Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಎಸ್‌ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ...

ಜಿಎಸ್‌ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನಗಳಿಸಲು ಪ್ರಯತ್ನಿಸಿ; ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

"ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ"

ವಾರ್ತಾಭಾರತಿವಾರ್ತಾಭಾರತಿ17 May 2025 4:25 PM IST
share
ಜಿಎಸ್‌ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನಗಳಿಸಲು ಪ್ರಯತ್ನಿಸಿ; ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು.

ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ :

ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು.

ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು :

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿನಿಗದಿಪಡಿಸಲಾಗಿದ್ದು, ಹೆಚ್ಚುವರಿ 17000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ. ಈ ವರ್ಷ 409000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ ಎಂದರು.

ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರಕಾರ ಬದ್ಧ :

ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮದ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರಕಾರ ಪರಿಶೀಲಿಸಲಾಗುವುದು. ಸರಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರಕಾರ ತೆಗೆದುಕೊಳ್ಳುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X