ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

PC : x/@DKShivakumar
ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ.ಶಿವಕುಮಾರ್ ಅವರು ಇಂದು(ಗುರುವಾರ) ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಸೌಕರ್ಯ, ಹೂಡಿಕೆ, ನಗರಾಭಿವೃದ್ಧಿ ಮತ್ತು ಸಾರಿಗೆ ವ್ಯವಸ್ಥೆ ಸುಧಾರಣೆ ಕುರಿತು ಚರ್ಚಿಸಲಾಗಿದೆ. ಕೃಷಿ ವಲಯದ ಪ್ರಗತಿಗೆ ಪೂರಕವಾದ ನೀರಾವರಿ ಯೋಜನೆಗಳು ಹಾಗೂ ತಂತ್ರಜ್ಞಾನ ಆಧಾರಿತ ನಾವೀನ್ಯತೆಗಳಿಗೆ ಒತ್ತು ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
Next Story






