿ ಬೇಕಿಲ್ಲವೇ? ಮುಖ್ಯಮಂತ್ರಿಗಳು ರಾಜ್ಯದ ಕೆಲಸ ಮಾಡಬೇಡವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಅವರು ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರ ಹೆಸರನ್ನೇ ಘೋಷಿಸಲಿ :

ಕಾಂಗ್ರೆಸ್ಸಿಗರು ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕೆಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ಸಲಹೆಯಲ್ಲಿ ಏನು ತಪ್ಪಿತ್ತು ಎಂದು ಅವರು ಪ್ರಶ್ನಿಸಿದರು. ನಿಮಗೆ ದಲಿತರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಇಷ್ಟವಿಲ್ಲದಿದ್ದರೆ, ಸಿದ್ದರಾಮಯ್ಯನವರ ಹೆಸರನ್ನೇ ಘೋಷಿಸಲಿ ಎಂದು ತಿಳಿಸಿದರು.

ಕಾಂಗ್ರೆಸ್ಸಿಗೆ ದಲಿತರು ಕೇವಲ ಮತಬ್ಯಾಂಕ್. ಅವರನ್ನು ಕಾಂಗ್ರೆಸ್ ಪಕ್ಷ ಗುಲಾಮರೆಂದು ತಿಳಿದಿದೆ. ಹಿಂದುಳಿದ ವರ್ಗಗಳ ಚಾಂಪಿಯನ್ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಒಂದು ಸಮಿತಿ ಮಾಡಿದ್ದಾರೆ. ನಿಮ್ಮನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ಒತ್ತಾಯಿಸಿದರು.

ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಎಸ್.ವಿ. ರಾಮಚಂದ್ರಗೌಡ(ಸೀಕಲ್), ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಕೆ.ನಾರಾಯಣ, ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಜಿ.ಎಸ್ ಪ್ರಶಾಂತ್, ಬಿಜೆಪಿ ನಿಕಟಪೂರ್ವ ರಾಜ್ಯ ವಕ್ತಾರ ಜಿ.ವಿ.ಕೃಷ್ಣ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X