ನಾಳೆ ಹೊಸದಿಲ್ಲಿಗೆ ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಪ್ರಯಾಣ

ಬೆಂಗಳೂರು : ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಹೊಸದಿಲ್ಲಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮ ಹಾಗೂ ಎಐಸಿಸಿ ವತಿಯಿಂದ ಆಯೋಜಿಸಿರುವ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಶುಕ್ರವಾರ(ಆ.1ರಂದು) ಸಂಜೆ ಆರು ಗಂಟೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‍ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮ ಆಯೋಜಿಸಲಾಗಿದೆ. ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ.
ಆ.2ರಂದು ಬೆಳಗ್ಗೆ 09.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ದೃಷ್ಟಿಕೋನ’ ಕುರಿತಾದ ವಿಚಾರ ಸಂಕಿರಣದಲ್ಲಿಯೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮತ್ತಿತರರ ವರಿಷ್ಠರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.







