Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಚುನಾವಣಾ ಆಯೋಗ ಚಲೋʼ: ನಟ ಪ್ರಕಾಶ್‌...

ʼಚುನಾವಣಾ ಆಯೋಗ ಚಲೋʼ: ನಟ ಪ್ರಕಾಶ್‌ ರಾಜ್‌ ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ1 Sept 2026 2:32 PM IST
share
ʼಚುನಾವಣಾ ಆಯೋಗ ಚಲೋʼ: ನಟ ಪ್ರಕಾಶ್‌ ರಾಜ್‌ ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ

ಬೆಂಗಳೂರು : ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ಎಸ್ಐಆರ್ ವಿರೋಧಿ ಒಕ್ಕೂಟ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಹೋರಾಟದಲ್ಲಿ ಭಾಗವಹಿಸಿದ್ದ ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರು, ಹೋರಾಟಗಾರರು, ಚಿಂತಕರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಆಗಮಿಸುವಂತೆ ಚುನಾವಣಾ ಆಯೋಗದ ಪ್ರತಿನಿಧಿಗಳಿಗೆ ಎಸ್ಐಆರ್ ವಿರೋಧಿ ಒಕ್ಕೂಟದಿಂದ ಆಹ್ವಾನ ನೀಡಲಾಗಿತ್ತು. ಆದರೆ, ಚುನಾವಣಾ ಆಯೋಗದಿಂದ ಸಂಬಂಧಫಟ್ಟವರು ಸ್ಥಳಕ್ಕೆ ಬಾರದ ಕಾರಣ ಪ್ರಕಾಶ್ ರಾಜ್ ನೇತೃತ್ವದಲ್ಲಿ ಸಂತ್ರಸ್ತರು ಆಯೋಗಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಚುನಾವಣಾ ಆಯೋಗ ಮುತ್ತಿಗೆ ಹೋರಾದಲ್ಲಿ ನಟ ಕಿಶೋರ್ ಕುಮಾರ್, ಹಿರಿಯ ಸಾಹಿತಿಗಳಾದ ಎಲ್ಎನ್ ಮುಕುಂದರಾಜ್, ದಸಂಸ ಹಿರಿಯ ನಾಯಕರಾದ ಎನ್.ವೆಂಕಟೇಶ್, ಜನಶಕ್ತಿ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್ ಸೇರಿದಂತೆ ರಾಜ್ಯದ ದಲಿತ, ರೈತ, ಮಹಿಳಾ ಮತ್ತು ಭಾಷಾ ಚಳವಳಿಯ ಹಲವಾರು ಮುಖಂಡರು ಭಾಗವಹಿಸಿದ್ದರು.

ಹಕ್ಕೊತ್ತಾಯಗಳು:

1. ಯಾವೊಬ್ಬ ಮತದಾರರನ್ನೂ ಸಾಕಷ್ಟು ಸಮರ್ಥ ಕಾರಣವಿಲ್ಲದೆ ಮತದಾರರ ಪಟ್ಟಿಯಿಂದ ಹೊರದಬ್ಬಬಾರದು. ಡಿಲೀಟ್ ಮಾಡಲಾಗಿರುವ ಮಾತದಾರರಿಗೂ ಅಪೀಲ್ ಸಲ್ಲಿಸಿ ಸೇರ್ಪಡೆಗೊಳ್ಳಲು ಅವಕಾಶ ವಿಸ್ತರಿಸಬೇಕು. ಅರ್ಹ ಮತದಾರರನ್ನೂ ಒಳತರಲು ಪ್ರತಿ ಬೂತಿನ ಪ್ರತಿ ಮನೆಯನ್ನೂ ತಲುಪುವ ವಿಶೇಷ ಡ್ರೈವ್ ನಡೆಸಬೇಕು.

2. ಪ್ರತಿ ಬೂತಿನಲ್ಲಿ ಬೇರೆಕಡೆಯಿಂದ ಶಿಫ್ಟ್ ಆಗಿಬಂದು ಈಗ ಇಲ್ಲಿ ನೆಲೆಸಿರುವ ಮತದಾರರಿಗೆ ಫಾರಂ 8 ಕೊಟ್ಟು ಈಗ ವಾಸಿಸುತ್ತಿರುವ ವಿಳಾಸಕ್ಕೆ ತಮ್ಮ ಮತವನ್ನು ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು.

3. ನೋಟೀಸ್ ನೀಡುತ್ತಿರುವ 43 ಲಕ್ಷಮತದಾರರ ಹೆಸರುಗಳನ್ನು ಕಾರಣದ ಸಮೇತ ಪ್ರಕಟಿಸಬೇಕು. ಅವರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬಾರದು. ಎರಡು ದಾಖಲೆಗಳಿಗಿಂತ ಹೆಚ್ಚು ದಾಖಲೆ ಕೇಳಬಾರದು.

4. ಗ್ರಾಮ ಮತ್ತು ವಾರ್ಡ್ ಸಭೆಗಳನ್ನು ಕ್ರಮಬದ್ಧವಾಗಿ, ಸಾಕಷ್ಟು ಪ್ರಚಾರ ನೀಡಿ, ಅರ್ಥಪೂರ್ಣ ರೀತಿಯಲ್ಲಿ ನಡೆಸಬೇಕು.

5. ಕರ್ನಾಟಕದ ಚುನಾವಣೆಗಳಿಗೆ ಇನ್ನು ಸಾಕಷ್ಟು ಸಮಯ ಇರುವುದರಿಂದ ಅವಸರ ಮಾಡದೆ ಅಬ್ಜೆಕ್ಷನ್ ಮತ್ತುಅಪೀಲ್ ಅವಧಿಯನ್ನು ಆರು ತಿಂಗಳಕಾಲ ವಿಸ್ತರಿಸಬೇಕು.

Tags

Election CommissionPrakash Raj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X