Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಪ್ರದೇಶದಲ್ಲಿ ಸಮರ್ಪಕ ಭೂ...

ಅರಣ್ಯ ಪ್ರದೇಶದಲ್ಲಿ ಸಮರ್ಪಕ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವವರನ್ನು ಒಕ್ಕಲೆಬ್ಬಿಸಬೇಡಿ : ಚೆಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 March 2025 1:59 PM IST
share
ಅರಣ್ಯ ಪ್ರದೇಶದಲ್ಲಿ ಸಮರ್ಪಕ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವವರನ್ನು ಒಕ್ಕಲೆಬ್ಬಿಸಬೇಡಿ : ಚೆಲುವರಾಯಸ್ವಾಮಿ

ಮಂಡ್ಯ : ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಅರಣ್ಯಾಧಿಕಾರಿಗಳು ಓಕ್ಕಲೆಬ್ಬಿಸುವ ಪ್ರಯತ್ನ ಮಾಡಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ರವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾವೆಲ್ಲರೂ ರೈತಾಪಿ ಕುಟುಂಬದಿಂದ ಬಂದವರು ಹಾಗಾಗಿ ಹಳ್ಳಿಯ ಜೀವನಶೈಲಿ ನಮಗೆ ಹೊಸತಲ್ಲ, ಅರಣ್ಯ ಪ್ರದೇಶದಲ್ಲಿ ಜೀವನೋಪಾಯಕ್ಕಾಗಿ ಜೀವನ ನಡೆಸುತ್ತಿರುವ ಜನರ ಮೇಲೆ ಅಧಿಕಾರಿಗಳು ಒತ್ತಡ ಏರಬೇಡಿ ಎಂದು ಹೇಳಿದರು.

ಈಗಾಗಲೇ ಸರ್ಕಾರದಿಂದಲೇ ಜಾಗ ಗುರುತಿಸಿ ಅವರಿಗೆ ಭೂಮಿ( ಹಕ್ಕು) ಪತ್ರವನ್ನು ನೀಡಲಾಗಿದೆ, ಅಂತಹ ಸ್ಥಳಗಳನ್ನು ಕೈಬಿಟ್ಟು ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ ಸರ್ವೆ ನಡೆಸಿ, ಅರಣ್ಯಾಧಿಕಾರಿಗಳು ಕಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಕಾರ್ಯ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಅನೇಕ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆ ಇರುತ್ತದೆ. ಅದರಿಂದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸರ್ಕಾರದಿಂದ ಅವರಿಗೆ ನೀಡಲಾಗಿರುವ ನಿವಾಸಗಳಲ್ಲಿ ಕಡ್ಡಾಯವಾಗಿ ವಾಸಿಸಬೇಕು, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ಅಂತಹ ಪ್ರಕರಣಗಳನ್ನು ಹತ್ತಿಕುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಗಣಿ ಅಧಿಕಾರಿಗಳು ಹೆಚ್ಚಿನ ದಕ್ಷತೆಯಿಂದ ಕಾರ್ಯ ನಿರ್ವಹಿಸಿ, ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಗಣಿಗಾರಿಕೆ ಅಥವಾ ಭೂ ಸಂಪತ್ತನ್ನು ಲೂಟಿ ಮಾಡುವ ಪ್ರಕರಣಗಳು ದಾಖಲಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಿ, ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ಮಾತನಾಡಿ, ಮದ್ದೂರಿನ ಶಿಂಷಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂದು ಮಾಹಿತಿ ಇದೆ, ಪ್ರಸ್ತುತ 17 ಕ್ಕೂ ಹೆಚ್ಚು ಮರಳು ದಂಧೆ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಜಾರಿಗೊಳಿಸಲಾಗಿದೆ. ಗಣಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಆಕ್ರಮ ಮರಳು ಸಾಗಾಣಿಕೆಗೆ ತಿಲಾಂಜಲಿ ಬಿಡಬೇಕು ಎಂದರು.

ಅರಣ್ಯ ಪ್ರದೇಶದಲ್ಲಿ ಸೂಕ್ತ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಓಕ್ಕಲೆಬ್ಬಿಸದೆ ಸಾಧ್ಯವಾದಲ್ಲಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಇಂತಹ ಸೂಕ್ಷ್ಮ ಪ್ರಕರಣಗಳನ್ನು ಕಾನೂನು ದೃಷ್ಟಿಯ ಜೊತೆಗೆ ಮಾನವೀಯತೆಯಿಂದಲೂ ನೋಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಆಧಿಕಾರಿ ಪುಷ್ಪ, ಜಿಲ್ಲಾ ಅರಣ್ಯಾಧಿಕಾರಿ ರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X