Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದ್ಯುತ್ ಸರಬರಾಜು ಖಾಸಗೀಕರಣ ವಿಚಾರ:...

ವಿದ್ಯುತ್ ಸರಬರಾಜು ಖಾಸಗೀಕರಣ ವಿಚಾರ: ಸರಕಾರದ ಸಮ್ಮತಿ ಇಲ್ಲ, ಆಕ್ಷೇಪಣೆ ಸಲ್ಲಿಸಲು ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 July 2026 8:39 PM IST
share
ವಿದ್ಯುತ್ ಸರಬರಾಜು ಖಾಸಗೀಕರಣ ವಿಚಾರ: ಸರಕಾರದ ಸಮ್ಮತಿ ಇಲ್ಲ, ಆಕ್ಷೇಪಣೆ ಸಲ್ಲಿಸಲು ಸಿಎಂ ಸೂಚನೆ

ಬೆಂಗಳೂರು : ವಿದ್ಯುತ್ ಸರಬರಾಜು ಖಾಸಗೀಕರಣಕ್ಕೆ ರಾಜ್ಯ ಸರಕಾರ ಸಮ್ಮತಿ ಸೂಚಿಸಿಲ್ಲ. ಹಾಗಾಗಿ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಎಲ್ಲ ಎಸ್ಕಾಂಗಳು ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯುತ್ ವಿತರಣೆಯನ್ನು ಖಾಸಗಿಯವರಿಗೆ ನೀಡುವ ವಿಚಾರವಾಗಿ ಎಲ್ಲ ಎಸ್ಕಾಂಗಳು ತಮ್ಮ ಆಕ್ಷೇಪಣೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದೇನೆ ಎಂದರು.

ಈ ಹಿಂದೆ ಬಿಜೆಪಿ ಸರಕಾರ ವಿದ್ಯುತ್ ವಿಚಾರದಲ್ಲಿ ಖಾಸಗಿಯವರಿಗೆ ಪರವಾನಿಗೆ ಪಡೆಯಲು ಅವಕಾಶ ನೀಡಿತ್ತು. ಅದರ ಆಧಾರದ ಮೇಲೆ ಟಾಟಾ ಸಂಸ್ಥೆಯವರು ಅರ್ಜಿ ಹಾಕಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಈ ಬಗ್ಗೆ ತೀರ್ಮಾನ ಮಾಡಲಿದೆ. ನಮ್ಮ ಸರಕಾರದ ತೀರ್ಮಾನವನ್ನು ಎಸ್ಕಾಂಗಳಿಗೆ ತಿಳಿಸಲಾಗಿದೆ. ಖಾಸಗಿಯವರು ಸರಕಾರಕ್ಕೆ ಅರ್ಜಿ ಹಾಕಿಲ್ಲ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಹಾಕಿದ್ದಾರೆ. ಹೀಗಾಗಿ, ಆಯೋಗ ಎಸ್ಕಾಂಗಳಿಗೆ ತಿಳಿಸಿದ್ದು, ಎಸ್ಕಾಂಗಳು ನಮ್ಮ ಬಳಿ ಚರ್ಚೆ ಮಾಡಿರುವ ಹಿನ್ನೆಲೆಯಲ್ಲಿ ಇದಕ್ಕೆ ನಮ್ಮ ಸಹಮತವಿಲ್ಲ ಎಂದು ತಿಳಿಸಿ ಎಂದು ಎಸ್ಕಾಂಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಆ.15ರವರೆಗೆ ಅವಕಾಶ: ಒಸಿ ಸಿಸಿ ಸಂಬಂಧಿಸಿದಂತೆ ವಿನಾಯಿತಿ ನೀಡಬೇಕು ಎಂದು ರಾಜ್ಯದ ಎಲ್ಲ ಕಡೆಗಳಿಂದ ಮನವಿ ಬಂದಿತ್ತು. ಇದಕ್ಕೆ ನಾವು ಅವಕಾಶ ಕಲ್ಪಿಸಿದ್ದೆವು. ಆದರೆ ಕೆಲವರು ನಾವು ಕಟ್ಟಡ ನಿರ್ಮಾಣ ಮಾಡಿದ್ದು, ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಹಾಕಿಲ್ಲ ಎಂದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ, ಯಾರೆಲ್ಲಾ ವಸತಿ ಕಟ್ಟಡ ನಿರ್ಮಾಣ ಮಾಡಿದ್ದಾರೆ, ಅವರ ದಾಖಲೆ, ಫೋಟೋಗಳೊಂದಿಗೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಹಾಕಲು ಆಗಸ್ಟ್ 15ರವರೆಗೆ ಅವಕಾಶ ಕಲ್ಪಿಸಿದ್ದೇವೆ ಎಂದು ಅವರು ಹೇಳಿದರು.

ವಾಣಿಜ್ಯ ಕಟ್ಟಡಗಳಿಗೂ ವಿನಾಯಿತಿ ನೀಡಿ ಎಂಬ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇಕಾದಷ್ಟು ಬೇಡಿಕೆಗಳು ಇರುತ್ತವೆ. ಆದರೆ ನಾನು ಸುಪ್ರೀಂ ಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಲ್ಲವೇ ಎಂದು ತಿಳಿಸಿದರು.

Tags

Chief Minister DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X