Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿಯವರ...

ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ಹಲ್ಲೆ ಪ್ರಕರಣ: 26 ಮಂದಿಯ ಖುಲಾಸೆ ಆದೇಶ ಎತ್ತಿಹಿಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Oct 2026 7:16 PM IST
share
ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ಹಲ್ಲೆ ಪ್ರಕರಣ: 26 ಮಂದಿಯ ಖುಲಾಸೆ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ 2009ರಲ್ಲಿ ನಡೆದಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ಹಾಗೂ ಸಮುದಾಯ ಭವನದ ನಾಮಫಲಕವನ್ನು ತೆರವುಗೊಳಿಸಿ ಪರಿಶಿಷ್ಟ ಜಾತಿಯವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 26 ಮಂದಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಆರೋಪಿಗಳನ್ನು ಖುಲಾಸೆಗೊಳಿಸಿ ಚಾಮರಾಜನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2015ರ ಆ.20ರಂದು ಹೊರಡಿಸಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಜಿ. ಬಸವರಾಜ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದ ತೀರ್ಪಿನಲ್ಲಿ ಮಧ್ಯಪ್ರವೇಶಿಸುವಂಥ ಕಾನೂನಾತ್ಮಕ ಅಥವಾ ವಾಸ್ತವಿಕ ದೋಷ ಕಂಡುಬಂದಿಲ್ಲ ಎಂದು ಹೇಳಿದೆ.

ಹೈಕೋರ್ಟ್ ತೀರ್ಪು :

ಸಾಕ್ಷಿಗಳು, ದಾಖಲೆಗಳು ಹಾಗೂ ಪ್ರಕರಣದ ಭೌತಿಕ ಸಾಕ್ಷ್ಯಗಳನ್ನು ಮರುಪರಿಶೀಲಿಸಿದ ಬಳಿಕ ವಿಚಾರಣಾ ನ್ಯಾಯಾಲಯದ ನಿರ್ಣಯದಲ್ಲಿ ಲೋಪ ಕಂಡುಬಂದಿಲ್ಲ. ಘಟನೆ ನಡೆದ ಸಮಯದಲ್ಲಿ ವಿದ್ಯುತ್‌ ಇರಲಿಲ್ಲ ಎಂಬುದನ್ನು ಸಾಕ್ಷಿಗಳೇ ಒಪ್ಪಿಕೊಂಡಿದ್ದಾರೆ. ಅಂತಹ ಸಂದರ್ಭದಲ್ಲಿ ಆರೋಪಿಗಳನ್ನು ನಿಖರವಾಗಿ ಗುರುತಿಸಿದ ಕುರಿತು ಸ್ಪಷ್ಟ ಮತ್ತು ವಿಶ್ವಾಸಾರ್ಹ ವಿವರಣೆ ಇಲ್ಲ. ಪ್ರತ್ಯಕ್ಷ ದರ್ಶಿಗಳ ಹೇಳಿಕೆಗಳಲ್ಲಿನ ವೈರುಧ್ಯಗಳು ಸಾಮಾನ್ಯ ಸ್ವರೂಪದ್ದಾಗಿರದೆ, ಪ್ರಕರಣದ ಮೂಲವನ್ನೇ ಅನುಮಾನಿಸುವಂತಿವೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಗಳನ್ನು ಸಂಶಯಾತೀತವಾಗಿ ಸಾಬೀತುಪಡಿಸುವ ಹೊಣೆ ಪ್ರಾಸಿಕ್ಯೂಷನ್‌ ಮೇಲಿರುತ್ತದೆ. ಈ ಪ್ರಕರಣದಲ್ಲಿ ಆ ಮಾನದಂಡ ತಲುಪುವಂಥ ದೃಢವಾದ ಸಾಕ್ಷ್ಯ ಒದಗಿಸಲಾಗಿಲ್ಲ. ಆದ್ದರಿಂದ, ಆರೋಪಿಗಳಿಗೆ ಅನುಮಾನದ ಲಾಭ ನೀಡಿರುವ ವಿಚಾರಣಾ ನ್ಯಾಯಾಲಯದ ಕ್ರಮ ಸರಿಯಾಗಿದೆ ಎಂದಿರುವ ಹೈಕೋರ್ಟ್ ರಾಜ್ಯ ಸರಕಾರದ ಮೇಲ್ಮನವಿ ವಜಾಗೊಳಿಸಿದೆ.

ಪ್ರಕರಣವೇನು? :

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ 2009ರ ಜೂನ್ 6ರಂದು ಒಟ್ಟು 29 ಮಂದಿ ಮಾರಕಾಸ್ತ್ರಗಳನ್ನು ಹಿಡಿದು ಕಾನೂನುಬಾಹಿರವಾಗಿ ಗುಂಪು ಕಟ್ಟಿಕೊಂಡು ಗಲಭೆ ನಡೆಸಿದ್ದರು ಎಂದು ಪೊಲೀಸರು ಆರೋಪಿಸಿದ್ದರು.

ಸಮುದಾಯ ಭವನದ ನಾಮಫಲಕ ಮತ್ತು ಅಲ್ಲಿದ್ದ ಅಂಬೇಡ್ಕರ್‌ ಭಾವಚಿತ್ರವನ್ನು ಆರೋಪಿಗಳು ಕೆಳಗೆ ಎಳೆದಿದ್ದರು. ಸಾರ್ವಜನಿಕವಾಗಿ ಪರಿಶಿಷ್ಟ ಜಾತಿಯವರ ಭಾವನೆಗಳಿಗೆ ಧಕ್ಕೆ ತಂದು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿತ್ತು. ಈ ಸಂಬಂಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಕ್ರಮ ಕೂಟ, ಗಲಭೆ, ಮಾರಕಾಸ್ತ್ರಗಳೊಂದಿಗೆ ಗಲಭೆ, ಅಕ್ರಮ ತಡೆ, ಹಲ್ಲೆ, ಬೆದರಿಕೆ, ಆಸ್ತಿ ಹಾನಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1)(ಎಕ್ಸ್‌) ಮತ್ತು 3(1)(ಎಕ್ಸ್‌ಐ) ಅಡಿಯಲ್ಲಿಯೂ ಆರೋಪ ಹೊರಿಸಲಾಗಿತ್ತು.

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಪ್ರಾಸಿಕ್ಯೂಷನ್‌ ಒಟ್ಟು 13 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. 21 ದಾಖಲೆಗಳು ಹಾಗೂ 25 ಭೌತಿಕ ವಸ್ತುಗಳನ್ನು ಸಾಕ್ಷ್ಯವಾಗಿ ಸಲ್ಲಿಸಿತ್ತು. ದೂರುದಾರ ಮತ್ತು ಗಾಯಾಳುಗಳು ಸೇರಿದಂತೆ ಮೊದಲ ಏಳು ಸಾಕ್ಷಿಗಳನ್ನು ಪ್ರತ್ಯಕ್ಷ ದರ್ಶಿಗಳೆಂದು ಪರಿಗಣಿಸಲಾಗಿತ್ತು. ವೈದ್ಯರು ಹಾಗೂ ತನಿಖಾಧಿಕಾರಿಗಳ ಸಾಕ್ಷ್ಯವನ್ನೂ ದಾಖಲಿಸಲಾಗಿತ್ತು. ಮೂಲ ಪ್ರಕರಣದಲ್ಲಿ29 ಆರೋಪಿಗಳಿದ್ದರು. ಅವರಲ್ಲಿ ಒಬ್ಬ ಆರೋಪಿ ವಿರುದ್ಧ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದ್ದು, ಮತ್ತೊಬ್ಬರು ಸಾವಿಗೀಡಾಗಿದ್ದ ಕಾರಣ ಅವರ ವಿರುದ್ಧದ ಪ್ರಕರಣ ಮುಕ್ತಾಯಗೊಂಡಿತ್ತು. ಉಳಿದ 26 ಮಂದಿಯನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಗಾಯಾಳು ಸಾಕ್ಷಿಗಳ ಹೇಳಿಕೆಗಳಿಗೆ ವಿಚಾರಣಾ ನ್ಯಾಯಾಲಯ ಸೂಕ್ತ ಮಹತ್ವ ನೀಡಿಲ್ಲ. ಎಸ್‌ಸಿ-ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಾಮಾಜಿಕ ಉದ್ದೇಶ ಗಮನದಲ್ಲಿಟ್ಟುಕೊಂಡು ಸಾಕ್ಷ್ಯವನ್ನು ಪರಿಶೀಲಿಸಬೇಕಾಗಿತ್ತು ಎಂದು ವಾದ ಮಂಡಿಸಿದ್ದರು.

ಆರೋಪಿಗಳ ಪರ ವಕೀಲರು, ಸಾಕ್ಷ್ಯಗಳಲ್ಲಿರುವ ಗಂಭೀರ ವೈರುಧ್ಯಗಳನ್ನು ವಿಚಾರಣಾ ನ್ಯಾಯಾಲಯ ಸರಿಯಾಗಿಯೇ ಪರಿಗಣಿಸಿದೆ. ಕತ್ತಲಿನಲ್ಲಿ ಆರೋಪಿಗಳನ್ನು ಗುರುತಿಸಿರುವ ಬಗ್ಗೆ ಯಾವುದೇ ವಿಶ್ವಾಸಾರ್ಹ ವಿವರಣೆಯಿಲ್ಲ. ಆದ್ದರಿಂದ, ಆರೋಪಿಗಳಿಗೆ ಅನುಮಾನದ ಲಾಭ ನೀಡಿ ಖುಲಾಸೆಗೊಳಿಸಿರುವುದು ನ್ಯಾಯ ಸಮ್ಮತವಾಗಿದೆ ಎಂದು ವಾದಿಸಿದ್ದರು.

Tags

High CourtChamarajanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X