Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಛಲವಾದಿ ನಾರಾಯಣಸ್ವಾಮಿ ಒಬ್ಬ ‘ಶೆಡ್...

ಛಲವಾದಿ ನಾರಾಯಣಸ್ವಾಮಿ ಒಬ್ಬ ‘ಶೆಡ್ ಗಿರಾಕಿ’ : ಸಚಿವ ಎಂ.ಬಿ.ಪಾಟೀಲ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ29 Aug 2024 6:09 PM IST
share
ಛಲವಾದಿ ನಾರಾಯಣಸ್ವಾಮಿ ಒಬ್ಬ ‘ಶೆಡ್ ಗಿರಾಕಿ’ : ಸಚಿವ ಎಂ.ಬಿ.ಪಾಟೀಲ್ ಟೀಕೆ

ಬೆಂಗಳೂರು : ‘ಕಾಂಗ್ರೆಸ್ ನಾಯಕರ ಮೇಲೆ ಉದ್ದೇಶ ಪೂರಕವಾಗಿ ಆಪಾದನೆ ಮಾಡುತ್ತಿರುವ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. ಆತ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.

ಗುರುವಾರ ವಿಧಾನಸೌದದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿಎ ನಿವೇಶನ ಕೊಟ್ಟಿದ್ದಕ್ಕೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ ಎಂದರು.

2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ ಜಾಗ ಪಡೆದುಕೊಂಡಿರುವ ಅವರು 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ. ಅವರೊಬ್ಬ ಶೆಡ್ ಗಿರಾಕಿಯೇ ವಿನಾ ರಾಹುಲ್ ಖರ್ಗೆ ಅವರಂತೆ ಉದ್ಯಮಶೀಲರಲ್ಲ. ಇಂಥವರು ನಮಗೆ ಪಾಠ ಮಾಡಲು ಬರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಖರ್ಗೆ ಎರಡು ಬಾರಿ ಯುಪಿಎಸ್ಸಿ ಪರೀಕ್ಷೆ ಉತ್ತೀರ್ಣ ಮಾಡಿರುವುದಲ್ಲದೆ, ಇಂಜಿನಿಯರಿಂಗ್ ಪದವಿ ಪಡೆದು ಡಿಆರ್ ಡಿಓ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇಂತಹ ಅರ್ಹರಿಗೆ ಸಿಎ ನಿವೇಶನ ಕೊಡದೆ ಬಿಜೆಪಿಯವರಂತೆ ನಿಯಮಗಳನ್ನು ಗಾಳಿಗೆ ತೂರಿ ಯಾರಿಗೆ ಬೇಕೋ ಅವರಿಗೆ ಕೊಡಬೇಕಾಗಿತ್ತೇನು ಎಂದು ಪ್ರಶ್ನಿಸಿದ ಅವರು, ನಾರಾಯಣಸ್ವಾಮಿ ಈಗ ತಮಗೆ ಮಂಜೂರಾಗಿರುವ ಕೈಗಾರಿಕಾ ನಿವೇಶನದ ಸಮರ್ಪಕ ಬಳಕೆಗೆ ಮತ್ತೊಮ್ಮೆ 6 ತಿಂಗಳ ಕಾಲಾವಕಾಶ ಪಡೆದುಕೊಂಡಿದ್ದಾರೆ. ಇಲ್ಲೂ ಅವರು ವಿಫಲರಾದರೆ, ನಿಯಮಗಳ ಪ್ರಕಾರ ಆ ಜಮೀನನ್ನು ಸರಕಾರದ ವಶಕ್ಕೆ ಪಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಾರಾಯಣಸ್ವಾಮಿ ಸ್ವತಃ ತಮ್ಮ ಸಮುದಾಯದ ಹಿರಿಯರೂ ಮುತ್ಸದ್ದಿಗಳೂ ಆದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಇದು ಬಿಜೆಪಿಯ ಕುತಂತ್ರ. ದಲಿತರು ಪರಸ್ಪರ ಹೊಡೆದಾಡುತ್ತಿದ್ದರೆ ಅವರಿಗೆ ಲಾಭವಿದೆ. ತಮಗೆ ನೀಡಿರುವ ಕೈಗಾರಿಕಾ ನಿವೇಶನದಲ್ಲಿ ನಾರಾಯಣಸ್ವಾಮಿ ಇಷ್ಟು ಹೊತ್ತಿಗೆ ಶೇ.51ರಷ್ಟು ಭೂಮಿಯ ಬಳಕೆ ಮಾಡಿಕೊಳ್ಳಬೇಕಾಗಿತ್ತು. ಆದರೆ ಅವರು ಕೇವಲ ಶೇಕಡ 5.ರಷ್ಟು ಭೂಮಿಯಲ್ಲಿ ಕಾಟಾಚಾರಕ್ಕೆ ಶೆಡ್ ಹಾಕಿ, ಬಾಡಿಗೆಗೆ ಇದೆ ಎಂದು ಬೋರ್ಡ್ ನೇತು ಹಾಕಿದ್ದಾರೆ ಎಂದು ಆರೋಪಿಸಿದರು.

ಅದು ಅಲ್ಲದೆ, ನಾರಾಯಣಸ್ವಾಮಿ 2006ರಲ್ಲಿ `ಬೃಂದಾವನ್ ಸಾಫ್ಟ್‌ ವೇರ್’ ಎನ್ನುವ ಕಂಪೆನಿ ಶುರು ಮಾಡುವುದಾಗಿ ಭೂಮಿ ಪಡೆದುಕೊಂಡರು. ಆ ಮೇಲೆ ಅಲ್ಲಿ ಅದೇ ಹೆಸರಿನ ಗಾರ್ಮೆಂಟ್ಸ್‌ ಕಾರ್ಖಾನೆ ಆರಂಭಿಸುತ್ತೇನೆ ಎಂದರು. ಬಳಿಕ ಗೋದಾಮು ಮಾಡುತ್ತೇನೆಂದರು. ಅವರು ಕಾಲಕಾಲಕ್ಕೆ ಬೇರೆಬೇರೆ ಉದ್ದೇಶಕ್ಕೆ ಬದಲಿಸಿಕೊಂಡರೇ ವಿನಾ ಏನನ್ನೂ ದಡ ಮುಟ್ಟಿಸಲಿಲ್ಲ. ಇದಾದ ಮೇಲೆ ಸರಕಾರವು ನಿಯಮದಂತೆ 2016ರ ನ.11ರಂದು ಜಮೀನನ್ನು ವಾಪಸ್ ಪಡೆಯಲು ಆದೇಶಿಸಿತು. ಇದರ ವಿರುದ್ಧ ಹೈಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದ ಈ ವ್ಯಕ್ತಿ ಈಗ ಪುಕ್ಕಟೆ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X