Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ನಿವಾಸಕ್ಕೆ ಭದ್ರತೆ ಕಲ್ಪಿಸಲು...

ನನ್ನ ನಿವಾಸಕ್ಕೆ ಭದ್ರತೆ ಕಲ್ಪಿಸಲು ಸೂಚಿಸಿ; ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ವಾರ್ತಾಭಾರತಿವಾರ್ತಾಭಾರತಿ31 Oct 2025 7:40 PM IST
share
ನನ್ನ ನಿವಾಸಕ್ಕೆ ಭದ್ರತೆ ಕಲ್ಪಿಸಲು ಸೂಚಿಸಿ; ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬೆಂಗಳೂರು : ನನ್ನ ನಿವಾಸಕ್ಕೆ ಕಲ್ಪಿಸಿದ್ದ ಭದ್ರತೆಯನ್ನು ಯಾವುದೇ ಮುನ್ಸೂಚನೆ ಇಲ್ಲದೆ ಹಿಂಪಡೆದಿದ್ದು, ಪುನಃ ನನ್ನ ನಿವಾಸಕ್ಕೆ ಭದ್ರತೆ ಕಲ್ಪಿಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ, ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಭಾಪತಿ ಬಸವರಾಜ ಹೊರಟ್ಟಿಗೆ ಪತ್ರ ಬರೆದಿದ್ದಾರೆ.

ಶುಕ್ರವಾರ ಸಭಾಪತಿ, ಸಿಎಂ, ಗೃಹ ಸಚಿವ, ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದು, ‘ನಾನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿದ್ದು, ಕೆಲವು ತಿಂಗಳಿಂದ ನನ್ನ ವಿರುದ್ಧ ರಾಜಕೀಯ ದ್ವೇಷದ ಸ್ವರೂಪದಲ್ಲಿ ನಡೆಯುತ್ತಿರುವ ಘಟನೆಗಳು ನನ್ನ ಹಾಗೂ ನನ್ನ ಕುಟುಂಬದ ಜೀವಭದ್ರತೆ ಬಗ್ಗೆ ಗಂಭೀರ ಆತಂಕವನ್ನು ಉಂಟುಮಾಡಿವೆ’ ಎಂದು ಗಮನ ಸೆಳೆದಿದ್ದಾರೆ.

ಇದಕ್ಕೆ ನಿದರ್ಶನವಾಗಿ ಮೇ 21ರಂದು ಚಿತ್ತಾಪುರ ಸರಕಾರಿ ಅತಿಥಿ ಗೃಹದಲ್ಲಿ ನನ್ನನ್ನು ಹೊರಬರದಂತೆ ಗೃಹ ಬಂಧನದಲ್ಲಿಟ್ಟಂತಹ ಘಟನೆ ನಡೆದಿದೆ. ಈ ಕುರಿತು ನಾನು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ದೂರು ದಾಖಲಿಸಿಲ್ಲ ಮತ್ತು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

ಇದಕ್ಕೂ ಮೀರಿ, ಕೆಲವು ದಿನಗಳಿಂದ ಅಪರಿಚಿತರಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಜಾಲತಾಣಗಳಲ್ಲಿ ನಿಂದನಾತ್ಮಕ ಹಾಗೂ ಬೆದರಿಕೆ ಹಾಕುವ ಪೋಸ್ಟ್‌ ಗಳು ಮರುಕಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಾನು ಆತಂಕಗೊಂಡಿದ್ದೇನೆ. ಇಂತಹ ಸ್ಥಿತಿಯಲ್ಲಿ ನನ್ನ ನಿವಾಸಕ್ಕೆ ನಿಯೋಜಿಸಿದ್ದ ಕಾವಲುಪಡೆಯನ್ನು ಮುನ್ಸೂಚನೆ ಇಲ್ಲದ ಹಾಗೂ ಕಾರಣವಿಲ್ಲದೆ ಹಿಂದಕ್ಕೆ ಕರೆಸಿಕೊಳ್ಳಲಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿ ನಡೆದಿರುವಂತೆ ತೋರುತ್ತಿದ್ದು, ಇದು ದ್ವೇಷದ ರಾಜಕಾರಣದ ಪ್ರತಿಫಲವೆಂದು ನನಗೆ ಅನಿಸುತ್ತಿದೆ.

ಇತ್ತೀಚಿಗೆ ಶಿವರಾಜ ಮುತ್ತಣ್ಣನವರ್ ಎಂಬವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ‘ಕುರುಬರಿಗೆ ಎಸ್.ಟಿ. ಮೀಸಲಾತಿ ನೀಡುವುದನ್ನು ವಿರೋಧಿಸಿದರೆ ಛಲವಾದಿ ನಾರಾಯಣಸ್ವಾಮಿಯನ್ನು ಜೀವಂತ ಸುಟ್ಟು ಹಾಕುತ್ತೇನೆ’ ಎಂದು ಭಯಾನಕವಾಗಿ ಬರೆದು ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ. ಈ ಹೇಳಿಕೆಗಳು ನನ್ನ ಜೀವಕ್ಕೆ ನೇರ ಬೆದರಿಕೆಯಾಗಿದೆ ಮತ್ತು ಕಾನೂನು ಕ್ರಮಕ್ಕೆ ಒಳಪಟ್ಟಂತಹವುಗಳಾಗಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಕಾರದಿಂದ ಏಕಾಏಕಿ ನನ್ನ ನಿವಾಸಕ್ಕೆ ಒದಗಿಸಿದ್ದ ಭದ್ರತೆಯನ್ನು ಹಿಂಪಡೆದಿರುವುದು ಅಸಮಂಜಸ ಹಾಗೂ ಅನ್ಯಾಯಕರ. ಇಂತಹ ಕ್ರಮಗಳು ನನ್ನ ವಿರುದ್ಧ ಷಡ್ಯಂತ್ರ ಮತ್ತು ದ್ವೇಷದ ರಾಜಕಾರಣ ನಡೆಯುತ್ತಿರುವ ಅನುಮಾನವನ್ನು ಬಲಪಡಿಸುತ್ತಿವೆ. ವಿಪಕ್ಷದ ನಾಯಕನಾಗಿ ನನ್ನ ಸುರಕ್ಷತೆ ಸರಕಾರದ ನೈತಿಕ ಹಾಗೂ ಕಾನೂನುಬದ್ಧ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಆದ್ದರಿಂದ ನನ್ನ ನಿವಾಸಕ್ಕೆ ಹಿಂದಿನಂತೆಯೇ ಭದ್ರತೆಯನ್ನು ತಕ್ಷಣವೇ ಪುನಃ ನಿಯೋಜಿಸಬೇಕು. ನನ್ನ ಜೀವಕ್ಕೆ ಬೆದರಿಕೆ ನೀಡಿದ ಶಿವರಾಜ ಮುತ್ತಣ್ಣನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮುಂದಿನ ದಿನಗಳಲ್ಲಿ ನನ್ನ ಹಾಗೂ ನನ್ನ ಕುಟುಂಬದ ಜೀವ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರಕಾರದ ಗಮನಕ್ಕೆ ತರಬೇಕೆಂದು ಹಾಗೂ ಅಗತ್ಯ ಸೂಚನೆ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X