Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ...

ಸಚಿವ ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Dec 2024 5:43 PM IST
share
ಸಚಿವ ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು : ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು, ತಕ್ಷಣ ಅವರನ್ನು ಬಂಧಿಸಬೇಕು. ಅವರು ತನಿಖೆಗೆ ಸಹಕರಿಸುವಂತೆ ಸರಕಾರ ಮಾಡಬೇಕು. ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರ ಅಟ್ಟಹಾಸ ಬಹಳ ನಡೆಯುತ್ತಿದೆ. ಕಲಬುರಗಿಯಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಎಲ್ಲದರಲ್ಲೂ ತಮಗೆ ಬೇಕಾದವರನ್ನು ಸಹಚರರನ್ನಾಗಿ ಜೋಡಿಸಿಕೊಂಡು ಎಲ್ಲ ರೀತಿಯ ದಂಧೆಗಳಲ್ಲಿ ತೊಡಗಿದ್ದಾರೆ ಎಂದು ದೂರಿದರು.

ಮರಳು ದಂಧೆ, ಟೈಲ್ಸ್, ಸಿಮೆಂಟ್ ಫ್ಯಾಕ್ಟರಿಗಳ ದಂಧೆ ಸಹಿತ ಎಲ್ಲ ರೀತಿಯ ದಂಧೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಗುತ್ತಿಗೆ ವಿಚಾರಕ್ಕೂ ಬೇಕಾದವರ ನೇಮಕ ಆಗಿದೆ. ಇದೇ ಕಾರಣಕ್ಕೂ ಸಚಿನ್ ಅವರ ಆತ್ಮಹತ್ಯೆ ಆಗಿದೆ. ಇದರ ಉನ್ನತ ತನಿಖೆ ಆಗಲೇಬೇಕು. ಮೃತ ಸಚಿನ್ 7 ಪುಟಗಳ ಡೆತ್‍ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅದರಲ್ಲಿ ಆಂದೋಲ ಸ್ವಾಮಿ, ಚಂದು ಪಾಟೀಲ, ಬಸವರಾಜ ಮತ್ತಿಮೂಡರನ್ನು ಸುಪಾರಿ ಕೊಟ್ಟು ಸಾಯಿಸುವ ವಿಚಾರವೂ ಪ್ರಸ್ತಾಪವಾಗಿದೆ ಎಂದು ವಿವರ ನೀಡಿದರು.

ರಿಪಬ್ಲಿಕ್ ಆಫ್ ಕಲಬುರಗಿ: ಅದು ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ, ಕಲಬುರಗಿಯ ವ್ಯವಸ್ಥೆಯೇ ಬೇರೆಯಾಗಿದೆ. ಪೊಲೀಸರು ಅಲ್ಲಿ ಪ್ರಿಯಾಂಕ್‌ ಖರ್ಗೆಯವರು ಹೇಳಿದ್ದೇ ಆಡಳಿತ ಎಂಬಂತೆ ನಡೆದುಕೊಳ್ಳುತ್ತಾರೆ. ಅಲ್ಲಿ ಖರ್ಗೆ ಮನೆತನದ ದೊಡ್ಡ ಪಾರುಪತ್ಯ ನಡೆದಿದೆ. ಬೇರೆ ಯಾರಿಗೂ ಮಾತನಾಡಲು ಅವಕಾಶ ಇಲ್ಲ, ವಿಶೇಷವಾಗಿ ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಅವರು ಟೀಕಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X